ಚಿಕ್ಕಬಳ್ಳಾಪುರ | ತಜ್ಞ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ

ಚಿಕ್ಕಬಳ್ಳಾಪುರ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗೆ ಎಂಬಿಬಿಎಸ್ ವಿದ್ಯಾರ್ಹತೆ ಹೊಂದಿರುವ ಹಾಗೂ ತಜ್ಙ ವೈದ್ಯರನ್ನು “ಆದ್ಯತೆ ಮೇರೆಗೆ” ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಮಹೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆಗೆ ತಿಳಿಸಿದ್ದು, “ಅರ್ಜಿ ನಮೂನೆ, ಹುದ್ದೆ ಖಾಲಿಯಿರುವ ಸ್ಥಳಗಳ ವಿವರ ಮತ್ತು ಇತರೆ ಮಾಹಿತಿಯನ್ನು www.chikkaballapur.nic.in ಜಾಲತಾಣದಲ್ಲಿ ಪಡೆಯಬಹುದಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಎಚ್ಎಸ್ಆರ್‌ಪಿ ಫಲಕಗಳಿಲ್ಲದೆ ರಸ್ತೆಗಿಳಿದ ಹೊಸ ಬಸ್‌ಗಳು; ಸರ್ಕಾರದ ವಿರುದ್ಧ ಸಾರ್ವಜನಿಕರ ಆರೋಪ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಆಸಕ್ತರು ಮಾರ್ಚ್‌ 13ರ ಸಂಜೆ 5ರೊಳಗೆ ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಎಲ್ಲ ಅರ್ಜಿದಾರರು ಮಾರ್ಚ್‌ 14ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಮೂಲ ದಾಖಲೆಗಳೊಂದಿಗೆ ಪರಿಶೀಲನೆಗಾಗಿ ಖುದ್ದಾಗಿ ಹಾಜರಾಗಬೇಕು” ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here