ಚಿಕ್ಕಬಳ್ಳಾಪುರ | ರಸೀದಿಯಿಲ್ಲದೇ ಆಭರಣಗಳ ಸಾಗಾಟ-ಮಾರಾಟ ಮಾಡುವಂತಿಲ್ಲ: ಜಿಲ್ಲಾಧಿಕಾರಿ

Date:

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಜ್ಯೂವೆಲರಿ ಮಾಲೀಕರು ಮತ್ತು ಗಿರವಿ ದಲ್ಲಾಳಿಗಳು ರಸೀದಿ ಇಲ್ಲದೆ ಯಾವುದೇ ಆಭರಣಗಳನ್ನು ಮಾರಾಟ ಮತ್ತು ಸಾಗಾಟ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸೂಚನೆ ನೀಡಿದರು.

- Advertisement -

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ (ಮಾ.14) ಜ್ಯೂವೆಲರಿ ಮಾಲೀಕರು ಮತ್ತು ಗಿರವಿ ದಲ್ಲಾಳಿಗಳೊಂದಿಗೆ ನಡೆದ ಚುನಾವಣಾ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಜ್ಯೂವೆಲರಿ ಮಾಲೀಕರು ಮತ್ತು ಗಿರವಿ ದಲ್ಲಾಳಿಗಳು ತಮ್ಮ ದೈನಂದಿನ ವಹಿವಾಟುಗಳಲ್ಲಿ ಅನಧಿಕೃತ ರಾಜಕೀಯ ಸಂಬಂಧಿತ ಯಾವುದೇ ಕೆಲಸಗಳಲ್ಲಿ ತೊಡಗಿಸಿಕೊಳ್ಳುವಂತಿಲ್ಲ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಲೋಕಸಭೆ ಸಾರ್ವತ್ರಿಕ ಚುನಾವಣೆ -2024 ಕ್ಕೆ ಸಂಬಂಧಿಸಿದಂತೆ ಚುನಾವಣೆ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜಿಲ್ಲೆಯಲ್ಲಿ ಚುನಾವಣೆಯನ್ನು ನ್ಯಾಯಸಮ್ಮತವಾಗಿ ಚುನಾವಣೆ ನಡೆಸಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಜ್ಯೂವೆಲರಿ ಮಾಲೀಕರು ಮತ್ತು ಗಿರವಿ ದಲ್ಲಾಳಿಗಳು (ಪಾನ್ ಬ್ರೋಕರ್ಸ್) ತಮ್ಮ ವ್ಯಾಪ್ತಿಯಲ್ಲಿ ಆಭರಣಗಳ ದೈನಂದಿನ ವಹಿವಾಟಿಗೆ ಸಂಬಂಧಿಸಿ ಯಾವುದೇ ಅನಧಿಕೃತ ರಾಜಕೀಯ ಸಂಬಂಧಿತ ಕೆಲಸಗಳಲ್ಲಿ ಭಾಗಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ಸದ್ಯದಲ್ಲೇ ಚುನಾವಣೆ ನೀತಿ ಸಂಹಿತೆ ಜಾರಿಯಾಗುವುದರಿಂದ ಜಿಲ್ಲೆಯ ಎಲ್ಲಾ ಜ್ಯೂವೆಲರಿ ಮಾಲೀಕರು ಮತ್ತು ಗಿರವಿ ದಲ್ಲಾಳಿಗಳು ಯಾವುದೇ ರೀತಿಯ ಭಾರಿ ಮೊತ್ತದ ಅನಧಿಕೃತ ವಸ್ತುಗಳ ಅಕ್ರಮ ಸಂಗ್ರಹಣೆ, ಸಾಗಾಟ, ಮಾರಾಟ ಮಾಡುವಂತಿಲ್ಲ. ಅಕ್ರಮ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದಲ್ಲಿ ಸಂಬಂಧಿಸಿದವರ ವಿರುದ್ದ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಅತಿ ಹೆಚ್ಚು ಹಣವನ್ನು ಪಡೆದುಕೊಂಡಲ್ಲಿ, ಅನಧಿಕೃತ ವ್ಯವಹಾರಗಳಿಗೆ ಯಾರಾದರೂ ಪ್ರೆರೇಪಿಸಲಿದ್ದಲ್ಲಿ ಕೂಡಲೇ ಸಂಬಂಧಪಟ್ಟ ಸಹಾಯಕ ಚುನಾವಣಾಧಿಕಾರಿಗಳಿಗೆ ಮಾಹಿತಿ ತಿಳಿಸಬೇಕು. ಒಟ್ಟಾರೆ, ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯನ್ನು ನ್ಯಾಯಸಮ್ಮತವಾಗಿ, ಪಾರದರ್ಶಕವಾಗಿ ನಡೆಸಲು ತಾವೆಲ್ಲರೂ ಮುಂದೆ ಬರುವ ʼಚುನಾವಣಾ ನೀತಿ ಸಂಹಿತೆʼಯನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕು ಎಂದು ಮನವಿ  ಮಾಡಿದರು.

ಸಭೆಯಲ್ಲಿ ಜಿಪಂ ಸಿಇಒ ಪ್ರಕಾಶ್ ಜಿ.ಟಿ ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ. ಎನ್.ತಿಪ್ಪೇಸ್ವಾಮಿ, ಚುನಾವಣಾ ತಹಸೀಲ್ದಾರ್ ಮುನಿಸ್ವಾಮಿರೆಡ್ಡಿ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲೆಯ ಜ್ಯೂವೆಲರಿ ಮಾಲೀಕರು ಮತ್ತು ಗಿರವಿ ದಲ್ಲಾಳಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...