ಚಿಕ್ಕಬಳ್ಳಾಪುರ | ಪೋಕ್ಸೋ ಪ್ರಕರಣ: ‘ಹಣದ ಆಮಿಷಕ್ಕೆ ಒಳಗಾಗಿ ಆರೋಪಿಯನ್ನು ಪೊಲೀಸರು ಬಿಟ್ಟು ಕಳಿಸಿದ್ದಾರೆ’

Date:

ನಾಲ್ಕು ವರ್ಷದ ಪುಟ್ಟ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಆರೋಪಿಯನ್ನು ಪೊಲೀಸರು ಬಿಟ್ಟು ಕಳಿಸಿದ್ದಾರೆ ಎಂದು ಸಂತ್ರಸ್ತ ಬಾಲಕಿಯ ತಾಯಿ ಆರೋಪಿಸಿದ್ದಾರೆ.

- Advertisement -

ಪ್ರಕರಣ ಮತ್ತು ಪೊಲೀಸರ ಧೋರಣೆ ಕುರಿತು ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿ ನಡೆಸಿದ ತಾಯಿ, “ಚಕೋಲೇಟ್‌ ತರಲು ಅಂಗಡಿಗೆ ತೆರಳಿದ್ದ ಮಗುವಿನ ಮೇಲೆ ಅತ್ಯಾಚಾರ ಎಸಗಲು 45 ವರ್ಷದ ಆರೋಪಿ ಯತ್ನಿಸಿದ್ದಾನೆ. ಆರೋಪಿ ವಿರುದ್ಧ ದಿಬ್ಬೂರಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿದ್ದ ಪೊಲೀಸರು, ಆತನ ವಿರುದ್ಧ ಕ್ರಮ ಕೈಗೊಳ್ಳದೆ ಆತನನ್ನು ಬಿಟ್ಟು ಕಳಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಆರೋಪಿ ನೀಡಿದ ಹಣದ ಆಮಿಷಕ್ಕೆ ಒಳಗಾಗಿ ಪೊಲೀಸರು ಈ ರೀತಿ ಮಾಡಿದ್ದಾರೆ. ಆರೋಪಿಯನ್ನು ಕೂಡಲೇ ಬಂಧಿಸಿ, ಕ್ರಮ ಕೈಗೊಳ್ಳಬೇಕು. ನಮ್ಮ ಕುಟುಂಬಕ್ಕೆ ರಕ್ಷಣೆ ನೀಡಬೇಕು” ಎಂದು ಎಂದು ಆಗ್ರಹಿಸಿದ್ದಾರೆ.

“ಆರೋಪಿ ರಾಜಾರೋಷವಾಗಿ ನಮ್ಮ ಮನೆಯ ಎದುರೇ ತಿರುಗಾಡುತ್ತಿದ್ದಾನೆ. ಬೆದರಿಕೆ ಹಾಕುತ್ತಿದ್ದಾನೆ. ನಮಗೆ ರಕ್ಷಣೆ ಬೇಕು. ಪೊಲೀಸ್ ಅಧಿಕಾರಿಗಳು ನಮಗೆ ನ್ಯಾಯ ಕೊಡಿಸಬೇಕು” ಎಂದು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿ ಬಳಿಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಅವರಿಗೆ ಮನವಿ ಸಲ್ಲಿಸಿದ್ದಾರೆ.

“ದಿಬ್ಬೂರಹಳ್ಳಿ ಠಾಣೆಯ ಪಿಎಸ್‌ಐ ತಮ್ಮ ಅಧಿಕಾರ ದುರುಪಯೋಗ ಮಾಡುತ್ತಿದ್ದಾರೆ. ಆರೋಪಿಗಳ ಪರ ನಿಂತು, ಸಂತ್ರಸ್ತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಪೊಲೀಸ್‌ ಅಧಿಕಾರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಕೆ ನಡೆಸಬೇಕು. ಆರೋಪಿಯನ್ನು ಬಂಧಿಸಬೇಕು” ಎಂದು ಸಾಮಾಜಿಕ ಕಾರ್ಯಕರ್ತ ಕೆ.ಎಸ್‌ ಅರುಣ್‌ಕುಮಾರ್ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...