ಚಿಕ್ಕಬಳ್ಳಾಪುರ | ಹಿರಿಯ ವಕೀಲ ದಿ.ಹರಿಕುಮಾರ್‌ ಸ್ಮರಣಾರ್ಥ 8 ದಿನಗಳ ಕ್ರಿಕೆಟ್‌ ಕ್ರೀಡಾಕೂಟ

Date:

Advertisements

ನ್ಯಾಯಾಲಯಗಳ ಕಲಾಪಗಳಲ್ಲಿ ದಿನನಿತ್ಯ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ನ್ಯಾಯಾಧೀಶರು, ವಕೀಲರು ಹಾಗೂ ವಕೀಲರ ಭವನದ ಸಿಬ್ಬಂದಿ ವರ್ಗದವರಿಗೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಕೀಲರ ಸಂಘದ ವತಿಯಿಂದ ನ್ಯಾಯಾಂಗ ಇಲಾಖೆ ಸಹಯೋಗದಲ್ಲಿ ಎಂಟು ದಿನಗಳ ಕ್ರೀಡಾ ಕೂಟ ಆಯೋಜಿಸಲಾಗಿದೆ.

ಚಿಕ್ಕಬಳ್ಳಾಪುರ ನಗರದ ಹೊರವಲಯದಲ್ಲಿರುವ ಸಿವಿವಿ ಕ್ಯಾಂಪಸ್ ಕ್ರೀಡಾಂಗಣದಲ್ಲಿ ಈ ಕ್ರೀಡಾಕೂಟ ಆಯೋಜಿಸಲಾಗಿದೆ. ಮೊದಲ ದಿನವಾದ ನಿನ್ನೆ (ಆ.7) ಹಿರಿಯ ವಕೀಲ ದಿವಂಗತ ಹರಿಕುಮಾರ್ ಅವರ ಸ್ಮರಣಾರ್ಥ ಪುರುಷರ ಹಾಗೂ ಮಹಿಳೆಯರ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸಲಾಗಿತ್ತು.

ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶರಾದ ನೇರಳೆ ವೀರಭದ್ರ ಭಾವನಿ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, “ಉತ್ತಮ ಆರೋಗ್ಯಕ್ಕೆ ದೈಹಿಕ ಚಟುವಟಿಕೆ ಬಹಳ ಮುಖ್ಯ. ನಿರಂತರ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮನುಷ್ಯ ದೈಹಿಕ ಹಾಗೂ ಮಾನಸಿಕವಾಗಿ ಸದೃಢವಾಗಿರಬಹುದು. ಎಷ್ಟೇ ಕೆಲಸಗಳಿರಲಿ ಪ್ರತಿ ದಿನ ಒಂದಿಷ್ಟು ಸಮಯ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಮೀಸಲಿಡಬೇಕು” ಎಂದರು.

Advertisements

ವಕೀಲರ ಸಂಘದ ಅಧ್ಯಕ್ಷ ಕೆ.ವಿ.ಅಭಿಲಾಷ್ ಮಾತನಾಡಿ, “ಒತ್ತಡ ನಿವಾರಣೆಗೆ ಕ್ರೀಡೆಗಳಲ್ಲಿ ಭಾಗವಹಿಸುವಿಕೆ ಮುಖ್ಯ. ಹಾಗಾಗಿ ವಕೀಲರು ಹಾಗೂ ನ್ಯಾಯಾಂಗ ಸಿಬ್ಬಂದಿಗೆ ಪ್ರತಿ ವರ್ಷ ಸಂಘದ ವತಿಯಿಂದ ಕ್ರೀಡಾ ಕೂಟ ಆಯೋಜಿಸಲಾಗುತ್ತಿದೆ. ಎಲ್ಲ ಸಿಬ್ಬಂದಿ ವರ್ಗದವರು ಒಂದು ಕಡೆ ಸೇರಿ ಪರಸ್ಪರ ಪರಿಚಯ, ಕೆಲಸಗಳ ಬಗ್ಗೆ ಸಮಾಲೋಚನೆ ಮಾಡಲು ಈ ವೇದಿಕೆ ಅವಕಾಶ ಒದಗಿಸಿದೆ. ಕ್ರೀಡಾ ಕೂಟ ಆಯೋಜಿಸಲು ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು” ಎಂದರು.

ಇದನ್ನೂ ಓದಿ: ಚಿಕ್ಕಬಳ್ಳಾಪುರ | ಸಿವಿವಿ ದತ್ತಿ ದಿನಾಚರಣೆ: ರಕ್ತದಾನ ಶಿಬಿರಕ್ಕೆ 1500 ವಿದ್ಯಾರ್ಥಿಗಳಿಂದ ಜಾಗೃತಿ

ವಕೀಲ ಸಂಘದ ಕ್ರೀಡಾ ಸಮಿತಿ ಅಧ್ಯಕ್ಷ ಸುಬ್ರಮಣಿ ಮಾತನಾಡಿ, “ಪ್ರತಿನಿತ್ಯ ಕಕ್ಷಿದಾರರಿಗೆ ನ್ಯಾಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಒತ್ತಡದಲ್ಲಿ ಕೆಲಸ ಮಾಡುವ ವಕೀಲರಿಗೆ ಇಂತಹ ಕ್ರೀಡಾ ಕೂಟಗಳಿಂದ ಒಂದಿಷ್ಟು ಮಾನಸಿಕ ಉಲ್ಲಾಸ ನೀಡುತ್ತೆ. ಇದಲ್ಲದೆ ನಿರಂತರ ದೈಹಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆ ಒಳ್ಳೆಯ ಆರೋಗ್ಯ ಕಾಪಾಡಲು ಸಾಧ್ಯ. ಹಾಗಾಗಿ ಪ್ರತಿ ವರ್ಷ ಸಂಘದ ವತಿಯಿಂದ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ” ಎಂದರು.

ಈ ಸಂದರ್ಭದಲ್ಲಿ ಒಂದನೇ ಹೆಚ್ಚುವರಿ ನ್ಯಾಯಾಧೀಶ ಕಾಂತರಾಜ್, ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶೆ ಲತಾ, 2ನೇ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯದರ್ಶಿ ಶಿಲ್ಪ, ವಕೀಲರ ಸಂಘದ ಕಾರ್ಯದರ್ಶಿ ವೆಂಕಟೇಶ್, ಉಪಾಧ್ಯಕ್ಷ ಮುನಿರಾಜು, ಖಜಾಂಚಿ ಅಯೂಬ್, ನಿರ್ದೇಶಕ ಮುನಿರಾಜು, ಅಶ್ವಥ್, ಶ್ರೀನಿವಾಸ್, ಪ್ರವೀಣ್, ರಾಘವೇಂದ್ರ, ಕ್ರೀಡಾ ಸಮಿತಿ ಸದಸ್ಯ ಹರ್ಷವರ್ಧನ್ ಮತ್ತು ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಉಡುಪಿ | ಬ್ರಹ್ಮಾವರ ಪೊಲೀಸ್ ಠಾಣೆಯ 500ಮೀ ವಾಪ್ತಿಯಲ್ಲಿ ಆ.22ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ...

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

Download Eedina App Android / iOS

X