ಚಿಕ್ಕಬಳ್ಳಾಪುರದ ಕಾಲೇಜು ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ತಿತಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ.
ಚಿಕ್ಕಬಳ್ಳಾಪುರದ ನಾಗಾರ್ಜುನ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಪ್ರೀತಿ (21) ಮೃತ ದುರ್ದೈವಿ. ಮೂಲತಃ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಯಲ್ಲೂರು ಗ್ರಾಮದ ಪ್ರೀತಿ, ಕಾಲೇಜಿನ ಹಾಸ್ಟೆಲ್‌ನಲ್ಲಿ ಉಳಿದುಕೊಂಡು ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಬುಧವಾರ ಬೆಳಗ್ಗೆ ಕಾಲೇಜಿನ ವಸತಿನಿಲಯದ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆಯ ಸಾವಿಗೆ ಕಾರಣ ತಿಳಿದುಬಂದಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಹೇಳಿದೆ. ದೇವನಹಳ್ಳಿ ತಾಲೂಕಿನ ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪ್ರೀತಿ ಅವರ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.