ಚಿಕ್ಕಬಳ್ಳಾಪುರ | ಒಡವೆ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ

Date:

Advertisements

ಒಡವೆ ವಿಚಾರಕ್ಕೆ ಗಂಡ ಹೆಂಡತಿ ನಡುವೆ ನಡೆಯುತ್ತಿದ್ದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ.

ಗೌರಿಬಿದನೂರಿನ ಗಂಗಾನಗರದಲ್ಲಿ ವಾಸವಾಗಿದ್ದ ಲಕ್ಷ್ಮಿದೇವಿ ಮೃತ ದುರ್ದೈವಿ. ಅವರ ಮನೆ ಹೊರಗೆ ಕೆಟ್ಟ ವಾಸನೆ ಬಂದಿದ್ದರಿಂದ ಅನುಮಾನಗೊಂಡ ನೆರೆಹೊರೆಯವರು ಮನೆಯ ಕಿಟಕಿಯಲ್ಲಿ ಇಣುಕಿ ನೋಡಿದ್ದಾರೆ. ಬಳಿಕ ರೂಮಿನ ಮಂಚದ ಮೇಲೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಲಕ್ಷ್ಮಿದೇವಿ ಅವರ ಶವ ಪತ್ತೆಯಾಗಿದೆ. ತಲೆಗೆ ಬಲವಾದ ಏಟು ಬಿದ್ದಿದ್ದರಿಂದ ಲಕ್ಷ್ಮಿದೇವಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸ್ಥಳೀಯರು ಕೂಡಲೇ ಲಕ್ಷ್ಮಿದೇವಿ ಅವರ ಮಕ್ಕಳಿಗೆ ಮತ್ತು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಗೌರಿಬಿದನೂರು ನಗರಠಾಣೆ ಪೊಲೀಸರು ಹಾಗೂ ಚಿಕ್ಕಬಳ್ಳಾಪುರ ಎಸ್‌ಪಿ ಡಿ.ಎಲ್ ನಾಗೇಶ್ ಅವರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

Advertisements

ಲಕ್ಷ್ಮಿದೇವಿ ಅವರ ಪತಿ ಕೃಷ್ಣಪ್ಪ(53) ಸರ್ಕಾರಿ ಶಾಲಾ ಶಿಕ್ಷಕರಾಗಿದ್ದಾರೆ. ಆರ್ಥಿಕವಾಗಿ ಸದೃಢವಾಗಿದ್ದರು. ಆದರೆ ಕೃಷ್ಣಪ್ಪ ತುಂಬಾ ಜಿಪುಣ. ಪತ್ನಿ ಮತ್ತು ಮಕ್ಕಳ ಖರ್ಚಿಗೆ ಹಣ ನೀಡುತ್ತಿರಲಿಲ್ಲ. ಅವರ ಚಿನ್ನಾಭರಣಗಳನ್ನು ಬಳಸಲೂ ಬಿಡುತ್ತಿರಲಿಲ್ಲ. ಅವನ್ನೆಲ್ಲ ಬೀರುವಿನಲ್ಲಿ ಬಂಧಿಸಿದ್ದ. ಇದೇ ವಿಚಾರಕ್ಕೆ ದಂಪತಿ ನಡುವೆ ಆಗಾಗ ಜಗಳ ಆಗುತ್ತಿತ್ತು ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ; ಆರು ಯುವತಿಯರ ರಕ್ಷಣೆ

“ಮೇ 19 ರಂದು ಲಕ್ಷ್ಮಿದೇವಿ ಅವರ ಮಕ್ಕಳು ಮನೆಗೆ ಬಂದಿದ್ದರು. ಈ ವೇಳೆ ಒಡವೆ ವಿಚಾರಕ್ಕೆ ಕೃಷ್ಣಪ್ಪ ಮಚ್ಚಿನಿಂದ ಹೆಂಡತಿಯನ್ನು ಹತ್ಯೆಗೈಯ್ಯಲು ಯತ್ನಿಸಿದ್ದ. ಇದನ್ನು ತಡೆದ ಮಕ್ಕಳು ಅಪ್ಪನಿಗೆ ಬುದ್ಧಿ ಹೇಳಿ ಹೋಗಿದ್ದರು.  ಆದರೆ ಇದೀಗ ಲಕ್ಷ್ಮಿದೇವಿ ಶವವಾಗಿದ್ದಾರೆ. ಇತ್ತ ಕೃಷ್ಣಪ್ಪ ತನ್ನ ಮೊಬೈಲ್ ಫೋನನ್ನು​ ಮಂಚದ ಮೇಲೆಯೇ ಬಿಟ್ಟು ಪರಾರಿಯಾಗಿದ್ದಾನೆ. ಹೀಗಾಗಿ ಜಿಪುಣ ಗಂಡನೇ ಹೆಂಡತಿಯನ್ನು ಕೊಂದಿದ್ದಾನೆ” ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

ಮಗಳು ಲೀಲಾ ಕೃಷ್ಣಪ್ಪನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X