ಚಿಕ್ಕಬಳ್ಳಾಪುರ ತಾಲೂಕಿನ ಸೆಟ್ಟು ದಿನ್ನೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಟಾಟಾ ಸುಮೋ ನಡುವೆ ನಡೆದ ಭೀಕರ ಅಪಘಾತದಿಂದಾಗಿ ಮೂವರು ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ರಜಿಯಾ ಶಾಹಿನ್(50), ಮೆಹಮುದಿಲ್(43) ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೌಲಾನ ಶಾಹಿದ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಉಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಓವರ್ ಟೇಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತಕ್ಕೀಡಾದವರು ಬಿಹಾರ ಮೂಲದವರಾಗಿದ್ದು, ಕೋಲಾರದ ದರ್ಗಾವೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ. ಇಂದು ಕುಟುಂಬ ಸಮೇತರಾಗಿ ಕೋಲಾರದಿಂದ ಪೆನುಗೊಂಡ ಕಡೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಇದನ್ನು ಓದಿದ್ದೀರಾ? ದಾವಣಗೆರೆ | ಪ್ರಚೋದನಾತ್ಮಕ ಹೇಳಿಕೆ: ಸಂಘಪರಿವಾರದ ಮುಖಂಡ ಸತೀಶ್ ಪೂಜಾರಿ ಬಂಧನ
ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
