ಚಿಕ್ಕಬಳ್ಳಾಪುರ | ಶಾಲೆಯಲ್ಲಿ ವಿದ್ಯುತ್ ಅವಘಡ; ಓರ್ವ ಸಾವು – 18 ಮಂದಿ ಗಾಯ

Date:

ಶಾಲೆಯ ಆವರಣದಲ್ಲಿ ಹಾಕಿದ್ದ ಪೆಂಡಾಲ್‌ ಗಾಳಿಗೆ ಹಾರಿ, ವಿದ್ಯುತ್‌ ತಂತಿಗೆ ತಗುಲಿದ್ದು, ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಘಟನೆಯಲ್ಲಿ 18 ಮಂದಿಗೆ ಸುಟ್ಟ ಗಾಯಗಳಾಗಿವೆ.

- Advertisement -

ಗೌರಿಬಿದನೂರಿನ ಶ್ರೀರಾಮಕೃಷ್ಣ ಶಾರದಾದೇವಿ ವಿದ್ಯಾ ಮಂದಿರದಲ್ಲಿ ಶನಿವಾರ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕ್ರೀಡಾಕೂಟ ನೋಡಲು ಹಲವಾರು ಪೋಷಕರು ಮತ್ತು ವಿದ್ಯಾರ್ಥಿಗಳು ಪೆಂಡಾಲ್ ಕೆಳಗೆ ಜಾಮಾಯಿಸಿದ್ದರು. ಮಧ್ಯಾಹ್ನದ ವೇಳೆ, ರಭಸವಾಗಿ ಗಾಳಿ ಬೀಸಿದ್ದು, ಶಾಲಾ ಆವರಣದಲ್ಲಿ ಹಾದುಹೋಗಿದ್ದ ವಿದ್ಯುತ್‌ ತಂತಿಗೆ ಪೆಂಡಾಲ್‌ ತಗುಲಿದೆ. ಪೆಂಡಾಲ್‌ ಹಿಡಿಯಲು ಧಾವಿಸಿದವರಿಗೆ ವಿದ್ಯುತ್‌ ಸ್ಪರ್ಶವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಘಟನೆಯಲ್ಲಿ ಮಧುಗಿರಿ ತಾಲೂಕಿನ ನಾಗೇನಹಳ್ಳಿ ಗ್ರಾಮದ ನಿವಾಸಿ ರಾಘವೇಂದ್ರ (45) ಎಂಬುವರು ಸಾವನ್ನಪ್ಪಿದ್ದಾರೆ. 18 ಮಂದಿ ಗಾಯಗೊಂಡಿದ್ದು, ಅವರಿಲ್ಲಿ ಇಬ್ಬರು ಮಕ್ಕಳು, ಮೂವರು ಪೋಷಕರು ಮತ್ತು ಐವರು ಶಿಕ್ಷಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಅಪಾಯದಿಂದ ಪಾರಾಗಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ ಶಿಕ್ಷಕರಲ್ಲಿ ತಹಶೀನ್ (25) ಎಂಬವರ ಸ್ಥಿತಿ ಗಂಭೀರವಾಗಿದೆ. ಇತರರು ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳೊಂದಿಗೆ ಮಾತನಾಡಿರುವ ಇಂಧನ ಸಚಿವ ಕೆ.ಜೆ ಜಾರ್ಜ್‌, ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಬೀದರ್‌ ಜಿಲ್ಲಾದ್ಯಂತ ಮತದಾರರ ಹೆಸರು ತೆಗೆಸಲು 6,101 ಫಾರಂ-7 ಅರ್ಜಿ ಸಲ್ಲಿಕೆ!

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಂದುವರಿದಿದ್ದು,...

ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುತ್ತಿದೆ. ಹಿಂಗಾರು ಮಳೆಯೂ ಆರಂಭವಾಗುತ್ತಿದೆ. ಪರಿಣಾಮ, ಮುಂದಿನ 4...

ರಾಯಚೂರು | ರೈತರ ಹೊಲಗಳಿಗೆ ಸರ್ವಿಸ್ ರಸ್ತೆ ನಿರ್ಮಿಸದಿದ್ದರೆ ಹೆದ್ದಾರಿ ಕಾಮಗಾರಿ ಬಂದ್: ಅಮರೇಗೌಡ ಪಾಟೀಲ ಬಯ್ಯಾಪುರ

ರಾಷ್ಟ್ರೀಯ ಹೆದ್ದಾರಿ(748 ಎ) ನಿರ್ಮಾಣದಿಂದ ರೈತರಿಗೆ ತಮ್ಮ ಹೊಲಗಳಿಗೆ ತೆರಳಲು ಸರ್ವಿಸ್...

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...