ನಗರಸಭೆ ಚುನಾವಣೆ ವೇಳೆ ವಿಪ್ ಉಲ್ಲಂಘನೆ ಮಾಡಿರುವ ನಗರಸಭೆ ಸದಸ್ಯರಾದ ಮಟಮಪ್ಪ ಮತ್ತು ವೀಣಾ ರಾಮು ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ ಸ್ಪಷ್ಟಪಡಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ರಾಜ್ಯಾಧ್ಯಕ್ಷರ ಆದೇಶದಂತೆ ಈಗಾಗಲೇ ಮಟಮಪ್ಪ ಮತ್ತು ವೀಣಾ ರಾಮು ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದ್ದು, ನಗರಸಭೆ ಸದಸ್ಯತ್ವ ರದ್ದುಗೊಳಿಸುವಂತೆ ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ಕೇಸು ದಾಖಲಿಸಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ : ಚಿಕ್ಕಬಳ್ಳಾಪುರ | ವಿವಿಧ ಗ್ರಾಪಂಗಳಲ್ಲಿ ಅಕ್ರಮ; ಭ್ರಷ್ಟರ ವಿರುದ್ಧ ಕ್ರಮಕ್ಕೆ ಅಂಬೇಡ್ಕರ್ ಸೇನೆ ಧರಣಿ
ವಾರ್ಡ್ ನಂ.9 ಮತ್ತು 25ರ ನಗರಸಭೆ ಸದಸ್ಯರಾದ ಮಟಮಪ್ಪ ಮತ್ತು ವೀಣಾ ರಾಮು ಅವರು ಜೆಡಿಎಸ್ ಪಕ್ಷದಿಂದ ಗೆದ್ದಿದ್ದು, ಇತ್ತೀಚೆಗೆ ನಡೆದ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿ, ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದರು. ಈ ಮೂಲಕ ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಅವರು ವಿವರಿಸಿದರು.