₹38.5 ಕೋಟಿ ವೆಚ್ಚದಲ್ಲಿ ಹೊಸಕೋಟೆ-ಚಿಂತಾಮಣಿ ರಸ್ತೆ ಮರು ಡಾಂಬರೀಕರಣ

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮಾರ್ಗದ ರಸ್ತೆಯನ್ನು 38.5 ಕೋಟಿ ರೂ. ವೆಚ್ಚದಲ್ಲಿ ಮರು ಡಾಂಬರೀಕರಣ ಮಾಡಿ, ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದರು.

- Advertisement -

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ನಡೆಯುತ್ತಿರುವ ಹೊಸಕೋಟೆ-ಚಿಂತಾಮಣಿ ರಸ್ತೆ ಮರು ಡಾಂಬರೀಕರಣ ಕಾಮಗಾರಿ ಸ್ಥಳಕ್ಕೆ ಶುಕ್ರವಾರ (ಮಾ.1) ಭೇಟಿ ನೀಡಿ, ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಉದ್ದೇಶಿತ ರಸ್ತೆ ಕಾಮಗಾರಿ ಚತುಷ್ಪಥ ರಸ್ತೆಯದ್ದಾಗಿದ್ದು, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ 38.5ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಿದೆ. ಎಚ್.ಕ್ರಾಸ್ ಮಾರ್ಗವಾಗಿ ಈ ರಸ್ತೆ ಸಾಗಲಿದ್ದು, ಸಂಚಾರ ದಟ್ಟಣೆಯನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಈ ರಸ್ತೆಯ ಹಲವೆಡೆಗಳಲ್ಲಿನ ಏರುಪೇರುಗಳಿಂದಾಗಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದು, ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲು ಸೂಚಿಸಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಜತೆಗೆ ಸುಂಕ ವಸೂಲಿ (ಟೋಲ್ ಗೇಟ್) ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸಲಾಗುವುದು. ಈಗಾಗಲೇ ಕಾಮಗಾರಿ ಕೈಗೊಳ್ಳಲು ವಿನ್ಯಾಸ, ನೀಲನಕ್ಷೆಯನ್ನು ಯೋಜಿತ ರೀತಿಯಲ್ಲಿ ಸಿದ್ದಪಡಿಸಲಾಗಿದೆ. ಈ ಉದ್ದೇಶಿತ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ ಅಗತ್ಯವಿರುವ ಅನುದಾನ ಬಿಡುಗಡೆ ಮಾಡುವಂತೆ ಲೋಕೋಪಯೋಗಿ ಇಲಾಖೆ ಸಚಿವರಿಗೆ ಪತ್ರವನ್ನು ಬರೆಯಲಾಗಿದೆ‌ ಎಂದು ತಿಳಿಸಿದರು.

ಈ ವೇಳೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಮುಖ್ಯ ಕಾರ್ಯಪಾಲಕ ಅಭಿಯಂತರ ವಸಂತ್, ಶಿಡ್ಲಘಟ್ಟ ತಹಸೀಲ್ದಾರ್ ಎಂ.ಎನ್. ಸ್ವಾಮಿ ಗೌಡ, ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಅಧಿಕಾರಿ ವರ್ಗ, ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...