ಚಿಕ್ಕಬಳ್ಳಾಪುರ | ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ನೇಮಕಾತಿಗೆ ಆಗ್ರಹಿಸಿ AIDSO ಪ್ರತಿಭಟನೆ

Date:

ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿವರೆಗೂ ಅತಿಥಿ ಉಪನ್ಯಾಸಕರ ನೇಮಕವಾಗಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು, ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ಹಾಗಾಗಿ ಕೂಡಲೇ ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಬೇಕು ಎಂದು AIDSO ಪ್ರತಿಭಟನೆ ನಡೆಸಿದೆ.

- Advertisement -

AIDSO ರಾಜ್ಯ ಕಾರ್ಯದರ್ಶಿ ಮಂಡಳಿಯ ಸದಸ್ಯ ಲಕ್ಕಪ್ಪ ಸಿ ಬಿ ಮಾತನಾಡಿ, “ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟ್‌ನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿ ಆಗಲಿಲ್ಲ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸುವುದು ಕಡ್ಡಾಯವಲ್ಲ ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ, ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...
WhatsApp Image 2025 09 03 at 4.39.12 PM

ಇದನ್ನೂ ಓದಿ: ಚಿಕ್ಕಬಳ್ಳಾಪುರ | ಪ್ರಶ್ನೆ ಮಾಡಿದವರನ್ನು ರೌಡಿ ಪಟ್ಟಿಗೆ ಸೇರಿಸಲಾಗುತ್ತಿದೆ: ಕೋಡಿಗಲ್ ರಮೇಶ್ ಆರೋಪ

ಈ ಪ್ರತಿಭಟನೆಯ ಅಧ್ಯಕ್ಷತೆಯನ್ನು AIDSO ಜಿಲ್ಲಾ ಸಂಚಾಲಕ ಕಿರಣ್ ಕುಮಾರ್ ವಹಿಸಿದ್ದರು. ಪದವಿ ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿಗಳ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...