ಚಿಕ್ಕಬಳ್ಳಾಪುರ | ಚುನಾವಣಾಧಿಕಾರಿಗಳ ಸಭೆ; ಸಂದರ್ಭೋಚಿತವಾಗಿ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ

Date:

ಚುನಾವಣೆ ಸಂದರ್ಭದಲ್ಲಿ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು, ಸಿಬ್ಬಂದಿ ವರ್ಗ ಸಂದರ್ಭೋಚಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಸಲಹೆ ನೀಡಿದರು.

- Advertisement -

ಚಿಕ್ಕಬಳ್ಳಾಪುರದ ಜಿಲ್ಲಾಡಳಿತ ಭವನದಲ್ಲಿ ಸೋಮವಾರ (ಮಾ.4) ನಡೆದ ಲೋಕಸಭಾ ಚುನಾವಣೆ ಪೂರ್ವ ಸಿದ್ದತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. “ಕೋಲಾರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಮತ್ತು ಚಿಂತಾಮಣಿ ವಿಧಾನಸಭಾ ಕ್ಷೇತ್ರಗಳು ಬರುವುದರಿಂದ ಮುಂಬರುವ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಈ ಎರಡು ಕ್ಷೇತ್ರಗಳ ಅಧಿಕಾರಿಗಳು ಮತ್ತು ಕೋಲಾರ ಜಿಲ್ಲೆಯ ಅಧಿಕಾರಿಗಳು ಪರಸ್ಪರ ಸಹಕಾರ, ಸಮನ್ವಯತೆಯೊಂದಿಗೆ ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪ್ರತೀ ಚುನಾವಣೆಗೂ ಚುನಾವಣಾ ಕರ್ತವ್ಯ, ನೀತಿ, ನಿಯಮ, ಸುಧಾರಣಾ ಕ್ರಮಗಳನ್ನರಿತು ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯನಿರ್ವಹಿಸಬೇಕು ಎಂದರು.

ಯಾವಾಗ ಬೇಕಾದರೂ ಚುನಾವಣೆ ನೀತಿ ಸಂಹಿತೆ ಘೋಷಣೆ ಆಗಬಹುದು, ನೀತಿ ಸಂಹಿತೆ ಆರಂಭದಿಂದ ಕೊನೆಯವರೆಗೆ ಚಿಂತಾಮಣಿ-ಶಿಡ್ಲಘಟ್ಟ ಕ್ಷೇತ್ರದಲ್ಲಿ ಅಧಿಕಾರಿಗಳು ಸಹಕರಿಸಬೇಕು ಎಂದು ಮನವಿ ಮಾಡಿದರು.

ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಆಗಿರುವ, ಮುಂದೆ ನಿಯೋಜನೆ ಆಗುವ ಅಧಿಕಾರಿಗಳು, ಸಿಬ್ಬಂದಿ ತಮ್ಮ ಚಲನವಲನದ ಮೇಲೆ ತಾವೇ ನಿಗಾ ಇಡಬೇಕು. ಚುನಾವಣಾ ನೀತಿ ಸಂಹಿತೆ ಘೋಷಣೆ ಆದ ಮೇಲೆ ತಾವು ಯಾವುದೇ ರಾಜಕೀಯ ವಿಚಾರಗಳಿಗೆ ಸಂಬಂಧಿಸಿದ ಗ್ರೂಪ್‌ಗಳಲ್ಲಿ, ಸಾಮಾಜಿಕ ಜಾಲ ತಾಣಗಳಲ್ಲಿದ್ದರೆ ಅದರಿಂದ ಕೂಡಲೆ ಹೊರಬರಬೇಕು. ಆಡಳಿತಾತ್ಮಕ, ಕೌಟುಂಬಿಕ ಗ್ರೂಪ್ ಗಳಿದ್ದರೆ ಅಡ್ಡಿಯಿಲ್ಲ. ಆದರೆ ರಾಜಕೀಯ ಪ್ರೇರಿತ ತಾಣಗಳಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವಲ್ಲಿ ತಟಸ್ಥ ದೋರಣೆ ಅನುಸರಿಸಬೇಕು ಎಂದು ಎಚ್ಚರಿಸಿದರು.

ಚುನಾವಣಾ ಆಯೋಗ ಈ ಹಿಂದಿನಿಂದ ಚುನಾವಣಾ ಕಾರ್ಯಗಳನ್ನು, ಚುನಾವಣೆಗಳನ್ನು ಸಮರ್ಪಕವಾಗಿ ಪರಿಣಾಮಕಾರಿಯಾಗಿ ಕಾಲಕಾಲಕ್ಕೆ ನಡೆಸುತ್ತಾ ಬಂದಿದೆ. ಆಯೋಗವು ಚುನಾವಣೆಯಿಂದ ಚುನಾವಣೆಗೆ ಅತಿಯಾದ ಪಾರದರ್ಶಕತೆಯನ್ನು ಬಯಸುತ್ತದೆ. ಆದ್ದರಿಂದ ಕಾಲೋಚಿತವಾಗಿ ಆಯೋಗವು ನೀಡುವ ನಿರ್ದೇಶನಗಳನ್ನು ನಾವೆಲ್ಲರೂ ಪಾಲಿಸಬೇಕು ಎಂದು ಹೇಳಿದರು.

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾನತಾಡಿ, ಈ ಎರಡು ಕ್ಷೇತ್ರಗಳಲ್ಲಿ ಒಟ್ಟು 4,30,422 ಮತದಾರರಿದ್ದು, ಈ ಪೈಕಿ 2,12,955 ಪುರುಷರು, 2,17,418 ಮಹಿಳೆಯರು, 49 ತೃತೀಯ ಲಿಂಗಿಗಳು ಇದ್ದಾರೆ. ಆಯೋಗದ ನಿರ್ದೇನದಂತೆ ಅಂತಿಮ ಮತದಾರರ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ. ಈ ಭಾರಿ 9,464 ಯುವ ಮತದಾರರು ಈ ಕ್ಷೇತ್ರಗಳಲ್ಲಿ ಮತ ಚಲಾಯಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಪಂ ಸಿಇಒ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಎಸ್‌ಪಿ ಡಿ.ಎಲ್.ನಾಗೇಶ್, ಅಪರ ಜಿಲ್ಲಾಧಿಕಾರಿಗಳಾದ ಡಾ.ಎನ್.ತಿಪ್ಪೇಸ್ವಾಮಿ, ಡಾ.ಶಂಕರ್ ವಣಿಕ್ಯಾಳ್, ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್ ಸೇರಿದಂತೆ ಚಿಂತಾಮಣಿ-ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚುನಾವಣಾ ಅಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...