ಚಿಕ್ಕಬಳ್ಳಾಪುರ | ನಾಳೆ ನಗರಸಭಾ ಚುನಾವಣೆ: ಜೆಡಿಎಸ್‌ ಸದಸ್ಯರು ನಾಪತ್ತೆ; ಆತಂಕದಲ್ಲಿ ಮುಖಂಡರು

Date:

ಕಳೆದ ನಾಲ್ಕೈದು ದಿನಗಳಿಂದ ಚಿಕ್ಕಬಳ್ಳಾಪುರ ನಗರಸಭಾ ಜೆಡಿಎಸ್‌ ಸದಸ್ಯರಾದ ವೀಣಾ ರಾಮು, ಮಟಮಪ್ಪ ಅವರು ಸಂಪರ್ಕಕ್ಕೆ ಸಿಗದೆ ಕಾಣೆಯಾಗಿದ್ದಾರೆ. ಇದು ಜೆಡಿಎಸ್‌ ನಾಯಕರಲ್ಲಿ ಆತಂಕ ಮೂಡಿಸಿದ್ದು, ಚಿಕ್ಕಬಳ್ಳಾಪುರ ನಗರಸಭೆಯ ಅಧಿಕಾರ ಕೈತಪ್ಪುವ ಆತಂಕದಲ್ಲಿದ್ದಾರೆ.

- Advertisement -

ಜೆಡಿಎಸ್‌ ಬೆಂಬಲಿತ ಸದಸ್ಯರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಬುಧವಾರ ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಸುದ್ದಿಗೋಷ್ಠಿ ನಡೆಸಿರುವ ಜೆಡಿಎಸ್‌ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ, ಜೆಡಿಎಸ್‌ ಸದಸ್ಯರು ಸಂಪರ್ಕಕ್ಕೆ ಲಭ್ಯರಾಗಿಲ್ಲ. ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿಯವರ ಆದೇಶದಂತೆ ವಿಪ್‌ ಜಾರಿಗೊಳಿಸಿ, ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಮಟಮಪ್ಪ ಮತ್ತು ವೀಣಾ ರಾಮು ಅವರು ಇಷ್ಟು ದಿನಗಳಿಂದ ಪಕ್ಷದ ಎಲ್ಲ ಸಭೆಗಳಲ್ಲೂ ನಮ್ಮೊಂದಿಗಿದ್ದು, ಸಹಮತ ಸೂಚಿಸಿದ್ದರು. ಇದೀಗ ಇದ್ದಕ್ಕಿದ್ದಂತೆ ಸಂಪರ್ಕಕ್ಕೆ ಸಿಗದಂತಾಗಿದ್ದಾರೆ. ಇದಕ್ಕೆ ಕಾರಣ ತಿಳಿದಿಲ್ಲ. ಆದರೆ, ಅವರಿಬ್ಬರು ಎನ್‌ಡಿಎ ಒಕ್ಕೂಟ ಸೂಚಿಸುವ ಅಭ್ಯರ್ಥಿಗೆ ಮತ ನೀಡುತ್ತಾರೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ನಂಬಿಕೆ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ 10

ಜೆಡಿಎಸ್‌ ಪಕ್ಷದ ಸಹಕಾರದಿಂದ ಮಟಮಪ್ಪ, ವೀಣಾ ರಾಮು ಅವರು ಗೆದ್ದಿದ್ದಾರೆ. ಅದರಂತೆ ನಾಳೆ ನಡೆಯುವ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗೆ ಬೆಂಬಲ ಕೊಡಬೇಕು. ಒಂದು ವೇಳೆ ಅವರ ನಿರ್ಧಾರಗಳು ಬದಲಾದರೆ ಪಕ್ಷದ ಮುಖಂಡರೆಲ್ಲರೂ ಸಭೆ ಸೇರಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಶಿವಮೊಗ್ಗ | ರಾಗಿಗುಡ್ಡ ಬಡಾವಣೆಯಲ್ಲಿ ಹಿಂದೂ–ಮುಸ್ಲಿಮರ ಸೌಹಾರ್ದತೆಗೆ ಸಾಕ್ಷಿಯಾದ ಗಣೇಶೋತ್ಸವ

ಜಿಲ್ಲಾ ಕಾರ್ಯದರ್ಶಿ ಕೆ.ಆರ್.ರೆಡ್ಡಿ ಮಾತನಾಡಿ, ರಾಜ್ಯಾಧ್ಯಕ್ಷರು ಈಗಾಗಲೇ ವಿಪ್‌ ಜಾರಿಗೊಳಿಸಲು ಆದೇಶ ನೀಡಿದ್ದಾರೆ. ಅದರಂತೆ ವಿಪ್‌ ಜಾರಿಗೊಳಿಸುತ್ತೇವೆ. ಅವರ ತೀರ್ಮಾನ ಏನಿದೆ ಎಂಬುದನ್ನು ನಾಳೆಯವರೆಗೆ ಕಾದುನೋಡಬೇಕಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುನಿರಾಜು ಕೊಳವನಹಳ್ಳಿ, ಕಿಸಾನ್‌ ಕೃಷ್ಣಪ್ಪ, ಶಿಲ್ಪಾ ಗೌಡ ಹಾಗೂ ಇತರರಿದ್ದರು.

ಈ ಬಾರಿ ನಗರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಅಭ್ಯರ್ಥಿಗೆ ಮೀಸಲಿರಿಸಲಾಗಿದ್ದು, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟರಿಗೆ ಮೀಸಲಾಗಿದೆ. ನಾಳೆಯೇ(ಸೆ.12ರಂದು) ನಗರಸಭೆ ಚುನಾವಣೆ ನಡೆಯಲಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...