ಚಿಕ್ಕಬಳ್ಳಾಪುರ ತಾಲೂಕಿನ ವರದಹಳ್ಳಿ ಗ್ರಾಮದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಫೆಬ್ರವರಿ 27ರಿಂದ ಮೇ 25ರವರೆಗೆ ಗ್ರಾಮದ ಒಂದು ಕಿಲೋಮೀಟರ್ ವ್ಯಾಪ್ತಿಯ ಸುತ್ತಮುತ್ತ ಕೋಳಿಗಳನ್ನು ತರುವುದನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ಆದೇಶಿಸಿದ್ದಾರೆ.
ಈ ಕುರಿತು ಪತ್ರಿಕೆ ಪ್ರಕಟಣೆ ಹೊರಡಿಸಿರುವ ಅವರು, “ತಾಲೂಕಿನ ವರದಹಳ್ಳಿ ಗ್ರಾಮದಲ್ಲಿ ಕಾಣಿಸಿಕೊಂಡಿರುವ ಹಕ್ಕಿಜ್ವರ ಸೋಂಕು ನಿಯಂತ್ರಿಸುವ ಮೂಲಕ ರೋಗ ಬೇರೆಡೆಗೆ ಹರಡದಂತೆ ಹಲವು ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ವರದಹಳ್ಳಿಯಲ್ಲಿ ಹಕ್ಕಿಜ್ವರ ಪ್ರಕರಣ ಪತ್ತೆ; 442 ಕೋಳಿಗಳ ಮಾರಣಹೋಮ
“ವರದಹಳ್ಳಿಯಲ್ಲಿ ಈಗಾಗಲೇ ಸಾವನ್ನಪಿದ ಕೋಳಿಗಳಲ್ಲಿ ಹಕ್ಕಿಜ್ವರದ ಸೋಂಕು ಪತ್ತೆಯಾಗಿ ದೃಢಪಟ್ಟಿರುವ ಕಾರಣ ಈ ಗ್ರಾಮವನ್ನು ಕೇಂದ್ರವಾಗಿಸಿಕೊಂಡಿದ್ದು, ಸುತ್ತಲೂ ಒಂದು ಕಿಮೀ ವ್ಯಾಪ್ತಿಯಲ್ಲಿ ಕೋಳಿ ಸಾಗಾಣಿಕೆ ಮೇಲೆ ನಿರ್ಬಂಧ ಹೇರಲಾಗಿದೆ. ಅಲ್ಲದೆ, ಹೊರಗಡೆಯಿಂದ ವರದಹಳ್ಳಿ ಸುತ್ತಮುತ್ತಲ ಗ್ರಾಮಗಳಿಗೆ ಕೋಳಿಗಳನ್ನು ತರದಂತೆ ನಾಕಾಬಂಧಿ ಹಾಕಿದ್ದು, ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ” ಎಂದು ಹೇಳಿದರು.