ಚಿಕ್ಕಬಳ್ಳಾಪುರ | ಇನ್‌ಪೆಕ್ಟರ್ ತಪ್ಪಿಗೆ ಸಿಬ್ಬಂದಿ ತಲೆದಂಡ: ಎಸ್‌ಪಿ ನಾಗೇಶ್ ಅಮಾನತಿಗೆ ಆಗ್ರಹ

Date:

ಸಮಸ್ಯೆ ಹೇಳಿಕೊಂಡು ಬಂದ ಪರಿಶಿಷ್ಟರನ್ನು ನಿಂದಿಸಿ, ಜಾತೀಯತೆ ಮೆರೆದಿರುವ ಚಿಕ್ಕಬಳ್ಳಾಪುರ ಎಸ್‌ಪಿ ನಾಗೇಶ್ ಅವರನ್ನು ಅಮಾನತು ಮಾಡಬೇಕು. ಅವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಬೇಕು ಎಂದು ಅಹಿಂದ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಹರಿರಾಮ್ ಒತ್ತಾಯಿಸಿದ್ದಾರೆ.

- Advertisement -

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಸಾಂವಿಧಾನಿಕವಾಗಿ ನೇಮಕಗೊಂಡು ಅಧಿಕಾರದ ಗದ್ದುಗೆ ಏರುವ ಮೇಲಾಧಿಕಾರಿಗಳೇ ಜಾತೀಯತೆ ಆಚರಣೆ ಮಾಡಿದರೆ, ತಳವರ್ಗದ ಜನರ ಪಾಡು ಏನಾಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಪ್ರಕರಣವೊಂದರಲ್ಲಿ ಇನ್ಸ್‌ಪೆಕ್ಟರ್ ಅವರನ್ನು ರಕ್ಷಿಸಲು ಸಿಬ್ಬಂದಿಗಳ ತಲೆದಂಡ ಮಾಡುತ್ತಿದ್ದಾರೆ. ಇಬ್ಬರು ಪೇದೆಗಳನ್ನು 6 ತಿಂಗಳ ಕಾಲ ಅಮಾನತು ಮಾಡಿ ಮಾನಸಿಕ ಹಿಂಸೆ ಕೊಟ್ಟಿದ್ದಾರೆ. ಇದನ್ನು ಕೇಳಲು ಹೆಣ್ಣುಮಕ್ಕಳು ಎಸ್‌ಪಿ ಕಚೇರಿಗೆ ಹೋದಾಗ ಅವರ ವಿರುದ್ಧವೂ ಪ್ರಕರಣ ದಾಖಲಿಸುವುದಾಗಿ ನಾಗೇಶ್‌ ಬೆದರಿಕೆ ಹಾಕಿದ್ದಾರೆ. ಜಾತಿ ನಿಂದನೆ ಮಾಡಿದ್ದಾರೆ. ಅಧಿಕಾರಿಗಳ ದುರ್ವರ್ತನೆ ಖಂಡನೀಯ” ಎಂದರು.

“ದಿಬ್ಬೂರಹಳ್ಳಿ ಠಾಣೆಯ ಇನ್ಸ್‌ಪೆಕ್ಟರ್ ರವಿಕುಮಾರ್ ಹಣ ಬದಲಾವಣೆ ಪ್ರಕರಣದ ಆರೋಪಿಗಳನ್ನು 3 ದಿನಗಳ ಕಾಲ ಅಕ್ರಮವಾಗಿ ಬಂಧನದಲ್ಲಿಟ್ಟುಕೊಂಡಿದ್ದರು. ಅದು ದೊಡ್ಡ ಅಪರಾಧ. ಇದು ಬೆಳಕಿಗೆ ಬಂದ ಬಳಿಕ, ಇನ್ಸ್‌ಪೆಕ್ಟರ್‍‌ನನ್ನು ರಕ್ಷಿಸಲು ಮುಖ್ಯಪೇದೆ ನರಸಿಂಹ ಮೂರ್ತಿ ಹಾಗೂ ಪೇದೆ ಅಶೋಕ್ ಎಂಬುವರನ್ನು ಅಮಾನತು ಮಾಡಲಾಗಿದೆ” ಎಂದು ದೂರಿದ್ದಾರೆ.

“ಅಕ್ರಮವಾಗಿ ಬಂಧನದಲ್ಲಿಟ್ಟಿದ್ದ ಇನ್ಸ್‌ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳಬೇಕು. ಇನ್ಸ್‌ಪೆಕ್ಟರ್ ವಿರುದ್ಧ ಪ್ರಕರಣ ದಾಖಲಿಸಿದಂತೆ ದಲಿತರನ್ನು ಜಾತಿ ನಿಂದನೆ ಮಾಡಿದ ಎಸ್‌ಪಿ ವಿರುದ್ಧವೂ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಭಾಸ್ಕರ ಪ್ರಸಾದ್, ದಲಿತ್ ರಮೇಶ್, ಜನಾರ್ದನ, ನಾಗೇಶ್ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...