ಚಿಕ್ಕಬಳ್ಳಾಪುರ | ಜುಲೈ 11ರಂದು ನೂತನ ಸಿಎಂ ಡಿಕೆ ಶಿವಕುಮಾರ್ ಹಾಗೂ ಡಿಸಿಎಂ ಪರಮೇಶ್ವರ್ ಅವರಿಗೆ ಅಭಿನಂದನಾ ಸಮಾರಂಭ

Date:

ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಜುಲೈ 11ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದ್ದು, ರಾಜ್ಯದ ವಿವಿಧ ಭಾಗಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರು ಭಾಗವಹಿಸುವ ನಿರೀಕ್ಷೆಯಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಸುಮಾರು 2,000ಕ್ಕೂ ಹೆಚ್ಚು ಸರ್ಕಾರಿ ನೌಕರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ಕಾರ್ಯಕ್ರಮಕ್ಕೆ ತೆರಳಲು ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಹಾಗೂ ತುಮಕೂರಿನ ಸಿದ್ಧಗಂಗಾ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು,ಕಳೆದ ಒಂದು ತಿಂಗಳಿನಿಂದ ಕಾರ್ಯಕ್ರಮದ ಯಶಸ್ಸಿಗಾಗಿ ಅವರು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಎಸ್‌ಎಸ್‌ಎಲ್‌ಸಿಯ 107 ಹಾಗೂ ದ್ವಿತೀಯ ಪಿಯುಸಿಯ 114 ವಿದ್ಯಾರ್ಥಿಗಳು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

ಇನ್ನೂ ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಯಾದ ರಾಷ್ಟ್ರೀಯ ಪಿಂಚಣಿ ಯೋಜನೆ(NPS)ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ(OPS)ಜಾರಿಗೆ ತರಬೇಕೆಂಬ ಬೇಡಿಕೆಯನ್ನು ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಪ್ರತಿಷ್ಠೆಯ ವಿಷಯವಾಗಿ ತೆಗೆದುಕೊಂಡಿದ್ದು,ಕಾರ್ಯಕ್ರಮದಲ್ಲಿಯೇ ಈ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಿದ್ದಾರೆ
ಇದರ ಜೊತೆಗೆ,ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದ ಮಾದರಿಯ ವೇತನ ಶ್ರೇಣಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಸಂಘದ ಮತ್ತೊಂದು ಪ್ರಮುಖ ಹಕ್ಕೊತ್ತಾಯವನ್ನೂ ಸರ್ಕಾರದ ಮುಂದೆ ಮಂಡಿಸಲಾಗುವುದು ಎಂದು ಹೇಳಿದರು.

ಇದನ್ನು ಓದಿದ್ದೀರಾ..?ಚಿಂತಾಮಣಿ | ಡಿಸಿಸಿ ಬ್ಯಾಂಕ್‌ನಲ್ಲಿ 11 ಕೋಟಿ ರೂ.ಅವ್ಯವಹಾರ:ಸಿಐಡಿ ಅಧಿಕಾರಿಗಳ ದಿಢೀರ್ ದಾಳಿ! – ಈ ದಿನ.ಕಾಮ್

ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಪಿ.ಆರ್.ಸುನೀಲ್,ಜಿಲ್ಲಾ ಖಜಾಂಚಿ ಅರುಣ್,ಶಿಡ್ಲಘಟ್ಟ ತಾಲೂಕು ಅಧ್ಯಕ್ಷ ಸುಬ್ಬಾರೆಡ್ಡಿ, ಅಶೋಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...