ಚಿಕ್ಕಬಳ್ಳಾಪುರವನ್ನು ಕಾಡುತ್ತಿದೆ ಬಾಲ್ಯ ವಿವಾಹ; ಮೂರು ವರ್ಷದಲ್ಲಿ ಗರ್ಭ ಧರಿಸಿದ್ದಾರೆ 317 ಬಾಲೆಯರು

Date:

Advertisements

ಬಾಲ್ಯ ವಿವಾಹದ ವಿರುದ್ಧ ಕಾನೂನುಗಳಿದ್ದರೂ, ನಾನಾ ರೀತಿಯ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿದ್ದರೂ ಬಾಲ್ಯ ವಿವಾಹವೆಂಬ ಅನಿಷ್ಠ ಪದ್ದತಿಗೆ ಇನ್ನೂ ಸಂಪೂರ್ಣ ಕಡಿವಾಣ ಬಿದ್ದಿಲ್ಲ. ಹೀಗಾಗಿ, ಹದಿಹರೆಯದ ವಯಸ್ಸಿನಲ್ಲೇ ವಿವಾಹವಾಗುವ ಬಾಲಕಿಯರು, ತಮ್ಮ ಬಾಲ್ಯ ಮುಗಿಯುವ ಮುನ್ನವೇ ತಾಯಿಯರಾಗುತ್ತಿದ್ದಾರೆ. ತಾವು ಆಟವಾಡುವ ವಯಸ್ಸಿನಲ್ಲಿ ಮಕ್ಕಳನ್ನು ಸಲಹುವ, ಆಟವಾಡಿಸುವ ಜವಬ್ದಾರಿ ಹೊರುತ್ತಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ತವರು ಜಿಲ್ಲೆ ಬೆಳಗಾವಿಯಲ್ಲಿ ಕಳೆದ ಒಂದೂವರೆಗೆ ವರ್ಷದಲ್ಲಿ 336 ಬಾಲಕಿಯರು ಗರ್ಭಿಣಿಯರಾಗಿದ್ದಾರೆ. ಅಂತೆಯೇ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ (2021-2023ವರೆಗೆ) 317 ಬಾಲಕಿಯರು ಗರ್ಭ ಧರಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ (ಆರ್‌ಸಿಎಚ್‌) ಪೋರ್ಟಲ್‌ನ ಅಂಕಿ–ಅಂಶಗಳ ಪ್ರಕಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2021ರಲ್ಲಿ 18 ವರ್ಷದೊಳಿಗಿನ 124 ಬಾಲಕಿಯರು, 2022ರಲ್ಲಿ 158 ಹೆಣ್ಣು ಮಕ್ಕಳು, 2023ರ ನವೆಂಬರ್‌ವರೆಗೆ 35 ಬಾಲಕಿಯರು ಗರ್ಭಿಣಿಯರಾಗಿದ್ದಾರೆ. ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳು ಹೆಚ್ಚಾಗಿ ನಡೆಯುತ್ತಿವೆ ಎಂಬುದನ್ನು ಈ ಅಂಕಿಅಂಶಗಳು ಸಾಬೀತುಪಡಿಸಿವೆ.

Advertisements

ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ಬಾಗೆಪಲ್ಲಿ ತಾಲೂಕಿನಲ್ಲಿ ಅತಿ ಹೆಚ್ಚು ಬಾಲಕಿಯರು ಗರ್ಭಿಣಿಯರಾಗಿದ್ದಾರೆ. ತಾಲೂಕಿನಲ್ಲಿ ಒಟ್ಟು 87 ಬಾಲಕಿಯರು ಗರ್ಭ ಧರಿಸಿದ್ದಾರೆ. ಎರಡನೇ ಸ್ಥಾನದಲ್ಲಿರುವ ಶಿಡ್ಲಘಟ್ಟ ತಾಲೂಕಿನಲ್ಲಿ ಒಟ್ಟು 75 ಬಾಲಕಿಯರು ಗರ್ಭಿಣಿಯರಾಗಿದ್ದಾರೆ.

ಬಾಲ್ಯ ವಿವಾಹವನ್ನು ತಡೆಯಲು ಪ್ರಯತ್ನಗಳು ನಡೆಯುತ್ತಲೇ ಇವೆ. ಜಾಗೃತಿ ಅಭಿಯಾನಗಳನ್ನೂ ಅಧಿಕಾರಿಗಳು ನಡೆಸುತ್ತಿದ್ದಾರೆ. ಆದರೂ, ಹಲವಾರು ಬಾಲ್ಯ ವಿವಾಹಗಳು ಬೆಳಕಿಗೆ ಬರುತ್ತಿಲ್ಲ. ಬಾಲಕಿಯರು ಗರ್ಭಿಣಿಯರಾದಾಗಲೇ ಬಾಲ್ಯ ವಿವಾಹಗಳು ಬೆಳಕಿಗೆ ಬರುತ್ತಿವೆ ಎಂದು ಹೇಳಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X