​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

Date:

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ ಪ್ರಾಂಶುಪಾಲ ಈಶ್ವರ್ ರೆಡ್ಡಿ ವಿರುದ್ಧ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ ಎಸಗಿರುವ ಆರೋಪ ಮಾಡಿದ್ದಾಳೆ.

- Advertisement -

​ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ಬರೆದಿರುವ ಹಸ್ತಪ್ರತಿ ಬೆಳಕಿಗೆ ಬಂದಿದ್ದು,ಪ್ರಾಂಶುಪಾಲ ಈಶ್ವರ್ ರೆಡ್ಡಿ ಶನಿವಾರದಿಂದ ತನ್ನ ಮೇಲೆ ಕೃತ್ಯ ಎಸಗುತ್ತಿರುವುದಾಗಿ ಮತ್ತು ಅಸಭ್ಯವಾಗಿ ನಡೆದುಕೊಂಡಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾಳೆ.ಅಲ್ಲದೆ, ಈ ಘಟನೆಯಿಂದ ತೀವ್ರ ಮನನೊಂದಿದ್ದು,ತನಗೆ ನ್ಯಾಯ ದೊರಕಿಸಿಕೊಡಬೇಕು ಹಾಗೂ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ವಿನಂತಿಸಿಕೊಂಡಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

​ಈ ಘಟನೆ ಸ್ಥಳೀಯವಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು,ವಿವಿಧ ಸಂಘ-ಸಂಸ್ಥೆಗಳು ಮತ್ತು ಸಾರ್ವಜನಿಕರು ಶಾಲೆಯ ಪ್ರಾಂಶುಪಾಲ ಈಶ್ವರ್ ರೆಡ್ಡಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಆತನಿಗೆ ತಕ್ಕ ಶಿಕ್ಷೆ ವಿಧಿಸಬೇಕೆಂದು ತೀವ್ರವಾಗಿ ಒತ್ತಾಯಿಸಿದ್ದಾರೆ.

​ವಿದ್ಯಾರ್ಥಿನಿಗೆ ತಕ್ಷಣವೇ ನ್ಯಾಯ ಒದಗಿಸಬೇಕು ಮತ್ತು ಈ ರೀತಿಯ ಘಟನೆಗಳು ಮರುಕಳಿಸದಂತೆ ವಸತಿ ಶಾಲೆಯ ಹೆಣ್ಣುಮಕ್ಕಳಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಹಾಗೂ ಪೋಷಕರು ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ..?ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

Advertisements

ಘಟನೆ ಕುರಿತು ದಿಬ್ಬುರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....

ಯಾದಗಿರಿ | ₹2,500 ಬೆಳೆನಷ್ಟ ಪರಿಹಾರ ರೈತರ ನೋವಿಗೆ ಅವಮಾನ: ಭೀಮರಾಯ ಎಲ್ಹೇರಿ

ರಾಜ್ಯ ಸರ್ಕಾರ ರೈತರ ಬೆಳೆನಷ್ಟಕ್ಕೆ ಕೇವಲ ₹2,500 ಪರಿಹಾರ ಘೋಷಿಸಿರುವುದು ರೈತರ...

ಕಲಬುರಗಿ | ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಅನುಮಾನಾಸ್ಪದ ಸಾವು!

ವರದಕ್ಷಿಣೆ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ...

ಕೊಡಗಿನಲ್ಲಿ ‘SIR’ ಪಬ್ಲಿಕ್ ಹಿಯರಿಂಗ್: ‘ಮತದಾನದ ಹಕ್ಕು ಕಸಿಯುವುದು ಅಷ್ಟು ಸುಲಭವಲ್ಲ’ -ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಎದುರಾಗುತ್ತಿರುವ ಸಮಸ್ಯೆಗಳು,...