ಚಿಕ್ಕಬಳ್ಳಾಪುರ | ಡಾ.ಕೆ.ಸುಧಾಕರ್‌ ಫೌಂಡೇಶನ್‌ನಿಂದ ಪ್ರತಿ ವಿದ್ಯಾರ್ಥಿಗೆ 5,000 ರೂ. ಸಹಾಯ: ಸಂಸದ ಡಾ.ಕೆ.ಸುಧಾಕರ್‌

Date:

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡಲು ಮುಂದಾಗಿರುವ ಸಂಸದ ಡಾ.ಕೆ.ಸುಧಾಕರ್‌, ʼಜ್ಞಾನಸುಧಾʼ ಹೆಸರಿನ ವಿದ್ಯಾರ್ಥಿವೇತನ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಡಾ.ಕೆ.ಸುಧಾಕರ್‌ ಫೌಂಡೇಶನ್‌ ಮತ್ತು ಶ್ರೀ ಸಾಯಿಕೃಷ್ಣ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ಜೂನ್‌ 27 ರಂದು ನಾಡಪ್ರಭು ಕೆಂಪೇಗೌಡ ಜಯಂತಿಯ ದಿನದಂದು ಸಂಜೆ 4 ಗಂಟೆಗೆ ಹೂ ಮಾರುಕಟ್ಟೆಯ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವಿದ್ಯಾರ್ಥಿಗಳಿಗೆ ʼಜ್ಞಾನಸುಧಾʼ ಹೆಸರಿನ ವಿದ್ಯಾರ್ಥಿವೇತನ ವಿತರಿಸಲಾಗುತ್ತಿದೆ ಎಂದು ಸಂಸದ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಸದ ಡಾ.ಕೆ.ಸುಧಾಕರ್‌, ಈಗ ಸರ್ಕಾರಿ ಕಾಲೇಜುಗಳಲ್ಲೂ ಶುಲ್ಕ ಅಧಿಕವಾಗಿದೆ. ಆದ್ದರಿಂದ ವಿದ್ಯಾರ್ಥಿಗಳಿಗೆ ಶುಲ್ಕ ನೀಡುವುದು ಸೂಕ್ತ ಎಂದು ಕೆಲವರು ಸಲಹೆ ನೀಡಿದ್ದಾರೆ. ಅದಕ್ಕಾಗಿ ʼಜ್ಞಾನಸುಧಾʼ ಹೆಸರಿನ ವಿದ್ಯಾಥಿವೇತನ ನೀಡಲು ತೀರ್ಮಾನಿಸಲಾಗಿದೆ. ಈವರೆಗೆ 9 ಸಾವಿರಕ್ಕೂ ಅಧಿಕ ಅರ್ಜಿಗಳು ಬಂದಿವೆ. ಜೂನ್‌ 20 ರಂದು ಕೊನೆಯ ದಿನಾಂಕವಾಗಿದ್ದು, ಆ ಬಳಿಕ ಅರ್ಹರನ್ನು ಗುರುತಿಸಲಾಗುತ್ತದೆ. ಪಿಯುಸಿ, ಪದವಿ, ಸ್ನಾತಕೋತ್ತರ, ವಿದ್ಯಾರ್ಥಿಗಳಿಗೆ ತಲಾ 5,000 ರೂ. ನೀಡಲಾಗುವುದು. ಇದೇ ದಿನ ಜನಪ್ರಿಯ ಕಲಾವಿದರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳು ಈ ನೆರವನ್ನು ಸದ್ಬಳಕೆ ಮಾಡಬೇಕು. ಉನ್ನತ ಶಿಕ್ಷಣ ಪಡೆದು ಉತ್ತಮ ಉದ್ಯೋಗ ಪಡೆಯಬೇಕು. ಈ ಭಾಗದ ವಿದ್ಯಾರ್ಥಿಗಳು ಎತ್ತರಕ್ಕೆ ಬೆಳೆಯಲು ಈ ವಿದ್ಯಾರ್ಥಿವೇತನ ಸಹಾಯವಾಗುತ್ತದೆ ಎಂದರು.

- Advertisement -

ನಾನು ರಾಜಕೀಯಕ್ಕೆ ಬರುವ ಮೊದಲೇ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೆ. ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ನಾನು ಹೆಚ್ಚು ಒತ್ತು ನೀಡಿದ್ದೇನೆ. ಯಾವುದೇ ಧರ್ಮ, ಜಾತಿಗಳ ತಾರತಮ್ಯವಿಲ್ಲದೆ ಅನುಕೂಲ ಕಲ್ಪಿಸಿಕೊಡುತ್ತಿದ್ದೇನೆ. ಯಾರು ನನಗೆ ಮತ ನೀಡಿದ್ದಾರೆ ಎಂದು ನೋಡದೆಯೇ ಸಮಾಜ ಕಲ್ಯಾಣ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. 2008 ರಿಂದ ಆರಂಭವಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ನೋಟ್‌ಪುಸ್ತಕ, ಬಸ್‌ಪಾಸ್‌ ಮೊದಲಾದ ಸೌಲಭ್ಯ ನೀಡಲಾಗಿದೆ. ನಾನು ಶಾಸಕನಾಗಿದ್ದಾಗ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ 3,000 ಮಹಿಳಾ ಸಂಘಗಳ ರಚನೆ, 300 ಕೋಟಿ ರೂ. ಬಡ್ಡಿ ರಹಿತ ಸಾಲ ವಿತರಣೆ ಮಾಡಲಾಗಿದೆ. ಗ್ರಾಮೀಣ ಮಹಿಳೆಯರಿಗೆ ಕ್ರೀಡೆಗಳಿಗೆ ಸ್ಪೂರ್ತಿ ನೀಡಲಾಗಿದೆ. ಡಾ.ಕೆ.ಸುಧಾಕರ್‌ ಫೌಂಡೇಶನ್‌ ಹಾಗೂ ಸಾಯಿಕೃಷ್ಣ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ಕುಕ್ಕರ್‌, ಮಿಕ್ಸರ್‌, ರೆಫ್ರಿಜರೇಟರ್‌, ಟಿವಿ ನೀಡಲಾಗಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ಉಜ್ವಲ ಯೋಜನೆಯಡಿ ಉಚಿತ ಅಡುಗೆ ಅನಿಲ ನೀಡಿದಂತೆಯೇ, ಕ್ಷೇತ್ರದಲ್ಲಿ 75 ಸಾವಿರ ಕುಟುಂಬಕ್ಕೆ ಅಡುಗೆ ಸ್ಟೌವ್‌ ನೀಡಲಾಗಿದೆ. ಕೋವಿಡ್‌ ಸಮಯದಲ್ಲಿ ಆಶಾ ಕಾರ್ಯಕರ್ತೆಯರಿಗೆ ಫೌಂಡೇಶನ್‌ನಿಂದ ಪ್ರತಿ ತಿಂಗಳು 2 ವರ್ಷಗಳವರೆಗೆ 5,000 ರೂ. ನೀಡಲಾಗಿತ್ತು. 75 ಸಾವಿರ ಕುಟುಂಬಕ್ಕೆ 2 ವರ್ಷಗಳ ಕಾಲ ದಿನಸಿ ಕಿಟ್‌ ನೀಡಲಾಗಿತ್ತು. ಚಿಕ್ಕಬಳ್ಳಾಪುರ ಜಿಲ್ಲೆಯ ಜನರಿಗೆ ಬೆಂಗಳೂರಿನ ಎರಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲು ಹಾಸಿಗೆ ಮೀಸಲಿಡಲಾಗಿತ್ತು. ಅದೇ ಸಮಯದಲ್ಲಿ ಬೃಹತ್‌ ಆರೋಗ್ಯ ಶಿಬಿರ ಏರ್ಪಡಿಸಿದ್ದು, ಅದು ಜಗತ್ತಿನ ಅತಿ ದೊಡ್ಡ ಆರೋಗ್ಯ ಶಿಬಿರ ಎಂದು ಹೆಸರಾಗಿತ್ತು. ಬಳಿಕ ಕೂಡ 2 ಸಾವಿರ ರೋಗಿಗಳಿಗೆ ಮುಂದುವರಿದ ಚಿಕಿತ್ಸೆ ನೀಡಿ ಅದಕ್ಕೆ ಬೇಕಾದ ಆರ್ಥಿಕ ನೆರವು ನೀಡಲಾಗಿತ್ತು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು:...

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ ನೆರವು ಅಗತ್ಯವಾಗುತ್ತದೆ. ಈ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಮುಂದೆ ಸಮಗ್ರವಾಗಿ ಪ್ರಸ್ತಾಪಿಸಿ ಪರಿಹಾರಕ್ಕೆ ಒತ್ತಾಯಿಸುವ ಜವಾಬ್ದಾರಿ ಆಯಾ ಕ್ಷೇತ್ರದ ಜನಪ್ರತಿನಿಧಿಗಳ...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

ಜಿಲ್ಲೆಯಲ್ಲಿ ಧಾರ್ಮಿಕ ಪರಂಪರೆಯನ್ನು ಕಾಪಾಡಲು ಓಂ ಶಕ್ತಿ ಸಂಘಗಳಿಗೆ ನೆರವು, ಗಣೇಶ ಮೂರ್ತಿ ಖರೀದಿಗೆ ಸಹಾಯ, ಮುಸ್ಲಿನರಿಗೆ ರಮ್‌ಜಾನ್‌ ಕಿಟ್‌, ಕ್ರೈಸ್ತರಿಗೆ ಕ್ರಿಸ್‌ಮಸ್‌ ಕಿಟ್‌ ನೀಡಲಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಫೌಂಡೇಶನ್‌ನಿಂದಲೇ 60 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನೀಡಿದ್ದು, ಗ್ರಾಮೀಣ ಜನರು ನೀರು ಸೇವಿಸುತ್ತಿದ್ದಾರೆ. ಮುಂದಿನ ಎರಡು ವರ್ಷಗಳಲ್ಲಿ ಪ್ರತಿ ಗ್ರಾಮದಲ್ಲೂ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿಕೊಡುತ್ತೇನೆ ಎಂದರು.

ಇದನ್ನು ಓದಿದ್ದೀರಾ..? ಕೋಲಾರ | ಕೋರ್ಟ್ ವೃತ್ತದಿಂದ ಕೋಲಾರಮ್ಮ ದೇವಾಲಯದ ವರೆಗೆ 1.23 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ: ಎಂ.ಎಲ್ ಅನಿಲ್ ಕುಮಾರ್

ಚಿಕ್ಕಬಳ್ಳಾಪುರ ಮೆಡಿಕಲ್‌ ಕಾಲೇಜು, ಮಂಚೇನಹಳ್ಳಿ ತಾಲೂಕು ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಿಸಲಾಗಿದೆ. ಸಂಸದನಾದ ಬಳಿಕ ತಲಾ 65 ಲಕ್ಷ ರೂ. ವೆಚ್ಚದ 23 ಆರೋಗ್ಯ ಮಂದಿರಗಳನ್ನು ಜಿಲ್ಲೆಗೆ ತಂದಿದ್ದೇನೆ ಎಂದು ತಿಳಿಸಿದರು. ಈ ಸಂದರ್ಬದಲ್ಲಿ ಜಿಲ್ಲಾಪಂಚಾಯತಿ ಮಾಜಿ ಅಧ್ಯಕ್ಷ ಕೇಶವರೆಡ್ಡಿ, ಚಿಮುಲ್ ನಿರ್ದೇಶಕ ಕೆ.ವಿ.ನಾಗರಾಜ್, ಬಿಎಂಟಿಸಿ ಮಾಜಿ ಉಪಾಧ್ಯಕ್ಷ ಕೆ.ವಿ.ನವೀನ್ ಕಿರಣ್, ನಗರಸಭೆ ಮಾಜಿ ಅಧ್ಯಕ್ಷ ಗಜೇಂದ್ರ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಗರಗರೆಡ್ಡಿ, ರಾಮಸ್ವಾಮಿ, ಮುದ್ದೇನಹಳ್ಳಿ ಶಿವಕುಮಾರ್ ಮತ್ತು ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವೃತ್ತಿ ಕೌಶಲ್ಯಕ್ಕೆ ಗೌರವ ಸಲ್ಲಿಸುವ ದಿನವೇ ವಿಶ್ವಕರ್ಮ ಜಯಂತಿ: ಡಾ. ಔದ್ರಾಮ್

ಭಾರತೀಯ ಪರಂಪರೆಯಲ್ಲಿ ವಿಶ್ವಕರ್ಮರಿಗೆ ವಿಶಿಷ್ಟ ಸ್ಥಾನವಿದೆ. ದೇವಶಿಲ್ಪಿಯಾಗಿ ಪರಿಗಣಿಸಲ್ಪಡುವ ವಿಶ್ವಕರ್ಮರು ತಮ್ಮ...

ಹಾವೇರಿ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಬ್ಯಾಂಕ್ ಮತ್ತು ಕೈಗಡ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾದ ಘಟನೆ...

ವಿಜಯಪುರ | ಕೇಂದ್ರದ UPI ಶುಲ್ಕ ನೀತಿ ಮರುಪರಿಶೀಲನೆಗೆ ಭೋಗೇಶ್ ಸೋಲಾಪುರ ಆಗ್ರಹ

ರೂ. 2,000ಕ್ಕಿಂತ ಹೆಚ್ಚಿನ ಕೆಲವು UPI ವ್ಯಾಪಾರಿ ವಹಿವಾಟುಗಳಿಗೆ Merchant Discount...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ, 13 ವರ್ಷಗಳಿಂದ ಬೀದಿಯಲ್ಲೇ ಬದುಕು!

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು...