ಚಿಕ್ಕಬಳ್ಳಾಪುರ | ಉದ್ಘಾಟನೆಗೆ ಸಜ್ಜಾದ ರಾಜ್ಯದ ಮೊದಲ ಸರ್ಕಾರಿ ಗೋಶಾಲೆ

Date:

Advertisements

ರಾಜ್ಯದಲ್ಲಿ ಶಂಕುಸ್ಥಾಪನೆಗೊಂಡ ಮೊದಲ ಸರ್ಕಾರಿ ಗೋಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ನಾಗರೆಡ್ಡಿಹಳ್ಳಿಯಲ್ಲಿರುವ ಸರ್ಕಾರಿ ಗೋಶಾಲೆ ಇದೀಗ ಉದ್ಘಾಟನೆಗೆ ಸಜ್ಜಾಗಿದೆ.

ಬಿಜೆಪಿ ಸರ್ಕಾರದ ಭರವಸೆಯಂತೆ 2021ರಲ್ಲಿ ಈ ಸರ್ಕಾರಿ ಗೋಶಾಲೆಯ ಶಂಕುಸ್ಥಾಪನೆಯಾಗಿತ್ತು. ಮಳೆ ಇತ್ಯಾದಿ ಸಮಸ್ಯೆಗಳಿಂದ ಕಳೆದ ಎರಡು ವರ್ಷಗಳಿಂದ ಗೋ ಶಾಲೆಯ ಕಾಮಗಾರಿ ಕುಂಠಿತಗೊಂಡಿತ್ತು. ಎರಡು ವರ್ಷಗಳ ಬಳಿಕ ಇದೀಗ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ.

ಶಿಡ್ಲಘಟ್ಟ ತಾಲೂಕಿನ ನಾಗರೆಡ್ಡಿಹಳ್ಳಿಯ ಸರ್ವೆ ನಂ.41ರಲ್ಲಿರುವ ಸುಮಾರು ಹತ್ತು ಎಕರೆ ವಿಸ್ತೀರ್ಣದಲ್ಲಿ, 50ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಸರ್ಕಾರಿ ಗೋಶಾಲೆಯನ್ನು ನಿರ್ಮಿಸಲಾಗಿದೆ. ಈ ಜಾಗದಲ್ಲಿ ಗೋವುಗಳಿಗಾಗಿ ಶೆಡ್, ಕಾವಲುಗಾರರಿಗೆ ಮನೆ, ಮೇವು ಸಂಗ್ರಹಣೆ, ಚಿಕಿತ್ಸೆ ಹಾಗೂ ಆಹಾರ ದಾಸ್ತಾನು ಮಾಡಲು ಸುಸಜ್ಜಿತ ಕೊಠಡಿಗಳನ್ನು ನಿರ್ಮಿಸಲಾಗಿದೆ.

Advertisements

ಸಾರ್ವಜನಿಕ ಸಹಭಾಗಿತ್ವದಲ್ಲಿ ನಿರ್ವಹಣೆ ಮಾಡಲು ಪಶುಪಾಲನಾ ಇಲಾಖೆ ಅನುಮತಿ ನೀಡಿದ್ದು, ಗೋಶಾಲೆ ನಿರ್ವಹಣೆಯಲ್ಲಿ ಅನುಭವವಿರುವ ಸಾರ್ವಜನಿಕರು, ಸಂಘ ಸಂಸ್ಥೆಗಳು ಅರ್ಜಿ ಸಲ್ಲಿಸಿ ನಿರ್ವಹಣೆ ಹೊಣೆ ಹೊರಬಹುದಾಗಿದೆ. ಪ್ರತೀ ರಾಸಿಗೆ 70ರೂ. ವೆಚ್ಚ ತಗುಲಲಿದ್ದು, ಸರ್ಕಾರದಿಂದ ಶೇ.25ರಷ್ಟು (17ರೂ.) ಹಣ ದೊರೆಯಲಿದೆ. ಬಿಡಾಡಿ ದನಗಳು, ನ್ಯಾಯಾಲಯದಿಂದ ನಿರ್ದೇಶಿಸಲ್ಪಟ್ಟ ರಾಸುಗಳನ್ನು ಇಲ್ಲಿ ಸಾಕಬಹುದಾಗಿದ್ದು, ಪುಣ್ಯಕೋಟಿ ಯೋಜನೆಯಡಿ ವಾರ್ಷಿಕ 11 ಸಾವಿರ ಭರಿಸಿ ಸಾರ್ವಜನಿಕರು ದತ್ತು ಪಡೆಯಬಹುದಾಗಿದೆ.

ಜಿಲ್ಲಾ ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ರವಿ ಈ ಬಗ್ಗೆ ಮಾಹಿತಿ ನೀಡಿದ್ದು, ಜಿಲ್ಲೆಯ ಮೊದಲ ಸರ್ಕಾರಿ ಗೋಶಾಲೆ ಉದ್ಘಾಟನೆಗೆ ಸಜ್ಜಾಗಿದೆ. ಸಾರ್ವಜನಿಕರು, ಸಂಘ ಸಂಸ್ಥೆಗಳು ಜಿಲ್ಲಾ ಉಪನಿರ್ದೇಶಕರು, ಪಶುಪಾಲನಾ ಮತ್ತು ಪಶುವೈದ್ಯ ಇಲಾಖೆ, ಚಿಕ್ಕಬಳ್ಳಾಪುರ ಕಚೇರಿಗೆ ಭೇಟಿ ನೀಡಿ ಜ.15ರೊಳಗೆ ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದ ಅವರು, ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಎಂದಿದ್ದಾರೆ. ಮುಖ್ಯ ಪಶುವೈದ್ಯಾಧಿಕಾರಿ, ಚಿಕ್ಕಬಳ್ಳಾಪುರ-08151-272375, ಬಾಗೇಪಲ್ಲಿ-08150-282223, ಚಿಂತಾಮಣಿ-08154-252106, ಗೌರಿಬಿದನೂರು-08155-285301, ಗುಡಿಬಂಡೆ-08156-261031, ಶಿಡ್ಲಘಟ್ಟ-08158-256225.

ನಿರ್ವಹಣೆ ಷರತ್ತುಗಳು:

  • ಗೋಶಾಲೆ ನಿರ್ವಹಣೆ ಮಾಡುವ ಯಾವುದೇ ವ್ಯಕ್ತಿ ಅಥವಾ ಸಂಘ ಸಂಸ್ಥೆಗಳು ಗೋಶಾಲೆಯಲ್ಲಿರುವ ಜಾನುವಾರುಗಳಿಗೆ ಕನಿಷ್ಠ 3 ತಿಂಗಳಿಗೆ ಅಗತ್ಯವಿರುವ ಮೇವು ಸಂಗ್ರಹಿಸಿಡಬೇಕು.
  • ನಿರ್ವಹಣೆಗಾಗಿ ಅಗತ್ಯ ಸಿಬ್ಬಂದಿ ಇರಬೇಕು. ಸರ್ಕಾರ ಹೊರಡಿಸುವ ಷರತ್ತು ಮತ್ತು ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
  • ಗೋಶಾಲೆ ಜಾಗ, ಕಟ್ಟಡ, ಅಲ್ಲಿನ ಉಪಕರಣಗಳನ್ನು ಅಡಮಾನ ಇಡುವಂತಿಲ್ಲ. ಗುತ್ತಿಗೆಯ ಅವಧಿ ಮುಕ್ತಾಯದ ನಂತರ ಯಥಾಸ್ಥಿತಿ ಜಿಲ್ಲಾ ಪ್ರಾಣಿದಯಾ ಸಂಘ ಸಂಸ್ಥೆಗೆ ಹಿಂದಿರುಗಿಸಬೇಕು.
  • ಗೋಶಾಲೆಯಲ್ಲಿ ರಾಸುಗಳ ದಾಸ್ತಾನು ವಹಿ, ಜನನ ಮರಣ ವಹಿ, ಮೇವು ದಾಸ್ತಾನು ಪುಸ್ತಕ ಹಾಗೂ ಇತರೆ ಸಂಬಂಧಿತ ಎಲ್ಲಾ ದಾಖಲಾತಿಗಳನ್ನು ಚಾಚುತಪ್ಪದೆ ನಿರ್ವಹಿಸಬೇಕು.

ಒಪ್ಪಂದದಂತೆ ನಿರ್ವಹಣೆ ಮಾಡದಿದ್ದಲ್ಲಿ ಜಿಲ್ಲಾ ಪ್ರಾಣಿದಯಾ ಸಂಘದ ನಿರ್ದೇಶನದಂತೆ ಗೋಶಾಲೆಯನ್ನು ಇಲಾಖೆವ ವಶಕ್ಕೆ ಪಡೆಯಲಾಗುವುದು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

Download Eedina App Android / iOS

X