ಚಿಕ್ಕಬಳ್ಳಾಪುರ | ಪರಿಸರ ಸಂರಕ್ಷಣೆ ಸಮುದಾಯದ ಅಸ್ತಿತ್ವಕ್ಕೆ ಅತ್ಯಾವಶ್ಯಕ: ರಾಜ್ಯ ಉಚ್ಛನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು

Date:

ಐದು ಕೊಟಿಗೂ ಹೆಚ್ಚು ಸಸಿಗಳನ್ನು ನೆಡುವ ಬೃಹತ್ ಕಾರ್ಯಕ್ರಮಕ್ಕೆ ಚಾಲನೆ ನೀಡಲು ನನಗೆ ಅತ್ಯಂತ ಸಂತೋಷವಾಗುತ್ತಿದೆ ಮತ್ತು ಇದು ನನಗೆ ಸಂದಿರುವ ಸೌಭಾಗ್ಯ ಎಂದು ರಾಜ್ಯ ಉಚ್ಛನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವಿಭುಬಕ್ರು ಅವರು ನುಡಿದರು.

- Advertisement -

ಅವರು ಶನಿವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ಸಸಿ ನೆಡುವ ಮೂಲಕ ಐದುಕೋಟಿ ಸಸಿಗಳನ್ನು ನೆಡುವ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಸಸಿ ನೆಡುವ ಕಾರ್ಯಕ್ರಮವನ್ನು ಕರ್ನಾಟಕ ಉಚ್ಛ ನ್ಯಾಯಾಲಯ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಚಿಕ್ಕಬಳ್ಳಾಪುರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಚಿಕ್ಕಬಳ್ಳಾಪುರ ಜಿಲ್ಲಾ ವಕೀಲರ ಸಂಘ, ಪ್ರಶಾಂತಿ ಬಾಲಮಂದಿರ ವಿಶ್ವಸ್ಥ ಮಂಡಳಿ, ವಂದೇಭಾರತ್ ಪ್ರತಿಷ್ಠಾನ ಮತ್ತು ದರೆ ಪ್ರತಿಷ್ಠಾನಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದು,ಈ ಎಲ್ಲಾ ಸಂಸ್ಥೆಗಳು ಹಮ್ಮಿಗೊಂಡಿರುವ ಈ ಮಹತ್ವಪೂರ್ಣ ಹಾಗೂ ಪವಿತ್ರ ಕಾರ್ಯಕ್ರಮವು ಸಮಾಜಕ್ಕೆ ಬಹಳ ಅತ್ಯಂತ ಪ್ರಯೋಜನಕಾರಿಯೆಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಪರಿಸರ ಸಂರಕ್ಷಣೆಯು ಕೇವಲ ಇಂದಿನ ಮಹತ್ವಕಾಂಕ್ಷಿ ಅಪೇಕ್ಷೆಯಾಗಿರದೆ ಅದು ಸಮಾಜದ ಹಾಗೂ ಸಮುದಾಯದ ಅಸ್ತಿತ್ವಕ್ಕೆ ಮೂಲಭೂತ ಅವಶ್ಯಕತೆಯಾಗಿದೆಯೆಂದು ಅವರು ನುಡಿದರು. ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರವು ಇತರ ಎಲ್ಲಾ ಸಮಾಜಮುಖಿ ಸಂಸ್ಥೆಗಳೊಂದಿಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಸಮಾಜಮುಖಿ ಕಾರ್ಯಕ್ರಮವನ್ನು ಹೃದಯಪೂರ್ವಕವಾಗಿ ಶ್ಲಾಘಿಸುವುದಾಗಿ ಅವರು ತಿಳಿಸಿದರು.

ವಾತಾವರಣದಲ್ಲಿನ ಬದಲಾವಣೆ, ನೈಸರ್ಗಿಕ ಸಂಪತ್ತಿನ ಇಳಿಕೆ ಹಾಗೂ ದಿನೇ ದಿನೇ ಹೆಚ್ಚುತ್ತಿರುವ ಜಲಕ್ಷಾಮಗಳು ಮುಂದಿನ ಪೀಳಿಗೆಗೆ ಒಂದು ಸವಾಲಾಗಿ ಪರಿಣಮಿಸುತ್ತವೆಯೆಂದು ಅಭಿಪ್ರಾಯಪಟ್ಟ ಅವರು ಈ ಎಲ್ಲಾ ಕೊರತೆಗಳನ್ನು ನೀಗಿಸುವಲ್ಲಿ ಸರ್ಕಾರದ ಕ್ರಮಗಳಷ್ಟೇ ಸಾಲದೆಂದು ಇದರಲ್ಲಿ ಜನತೆ ಸಹ ಕ್ರಿಯಾಶೀಲರಾಗಿ ಪಾಲ್ಗೊಳ್ಳುವ ಅಗತ್ಯವಿದೆಯೆಂದು ನುಡಿದರು.
ಗಾಳಿ, ನೀರು ಹಾಗೂ ಅರಣ್ಯ ಸಂಪತ್ತು ಪ್ರಕೃತಿಯ ಸಮತೋಲನವನ್ನು ಕಾಪಾಡುವಲ್ಲಿ ಮಹತ್ವಪೂರ್ಣ ಪಾತ್ರವನ್ನು ವಹಿಸುತ್ತದೆ. ಜೀವಿಗಳ ಅಸ್ತಿತ್ವಕ್ಕೆ ಗಾಳಿ, ನೀರು ಮತ್ತು ಜೈವಿಕ ವೈವಿಧ್ಯತೆಯು ಅತ್ಯಾವಶ್ಯಕವಷ್ಟೇ ಅಲ್ಲದೆ ಅದೇ ಬದುಕಿನ ಆಧಾರಸ್ಥಂಬವೆಂದು ಅವರು ತಿಳಿಸಿದರು.

ಭಾರತ ಹಾಗೂ ಇಡೀ ವಿಶ್ವವು ಹೆಚ್ಚುತ್ತಿರುವ ತಾಪಮಾನ,ಅಕಾಲಿಕ ಹಾಗೂ ಅನಿಯಮಿತ ಮಳೆ ಮತ್ತು ಅಂತರ್ಜಲ ಪ್ರಮಾಣದ ಇಳಿಕೆಯ ಸಮಸ್ಯೆಗಳನ್ನು ಎದುರಿಸುತ್ತಿದ್ದು ಇದನ್ನು ಸುಧಾರಿಸದಿದ್ದಲ್ಲಿ ಮುಂದಿನ ಪೀಳಿಗೆಗೆ ಇದು ಬೃಹತ್ ಸಮಸ್ಯೆಯಾಗಲಿದೆಯೆಂದು ಎಚ್ಚರಿಕೆ ನೀಡಿದರು. ಹವಾಮಾನ ಬದಲಾವಣೆಗಳು ಮತ್ತು ಪರಿಸರ ಅಸಮತೋಲನವನ್ನು ಕೇವಲ ವೈಜ್ಞಾನಿಕ ವೇದಿಕೆಗಳಲ್ಲಷ್ಟೇ ಚರ್ಚಿಸುತ್ತಿದ್ದು ಇದನ್ನು ಎಲ್ಲಾ ಹಂತಗಳಲ್ಲಿ ಸಮಗ್ರವಾಗಿ ಚರ್ಚಿಸಿ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಕರೆನೀಡಿದರು.

ಪರಿಸರ ಸಂರಕ್ಷಣೆಯು ಕೇವಲ ಪರಿಸರದ ಸಮತೋಲನವನ್ನು ಕಾಪಾಡುವಷ್ಟೇ ಅಲ್ಲದೆ ಅದು ಸಾಮಾಜಿಕ ನ್ಯಾಯ ಮತ್ತು ಮಾನವ ಘನತೆಯ ಪ್ರತೀಕವಾಗಿದೆ.ಸುಮಾರು ಐದುಕೋಟಿಗಳಷ್ಟು ಸಸಿಗಳನ್ನು ನೆಡುವ ಕಾರ್ಯಕ್ರಮವು ಒಂದು ಮಹತ್ವಾಕಾಂಕ್ಷೆಯ ಕಾರ್ಯಕ್ರಮವಷ್ಟೇ ಅಲ್ಲದೆ ಅತ್ಯಂತ ಸೂಕ್ಷಾವಲೋಕನ ಮತ್ತು ಮುಂದಾಲೋಚನೆಯ ಕ್ರಮವಾಗಿದೆ. ಪರಿಸರ ಸಮತೋಲನೆವು ಕೃಷಿ ಚಟುವಟಿಕೆಗಳು ಹಾಗೂ ಆರ್ಥಿಕ ಸ್ಥಿರತೆಯನ್ನು ಖಾತ್ರಿ ಪಡಿಸುತ್ತದೆಯೆಂದು ಅವರು ಅಭಿಪ್ರಾಯಪಟ್ಟರು. ಈ ಸುಸಂದರ್ಭದಲ್ಲಿ ನೆಡುತ್ತಿರುವ ಪ್ರತಿಯೊಂದು ಸಸಿಯೂ ಸಹ ಮುಂದಿನ ಪೀಳಿಗೆಗೆ ಒಂದು ಆಸ್ತಿಯಾಗಿ ಪರಿಣಮಿಸುತ್ತದೆಯೆಂದು ಮುಖ್ಯ ನ್ಯಾಯಮೂರ್ತಿಯವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಚ್ಚನ್ಯಾಯಾಲಯದ ನ್ಯಾಯಮೂರ್ತಿ ಹಂಚಾಟೆ ಸಂಜೀವಕುಮಾರ್ ಅವರು ಮಾತನಾಡಿ
ಪರಿಸರ ಸಂರಕ್ಷಣೆ, ಹಸಿರು ಅಭಿವೃದ್ಧಿ ಮತ್ತು ಆರೋಗ್ಯಕರ ಜೀವನಶೈಲಿಗೆ ಸಸಿ ನೆಡುವಿಕೆ ಹಾಗೂ ಸಾವಯವ ಕೃಷಿಯ ಮಹತ್ವ ದಿನದಿಂದ ದಿನಕ್ಕೆ ಅನಿವಾರ್ಯವಾಗುತ್ತಿದೆ. ಅರಣ್ಯ ನಾಶ, ಹವಾಮಾನ ಬದಲಾವಣೆ ಮತ್ತು ಮಾಲಿನ್ಯದಂತಹ ಸಮಸ್ಯೆಗಳನ್ನು ಎದುರಿಸಲು ಹೆಚ್ಚಿನ ಪ್ರಮಾಣದಲ್ಲಿ ಸಸಿ ನೆಡುವುದು ಅಗತ್ಯ ಹಾಗೂ ನೆಟ್ಟ ಸಸಿಗಳನ್ನು ಸಮರ್ಪಕವಾಗಿ ಆರೈಕೆ ಮಾಡಿದಾಗ ಮಾತ್ರ ಪರಿಸರ ಸಂರಕ್ಷಣೆಯ ಗುರಿ ಯಶಸ್ವಿಯಾಗುತ್ತದೆ.

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ಅತಿಯಾದ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಸಿಯುತ್ತಿದೆ ಅಲ್ಲದೆ ಕ್ಯಾನ್ಸರ್ ನಂತಹ ಅನೇಕ ಮಾರಕ ರೋಗಗಳ ಹೆಚ್ಚಳಕ್ಕೆ ಕಾರಣವಾಗುತ್ತಿದೆ.ನೈಸರ್ಗಿಕ ಗೊಬ್ಬರಗಳ ಬಳಕೆಯಿಂದ ಮಣ್ಣಿನ ಆರೋಗ್ಯ ಸುಧಾರಿಸಿ, ಸುರಕ್ಷಿತ ಮತ್ತು ಪೌಷ್ಟಿಕ ಆಹಾರ ಉತ್ಪಾದನೆ ಸಾಧ್ಯವಾಗುತ್ತದೆ ಪರಿಸರವನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯಷ್ಟೇ ಅಲ್ಲ, ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಆಗಿದೆ. ಪ್ರತಿಯೊಬ್ಬರೂ ಕನಿಷ್ಠ ಒಂದು ಸಸಿಯನ್ನು ನೆಟ್ಟು ಬೆಳೆಸುವುದು, ನೀರು ಮತ್ತು ಪ್ರಕೃತಿ ಸಂಪನ್ಮೂಲಗಳನ್ನು ಮಿತವಾಗಿ ಬಳಸುವುದು ಹಾಗೂ ಸಾವಯವ ಕೃಷಿಯನ್ನು ಉತ್ತೇಜಿಸುವ ಮೂಲಕ ಮುಂದಿನ ಪೀಳಿಗೆಗೆ ಸ್ವಚ್ಛ ಮತ್ತು ಹಸಿರು ಪರಿಸರವನ್ನು ಉಳಿಸಬಹುದಾಗಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..? ಕೋಲಾರ | ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಜವಾಬ್ದಾರಿ ನಮ್ಮದು: ಶಾಸಕ ಕೊತ್ತೂರು ಜಿ. ಮಂಜುನಾಥ್ ಭರವಸೆ

ಕಾರ್ಯಕ್ರಮದಲ್ಲಿ ರಾಜ್ಯ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶ್ರೀಮತಿ ಅನು ಶಿವರಾಮನ್, ರಾಜ್ಯದ ಉಚ್ಛ ನ್ಯಾಯಾಲಯದ ಪ್ರಧಂಧಕ ಎಂ. ಚಂದ್ರಶೇಖರ ರೆಡ್ಡಿ, ಚಿಕ್ಕಬಳ್ಳಾಪುರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾದೀಶ ಟಿ.ಪಿ ರಾಮಲಿಂಗೇಗೌಡ, ಪ್ರಶಾಂತಿ ಬಾಲಮಂದಿರ ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಡಾ.ಬಿ.ಎನ್. ನರಸಿಂಹಮೂರ್ತಿ,
ಜಿಲ್ಲಾ ನ್ಯಾಯಾದೀಶರು, ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್. ಶಶಿಧರಶೆಟ್ಟಿ, ದರೆ ಪ್ರತಿಷ್ಠಾನದ ನಿರ್ದೇಶಕ ಡಿ.ಎಂ.ಪೂರ್ಣೇಶ್ ಮತ್ತು ವಂದೇಭಾರತಂ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಬಿಜ್ಜವಾರ ಎಚ್. ಲೋಕೇಶ್,ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ವಿ. ಅಭಿಲಾಷ್ ಸೇರಿದಂತೆ ವಕೀಲರು,ವಿದ್ಯಾರ್ಥಿಗಳು
ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | 10 ತಿಂಗಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತುಂಗಭದ್ರಾ ನೀರಾವರಿ ಇಲಾಖೆ ಕಾರ್ಮಿಕರ ಧರಣಿ

ತುಂಗಭದ್ರಾ ನೀರಾವರಿ ಇಲಾಖೆಯ ಮಾನ್ವಿ ಉಪವಿಭಾಗದ ಕಾರ್ಮಿಕರಿಗೆ ಕಳೆದ 10 ತಿಂಗಳಿನಿಂದ...

ರಾಯಚೂರು | ಸರ್ವಿಸ್ ರಸ್ತೆ ನಿರ್ಮಿಸಲು ರೈತರು, ಗ್ರಾಮಸ್ಥರು ಪ್ರತಿಭಟನೆ

ಸಿರವಾರ ತಾಲ್ಲೂಕಿನ ಗೋಲದಿನ್ನಿ ಗ್ರಾಮದ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ...

ರಾಯಚೂರು | ಮಾದಕ ವ್ಯಸನದಿಂದ ಅಪರಾಧಗಳ ಹೆಚ್ಚಳ: ಜಿಲ್ಲಾಡಳಿತ ವಿಫಲ, ಜನಪ್ರತಿನಿಧಿಗಳಿಂದ ಆರೋಪಿಗಳ ರಕ್ಷಣೆ — ಎಂ. ವಿರೂಪಾಕ್ಷಿ ಆರೋಪ

ಜಿಲ್ಲೆಯಲ್ಲಿ ಮಾದಕ ವ್ಯಸನದಿಂದ ಕೊಲೆಗಳು, ದೌರ್ಜನ್ಯ, ಹಲ್ಲೆಗಳು ಹೆಚ್ಚಳವಾಗುತ್ತಿದ್ದು ಜಿಲ್ಲಾಡಳಿತ ನಿಯಂತ್ರಿಸುವಲ್ಲಿ...