ಚಿಕ್ಕಬಳ್ಳಾಪುರ | 2,326 ಮತಗಟ್ಟೆಗಳು, 14,880 ಸಿಬ್ಬಂದಿಗಳೊಂದಿಗೆ ಮತದಾನಕ್ಕೆ ಸಕಲ ಸಿದ್ಧತೆ

Date:

ಚಿಕ್ಕಬಳ್ಳಾಪುರ | 2,326 ಮತಗಟ್ಟೆಗಳು, 14,880 ಸಿಬ್ಬಂದಿಗಳೊಂದಿಗೆ ಮತದಾನಕ್ಕೆ ಸಕಲ ಸಿದ್ಧತೆ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏಪ್ರಿಲ್ 26ರಂದು ನಡೆಯಲಿರುವ ಮತದಾನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಒಟ್ಟು 2,326 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 19,81,347 ಮಂದಿ ಮತದಾರರಿದ್ದು, 9,83,775 ಮಂದಿ ಪುರುಷ ಮತದಾರರು, 9,97,306 ಮಂದಿ ಮಹಿಳಾ ಮತದಾರರು 266 ಲಿಂಗತ್ವ ಅಲ್ಪಸಂಖ್ಯಾತರು ಏ.26ರಂದು ಮತದಾನ ಮಾಡಲಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

19 ಲಕ್ಷ ಮತದಾರರು : 8 ವಿಧಾನಸಭಾ ಕ್ಷೇತ್ರಗಳ ಪೈಕಿ ಒಟ್ಟು 19,81,347 ಮತದಾರರಿದ್ದು, ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,10,885 ಮತದಾರರಿದ್ದಾರೆ. ಇವರಲ್ಲಿ 1,03,832 ಮಂದಿ ಪುರುಷರು, 1,07,050 ಮಂದಿ ಮಹಿಳೆಯರು ಸೇರಿದಂತೆ ಇತರರು ಮೂವರು ಇದ್ದಾರೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,02,830 ಮತದಾರರಿದ್ದಾರೆ. ಇವರಲ್ಲಿ 1,00,200 ಪುರುಷರು, 1,02,603 ಮಹಿಳೆಯರು, ಇತರರು 27 ಮಂದಿ ಇದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,10,567 ಮತದಾರರಿದ್ದಾರೆ. ಇವರಲ್ಲಿ 1,03,316 ಪುರುಷರು, 1,07,236 ಮಹಿಳೆಯರು, ಇತರರು 15 ಮಂದಿ ಮತದಾರರಿದ್ದಾರೆ.

ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 4,58,617 ಮಂದಿ ಮತದಾರರಿದ್ದಾರೆ. ಇವರಲ್ಲಿ 2,32,343 ಪುರುಷರು, 2,26,196 ಮಹಿಳೆಯರು, ಇತರರು 78 ಮಂದಿ ಇದ್ದಾರೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,39,157 ಮತದಾರರಿದ್ದಾರೆ. ಇವರಲ್ಲಿ 1,18,662 ಪುರುಷರು, 1,20,474 ಮಹಿಳೆಯರು, ಇತರರು 21 ಮಂದಿ ಇದ್ದಾರೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,16,704 ಮತದಾರರಿದ್ದಾರೆ. ಇವರಲ್ಲಿ 1,07,245 ಪುರುಷರು, 1,09,443 ಮಹಿಳೆಯರು, ಇತರರು 16 ಮಂದಿ ಇದ್ದಾರೆ. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,20,268 ಮತದಾರರಿದ್ದಾರೆ ಇವರಲ್ಲಿ 1,08,921 ಪುರುಷರು, 1,11,346 ಮಹಿಳೆಯರು, ಇತರರು ಓರ್ವರು ಇದ್ದಾರೆ. ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,22,319 ಮತದಾರರಿದ್ದಾರೆ ಇವರಲ್ಲಿ 1,09,256 ಪುರುಷರು, 1,12,958 ಮಹಿಳೆಯರು, ಇತರರು 105 ಮಂದಿ ಇದ್ದಾರೆ.

2,326 ಮತಗಟ್ಟೆಗಳು : ಒಟ್ಟು 8 ವಿಧಾನಸಭಾ ಕ್ಷೇತ್ರಗಳಲ್ಲಿ 2,326 ಮತಗಟ್ಟೆಗಳಿವೆ. ಈ ಪೈಕಿ ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ 259, ಬಾಗೇಪಲ್ಲಿ 267, ಚಿಕ್ಕಬಳ್ಳಾಪುರ 252, ಯಲಹಂಕ 411, ಹೊಸಕೋಟೆ 293, ದೇವನಹಳ್ಳಿ 292, ದೊಡ್ಡಬಳ್ಳಾಪುರ 276, ನೆಲಮಂಗಲ 276 ಮತಗಟ್ಟೆಗಳಿವೆ. ವಿಶೇಷ ಮತಗಟ್ಟೆಗಳನ್ನು ತೆರೆಯಲಾಗಿದೆ. 40 ಮಹಿಳಾ ಮತಗಟ್ಟೆಗಳು, 8 ವಿಶೇಷಚೇತನರ ಮತಗಟ್ಟೆಗಳು, 8 ಯುವ ನೌಕರರ ಮತಗಟ್ಟೆಗಳು ಹಾಗೂ 8 ಎಥ್ನಿಕ್ ಮತಗಟ್ಟೆಗಳನ್ನು ತೆರೆಯಲಾಗಿದೆ.

14,880 ಸಿಬ್ಬಂದಿ ನಿಯೋಜನೆ : ಲೋಕಸಭಾ ಚುನಾವಣೆ ಪ್ರಕ್ರಿಯೆಗಾಗಿ ಒಟ್ಟು 14,880 ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, 2557 ಮಂದಿ ಪಿಆರ್‌ಓ, 2557 ಎಪಿಆರ್‌ಓ, 2557 ಪಿಒ-1, 2557 ಪಿಒ -2, ಮತ್ತು ಡಿ- ಗ್ರೂಪ್ ನೌಕರರನ್ನು ನಿಯೋಜನೆ ಮಾಡಲಾಗಿದೆ.

ಚೆಕ್ ಪೋಸ್ಟ್‌ಗಳಲ್ಲಿ ಪೊಲೀಸ್ ನಿಗಾ : ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಎಲ್ಲ ಚೆಕ್‌ಪೋಸ್ಟ್‌ಗಳಲ್ಲಿ 24/7 ಗಂಟೆಗಳ ಕಾಲ ನಿಗಾವಹಿಸಲಾಗಿದ್ದು, ವಾಹನಗಳನ್ನು ಪರಿಶೀಲಿಸಿ ಅಕ್ರಮವಾಗಿ ಸಾಗಾಣಿಕೆ ಮಾಡುವ ಮದ್ಯ, ಹಣ ಮತ್ತು ಇತರೆ ಉಡುಗೊರೆಗಳನ್ನು ವಶಕ್ಕೆ ಪಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಸಹಾಯವಾಣಿ : ರಾಜಕೀಯ ಪಕ್ಷಗಳ ಹಾಗೂ ಪಕ್ಷೇತರ ಅಭ್ಯರ್ಥಿಗಳು/ ಕಾರ್ಯಕರ್ತರುಗಳು ಒಡ್ಡುವ ಯಾವುದೇ ಅಮಿಷಗಳಿಗೆ ಸಂಬಂಧಿಸಿದಂತೆ ದೂರುಗಳನ್ನು CVigil App ಮೂಲಕ ದಾಖಲಿಸಬಹುದಾಗಿದೆ ಮತ್ತು ಜಿಲ್ಲಾ ಮಟ್ಟದಲ್ಲಿ ತೆರಯಲಾಗಿರುವ ಕಂಟ್ರೋಲ್ ರೂಂ ನಂ. 1950 ಮತ್ತು 08156-277071ಕ್ಕೆ ಕರೆ ಮಾಡಿ ದೂರುಗಳನ್ನು ನೀಡಬಹುದಾಗಿದೆ.

ನಿಷೇದಾಜ್ಞೆ ಜಾರಿ : ದಂಡ ಪ್ರಕ್ರಿಯೆ ಸಂಹಿತೆ–1973ರ ಕಲಂ 144 ರಡಿ ಮತದಾನದ ಪೂರ್ವ 48 ಗಂಟೆಗಳು ಅಂದರೆ ಏಪ್ರಿಲ್ 24ರ ಸಂಜೆ 6 ಗಂಟೆಯಿಂದ 27 ರ ಬೆಳಿಗ್ಗೆ 6 ಗಂಟೆಯವರೆಗೂ ಜಿಲ್ಲಾದ್ಯಂತ ನಿಷೇದಾಜ್ಞೆ ಜಾರಿ ಮಾಡಿ ಆದೇಶಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ಸಭೆ, ಸಮಾರಂಭ ಮತ್ತು ಧ್ವನಿವರ್ಧಕ ಬಳಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಸಕಾರಣವಿಲ್ಲದೇ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದನ್ನು ಅಥವಾ ಗುಂಪು ಕೂಡುವುದನ್ನು ನಿಷೇಧಿಸಿದೆ. ಯಾವುದೇ ಆಯುಧಗಳು ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಿದೆ ಮತ್ತು ಈ ಅವಧಿಯಲ್ಲಿ ಯಾವುದೇ ಸಂತೆ, ಜಾತ್ರೆ ಮತ್ತು ಇತರೆ ಜನಸಮೂಹಗಳನ್ನು ನಿಷೇಧಿಸಿದೆ.

ಬಹಿರಂಗ ಪ್ರಚಾರ ಏಪ್ರಿಲ್ 24 ರಂದು ಸಂಜೆ 6 ಗಂಟೆಗೆ ಕೊನೆಗೊಂಡಿದ್ದು, ಈ ಅವಧಿಯ ನಂತರ ಚಿಕ್ಕಬಳ್ಳಾಪುರ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗಲು ಜಿಲ್ಲಾಡಳಿತ ಸೂಚಿಸಿದೆ. ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು, ಹೋಟೆಲ್‌ಗಳು ಮತ್ತು ಅತಿಥಿ ಗೃಹಗಳಲ್ಲಿ ವಾಸ್ತವ್ಯ ಹೂಡಿದವರ ಪಟ್ಟಿ ಪರಿಶೀಲಿಸಿ, ಕ್ಷೇತ್ರದ ಮತದಾರರಲ್ಲದವರನ್ನು ಹೊರಗೆ ಕಳುಹಿಸಲು ಸೂಚಿಸಲಾಗಿದೆ.

ಒಣ ದಿನ ಘೋಷಣೆ : ಚಿಕ್ಕಬಳ್ಳಾಪುರ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 24ರ ಸಂಜೆ 6 ಗಂಟೆಯಿಂದ 26ರ ಮಧ್ಯರಾತ್ರಿ 12 ಗಂಟೆಯವರೆಗೂ ಒಣ ದಿನವನ್ನು ಘೋಷಿಸಲಾಗಿದ್ದು, ಈ ಅವಧಿಯಲ್ಲಿ ಎಲ್ಲಾ ಮದ್ಯದ ಅಂಗಡಿಗಳು ಮುಚ್ಚಲು ಸೂಚಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಗೆ ಒಟ್ಟು 3 CAPF ಕಂಪನಿಗಳು ನಿಯೋಜಿಸಲಾಗಿದ್ದು, ಈ ಎಲ್ಲಾ CAPF Companyಗಳನ್ನು Critical, Vulnerable ಮತಗಟ್ಟೆಗಳಿಗೆ ಹಾಗೂ Cluster Boothಗಳಿಗೆ ಭದ್ರತೆಗಾಗಿ ನಿಯೋಜಿಸಲಾಗಿದೆ.

ಮತದಾನ ದಿನದಂದು ಯಾವುದೇ ಅಭ್ಯರ್ಥಿಯು ಮತಗಟ್ಟೆ ವ್ಯಾಪ್ತಿಯ 100 ಮೀಟರ್ ಒಳಗೆ ಪ್ರಚಾರ ಮಾಡುವಂತಿಲ್ಲ.

ಮತಗಟ್ಟೆಗಳ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಪೋನ್, ಕಾರ್ಡ್ಲೆಸ್ ಪೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. (ಚುನಾವಣಾ ಕಾರ್ಯದಲ್ಲಿ ನಿರತರಾದ ಅಧಿಕಾರಿಗಳು/ಸಿಬ್ಬಂದಿಗಳನ್ನು ಹೊರತುಪಡಿಸಿ).

ಮೂಲಭೂತ ಸೌಕರ್ಯ ವ್ಯವಸ್ಥೆ : ಮತಗಟ್ಟೆಗಳಲ್ಲಿ ಕುಡಿಯುವ ನೀರು, ವಿದ್ಯುತ್, ಶೌಚಾಲಯ, ನೆರಳಿನ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ. ವಿಶೇಷ ಚೇತನರಿಗೆ ಗಾಲಿಕುರ್ಚಿ, ರ್ಯಾಂಪ್ ವ್ಯವಸ್ಥೆ ಇದೆ. ವೋಟರ್ ಸ್ಲಿಪ್‌ಗಳನ್ನು ಬಿಎಲ್‌ಒಗಳ ಮೂಲಕ ತಲುಪಿಸಲಾಗಿದೆ.

ವಿಧಾನಸಭಾ ಕ್ಷೇತ್ರವಾರು ಗುರುತಿಸಲಾಗಿರುವ ಕೇಂದ್ರಗಳಲ್ಲಿ ಮಸ್ಟರಿಂಗ್, ಡಿ ಮಸ್ಟರಿಂಗ್ ನಡೆಯಲಿದ್ದು, ಬಳಿಕ ಮತ ಚಲಾವಣೆಯಾದ ಇವಿಎಂಗಳನ್ನು ಪೊಲೀಸ್ ಬಿಗಿ ಭದ್ರತೆಯೊಂದಿಗೆ ಜಿಪಿಎಸ್ ಅಳವಡಿಕೆಯ ಕ್ಲೋಸ್ಡ್ ಕಂಟೈನರ್ ವಾಹನದಲ್ಲಿ ನಾಗಾರ್ಜುನ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಥಾಪಿಸಿರುವ ಸ್ಟ್ರಾಂಗ್ ರೂಂಗೆ ತಂದು ಇಡಲಾಗುತ್ತದೆ. ಇಲ್ಲಿಯೇ ಜೂನ್ 4 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಆನ್ವರಿ ಗ್ರಾಮಕ್ಕೆ ರೈತ ಸಂಪರ್ಕ ಕೇಂದ್ರ ಮಂಜೂರು ಮಾಡುವಂತೆ ಆಗ್ರಹ

ಶಾಂತಿಯುತ ಮತ್ತು ಕಡ್ಡಾಯ ಮತದಾನಕ್ಕೆ ಡಿಸಿ ಮನವಿ : ಏಪ್ರಿಲ್ 26ರಂದು ಬೆಳಿಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಶಾಂತಿಯುತ ಮತದಾನ ಪ್ರಕ್ರಿಯೆಗೆ ಸಮರ್ಪಕವಾಗಿ ಎಲ್ಲ ಸಿದ್ದತಾ ಕ್ರಮಗಳನ್ನು ಪೂರ್ಣಗೊಳಿಸಲಾಗಿದೆ. ಮತದಾರರು ತಪ್ಪದೇ ಮತದಾನ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ಎರಡು ವರ್ಷಗಳ ಪ್ರೀತಿಗೆ ಪೋಷಕರ ವಿರೋಧ; ಕೃಷಿ ಹೊಂಡಕ್ಕೆ ಹಾರಿ ಪ್ರೇಮಿಗಳು ಆತ್ಮಹತ್ಯೆ

ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿಯು...

ಈ ದಿನ.ಕಾಮ್ ವರದಿ ಫಲಶೃತಿ | ಕೊನೆಗೂ ಶತಾಯುಷಿ ಅಜ್ಜಿಯ ಖಾತೆಗೆ ಜಮೆಯಾಯ್ತು ವೃದ್ದಾಪ್ಯ ವೇತನ

ಭಾಲ್ಕಿ ತಾಲೂಕಿನ ಕಪಲಾಪುರ ಗ್ರಾಮದ ಲಕ್ಷ್ಮೀಬಾಯಿ ಮಹಾಪುರೆ ಎಂಬ 110 ವರ್ಷದ...

ಕೊಡಗು | ಜನರ ಸಮಸ್ಯೆಗಳನ್ನು ಕಾರ್ಯಾಂಗದ ಮೂಲಕ‌ ಪರಿಹರಿಸುವುದು ಶಾಸಕಾಂಗದ ಕರ್ತವ್ಯ: ಶಾಸಕ ಡಾ ಮಂತರ್ ಗೌಡ

"ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಕೆಲಸಗಳನ್ನು ಕಾರ್ಯಾಂಗದ ಮೂಲಕ ಪರಿಹರಿಸುವುದು ಶಾಸಕಾಂಗದ ಕರ್ತವ್ಯ" ...