‌ಚಿಕ್ಕಬಳ್ಳಾಪುರ | ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಖಂಡಿಸಿ ಜಿಲ್ಲಾದ್ಯಂತ ಆಸ್ಪತ್ರೆಗಳ ಬಂದ್

Date:

ಪಶ್ಚಿಮ ಬಂಗಾಳದ ಸರ್ಕಾರಿ ಆರ್.ಜಿ.ಕಾರ್ ವೈದ್ಯಕೀಯ ಕಾಲೇಜಿನಲ್ಲಿ ಆಗಸ್ಟ್ 9 ರಂದು ನಡೆದಿರುವ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಚಿಕ್ಕಬಳ್ಳಾಪುರ ನಗರ ಸೇರಿದಂತೆ ತಾಲ್ಲೂಕಿನ ಎಲ್ಲಾ ಖಾಸಗಿ ಆಸ್ಪತ್ರೆಗಳ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ಆಸ್ಪತ್ರೆಗಳನ್ನು ಬಂದ್‌ ಮಾಡುವ ಮೂಲಕ ಬೀದಿಗಿಳಿದು ಪ್ರತಿಭಟನಾ ರ್ಯಾಲಿ ನಡೆಸಿದರು.

- Advertisement -

ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿಗಳು ಕಿಡಿಗೇಡಿಗಳ ವಿರುದ್ಧ ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ ನ್ಯಾಯಕ್ಕಾಗಿ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಆಸ್ಪತ್ರೆಗಳಲ್ಲಿ ಮಹಿಳಾ ವೈದ್ಯರಿಗೆ ಸೂಕ್ತ ಭದ್ರತೆ ಇಲ್ಲವಾಗಿದೆ. ವೈದ್ಯರ ಮೇಲೆ ಅತ್ಯಾಚಾರ, ಹಲ್ಲೆಗಳಂತ ದುಷ್ಕೃತ್ಯಗಳು ನಡೆಯುತ್ತಿರುವುದು ನಿಜಕ್ಕೂ ಅಕ್ಷಮ್ಯ. ಸರಕಾರ ಮಹಿಳಾ ವೈದ್ಯರು ಸೇರಿದಂತೆ ಎಲ್ಲಾ ವೈದ್ಯರಿಗೂ ಸೂಕ್ತ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕಿದೆ. ಜೀವ ಉಳಿಸುವ ವೈದ್ಯರಿಗೇ ಸೂಕ್ತ ಭದ್ರತೆಯಿಲ್ಲದಿರುವುದು ನಮ್ಮೆಲ್ಲರಾ ದುರ್ದೈವವೇ ಸರಿ ಎಂದು ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಆಗ್ರಹಿಸಿದರು.

ಚಿಂತಾಮಣಿ ತಾಲೂಕು ಆಸ್ಪತ್ರೆ ವೈದ್ಯರಾದ ಡಾ.ಮಹಬೂಬ್ ಪಾಷಾ, ಡಾ.ಜಯಂತಿ, ಡಾ.ಯಾಸ್ಮಿನ್ ಮಾತನಾಡಿ, ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲೇ ವೈದ್ಯಕೀಯ ವಿದ್ಯಾರ್ಥಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಹೇಯಕೃತ್ಯ. ಜತೆಗೆ ಸಾಕ್ಷ್ಯವನ್ನು ನಾಶಪಡಿಸಲು ಕಿಡಿಗೇಡಿಗಳು ಆಸ್ಪತ್ರೆಯ ಆವರಣಕ್ಕೆ ನುಗ್ಗಿ ಆಸ್ಪತ್ರೆಯ ಕಟ್ಟಡ, ತುರ್ತು ವಿಭಾಗ, ಶುಶ್ರೂಷೆ ಕೇಂದ್ರ, ವೈದ್ಯಕೀಯ ಯಂತ್ರೋಪಕರಣ, ಪೀಠೋಪಕರಣ, ಔಷಧ ಕೇಂದ್ರ, ಹೊರರೋಗಿ ವಿಭಾಗ ಹಾಗೂ ಇತರೆ ವೈದ್ಯಕೀಯ ಸಲಕರಣೆಗಳನ್ನು ಧ್ವಂಸಗೊಳಿಸಿದ್ದಾರೆ ಇದು ಅಲ್ಲಿನ ಸರಕಾರದ ವೈಫಲ್ಯ ಎಂದು ಕಿಡಿಕಾರಿದರು.

ಯಾರೋ ಒಬ್ಬರು ಮಾಡಿರುವ ಕೃತ್ಯವಲ್ಲ. ಇದೊಂದು ಪೂರ್ವನಿಯೋಜಿತ ಕೃತ್ಯ. ಕೃತ್ಯ ಎಸಗಿರುವ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಇಂದು ಖಾಸಗಿ ಆಸ್ಪತ್ರೆ, ಆಯುರ್ವೇದ, ದಂತವೈದ್ಯಕೀಯ, ಕ್ಲಿನಿಕ್, ಒಪಿಡಿ ಲ್ಯಾಬ್ ಸೇವೆಗಳನ್ನು ಬಂದ್ ಮಾಡಲಾಗಿದೆ. ಆದರೆ ಅಪಘಾತ ಅಥವಾ ತುರ್ತು ಚಿಕಿತ್ಸೆ ಸಂದರ್ಭಗಳಿಗಾಗಿ ಕೆಲವು ಆಸ್ಪತ್ರೆಗಳು ತೆರೆದಿವೆ.‌ ವೈದ್ಯರು ಮತ್ತು ಕ್ಲಿನಿಕ್ ಗಳ ಮೇಲೆ ಹಿಂಸಾಚಾರ ಮತ್ತು ದುಷ್ಕೃತ್ಯಗಳನ್ನು ನಡೆಸುವವರಿಗೆ ಕಠಿಣ ಶಿಕ್ಷೆ ನೀಡುವ ಕಾನೂನು ನಿಯಮಾವಳಿಗಳನ್ನು ಕೇಂದ್ರ ಸರ್ಕಾರ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಚಿಂತಾಮಣಿ | ಕೋಲ್ಕತ್ತಾ ಘಟನೆ ಖಂಡಿಸಿ ಖಾಸಗಿ ಆಸ್ಪತ್ರೆ, ಕ್ಲೀನಿಕ್‌ಗಳು ಇಂದು ಬಂದ್

ಪ್ರತಿಭಟನೆಯಲ್ಲಿ ಡಾ.ಅಫ್ತಾಬ್ ಬೇಗ್, ಡಾ.ಆಸಾದುಲ್ಲ ಬೇಗ್, ಡಾ.ಯಲ್ಲಪ್ಪ ಗೌಡ, ಡಾ.ವಾಣಿ ರೆಡ್ಡಿ, ಡಾ.ಮುನಿ ವೆಂಕಟರೆಡ್ಡಿ. ಡಾ.ದಕ್ಷಿಣೆ, ಡಾ.ಸಂತೋಷ್ ಕುಮಾರ್ ಸೇರಿದಂತೆ ಇತರೆ ವೈದ್ಯರು ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರಾಮೀಣ ಬದುಕು, ಕೃಷಿ ಸಂಸ್ಕೃತಿ ಪ್ರವಾಸಿಗರಿಗೆ ಪರಿಚಯಿಸಲು ಹೊಸ ಪ್ರವಾಸೋದ್ಯಮ ಪ್ಯಾಕೇಜ್‌ಗಳ ಚಿಂತನೆ

ಉಡುಪಿ ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳೊಂದಿಗೆ ಗ್ರಾಮೀಣ...

ವಿಜಯಪುರ | ಬರ ಪರಿಹಾರ ಹೆಚ್ಚಳ, ಸಾಲಮನ್ನಾಕ್ಕೆ ರಾಜ್ಯ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿರುವ...

ಇಂಡಿ | ಸ್ಥಳೀಯ ಚುನಾವಣೆ: ಕಾಂಗ್ರೆಸ್ ಬಲಗೊಳಿಸಲು ಯಶವಂತರಾಯಗೌಡ ಪಾಟೀಲ ಕರೆ

ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರಸಭೆ...

ಬಸವನ ಬಾಗೇವಾಡಿ ಸಮೀಪ 3.5 ತೀವ್ರತೆಯ ಭೂಕಂಪ ದಾಖಲು!

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ದಿಂದಾವರ ಗ್ರಾಮ ಪಂಚಾಯಿತಿ ಸಮೀಪ...