ಚಿಕ್ಕಬಳ್ಳಾಪುರ | ಐಪಿಎಲ್ ಸಂಭ್ರಮಾಚರಣೆ ವೇಳೆ ಗಲಾಟೆ; ಅಟ್ಟಾಡಿಸಿ ಯುವಕನ ಹತ್ಯೆ

Date:

ಚಿಕ್ಕಬಳ್ಳಾಪುರದಲ್ಲಿ ಮಂಗಳವಾರ ತಡರಾತ್ರಿ ಯುವಕನನ್ನು ಅಟ್ಟಾಡಿಸಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಐಪಿಎಲ್ ಸಂಭ್ರಮಾಚರಣೆ ವೇಳೆ ನಡೆದ ಗಲಾಟೆ ಯುವಕನ ಹತ್ಯೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

- Advertisement -

ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯ ಅಂಗಡಿಯೊಂದರ ಬೇಸ್​ಮೆಂಟ್​ನಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ಯುವಕ ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ಕಾಲೊನಿಯ ಶ್ರೀಕಾಂತ್ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮೃತದೇಹ ಪತ್ತೆಯಾಗಿರುವ ಸ್ಥಳದ ಹಿಂದಿನ ರಸ್ತೆಯಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದು, ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಬೇರೆ ಸ್ಥಳದಲ್ಲಿ ಎಸೆದು ಹೋಗಿದ್ದಾರೆಂಬುದು ಪೊಲೀಸ್​ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ ಯುವಕನಿಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ವೆಲ್ಡಿಂಗ್ ಕೆಲಸ ಮಾಡುತ್ತಿದ್ದ. ಕಳೆದ ರಾತ್ರಿ ಮನೆಗೆ ಬಂದಿರಲಿಲ್ಲ, ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾನೆ.

ಈ ಸುದ್ದಿ ಓದಿದ್ದೀರಾ? ತೀವ್ರ ಸ್ವರೂಪ ಪಡೆಯುತ್ತಿರುವ ʼಹೇಮಾವತಿʼ ಹೋರಾಟ; ಎಸ್ಪಿ ಕಚೇರಿ ಮುಂದೆ ಬಿಜೆಪಿ ಶಾಸಕರ ಧರಣಿ

ಸ್ಥಳಕ್ಕೆ ‌ಚಿಕ್ಕಬಳ್ಳಾಪುರ ಎಸ್​ಪಿ ಕುಶಾಲ್ ಚೌಕ್ಸೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಕಟ್ಟಡ ಬೇಸ್​ಮೆಂಟ್​ನಲ್ಲಿ ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ. ಶವದ ಗುರುತು ಪತ್ತೆಯಾಗಿದ್ದು, 29 ವರ್ಷದ ಶ್ರೀಕಾಂತ್ ಎಂದು ತಿಳಿದುಬಂದಿದೆ. ಶವದ ಪಕ್ಕದಲ್ಲಿ ಕಲ್ಲು ಪತ್ತೆಯಾಗಿದೆ. ಇದರಿಂದ ಕಲ್ಲಿನಿಂದ ಜಜ್ಜಿ ಸಾಯಿಸಿರುವುದು ಕಂಡುಬರುತ್ತದೆ. ಸಾಕ್ಷ್ಯಾಧಾರಗಳನ್ನು ಕಲೆ ಹಾಕಲಾಗಿದೆ. ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮರಾಗಳ ದೃಶ್ಯಗಳನ್ನು ಪರಿಶೀಲನೆ ಮಾಡಲಾಗಿದೆ. ಮರಣೋತ್ತರ ಪರೀಕೆಗೆ ಶವವನ್ನು ಕಳುಹಿಸಲಾಗಿದೆ. ಶೀಘ್ರವೇ ಆರೋಪಿಗಳ ಪತ್ತೆ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...