ಚಿಕ್ಕಬಳ್ಳಾಪುರ | ಕಾಂಗ್ರೆಸ್‌ನ ಮೂರು ವರ್ಷದ ಸಾಧನೆ ಶೂನ್ಯ: ಛಲವಾದಿ ನಾರಾಯಣಸ್ವಾಮಿ ಟೀಕೆ

Date:

ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಮೂರು ವರ್ಷದ ಸಾಧನಾ ಸಮಾವೇಶವು ಕೇವಲ ಮಾತಿನ ಸಮಾವೇಶವಾಗಿದ್ದು,ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಶೂನ್ಯವಾಗಿದೆ ಇದು ಸಾಧನಾ ಸಮಾವೇಶವಲ್ಲ,ಜನರ ವೇದನಾ ಸಮಾವೇಶ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದರು.

- Advertisement -

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜನಪರ ಆಡಳಿತ ನೀಡಲು ವಿಫಲವಾದ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ ನಡೆಸುತ್ತಿರುವುದು ವಿಪರ್ಯಾಸ ಕಳೆದ ಮೂರು ವರ್ಷಗಳಲ್ಲಿ ಆಡಳಿತ ಸಂಪೂರ್ಣ ವೈಫಲ್ಯ ಕಂಡಿದ್ದು,ಯಾವುದೇ ಸಾಧನೆ ಮಾಡದೇ ಸಾಧನಾ ಸಮಾವೇಶ ನಡೆಸುತ್ತಿದ್ದಾರೆ ಎಂದು ಕುಟುಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಾದ ಹಣ ದುರುಪಯೋಗವಾಗಿದೆ ಎಂಬ ಆರೋಪವೂ ಕೇಳಿಬಂದಿದೆ ಇದೇ ಇವರ ಮೂರು ವರ್ಷದ ಸಾಧನೆ, ದಲಿತರಿಗೆ ಅನ್ಯಾಯ ಮಾಡಿರುವುದೇ ಇವರ ಸಾಧನೆ,ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಹಣ ದುರುಪಯೋಗ ಮಾಡಿರುವುದೇ ಸಾಧನೆ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. 130ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಿ ಜನರು ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತಂದಿದ್ದಾರೆ.ಆದರೆ ಜನರ ಪ್ರಶ್ನೆಗಳಿಗೆ ಉತ್ತರಿಸದೇ,ಐದು ವರ್ಷ ಲೂಟಿ ಮಾಡಿ ಹೋಗುವ ಮನೋಭಾವದ ಆಡಳಿತ ಕಾಂಗ್ರೆಸ್ ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.ರಾಜ್ಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು,ಹಲವರು ಆತ್ಮಹತ್ಯೆ ಮಾಡಿಕೊಂಡಿದ್ದರೂ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಐದಾರು ತಿಂಗಳಿಗೊಮ್ಮೆ ಮಾತ್ರ ನೀಡಲಾಗುತ್ತಿದೆ.ಇದೇನಾ ನುಡಿದಂತೆ ನಡೆದ ಸರ್ಕಾರ ಎಂದು ಪ್ರಶ್ನಿಸಿದರು.

ಅಂತರರಾಷ್ಟ್ರೀಯ ಮಟ್ಟದಲ್ಲಿ ಉಂಟಾದ ಸಮಸ್ಯೆಗಳ ಪರಿಣಾಮವಾಗಿ ಇಂಧನ ಬೆಲೆ ಏರಿಕೆಯಾಗಿದ್ದು, ಭಾರತದಲ್ಲೂ ಮೂರು ರೂಪಾಯಿ ಹೆಚ್ಚಳವಾಗಿದೆ. ಇದನ್ನೇ ದೊಡ್ಡ ವಿಚಾರವಾಗಿ ಕಾಂಗ್ರೆಸ್ ಟೀಕಿಸುತ್ತಿದೆ. ಆದರೆ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಅನೇಕ ಬಾರಿ ಇಂಧನ ಬೆಲೆ ಏರಿಕೆ ಮಾಡಲಾಗಿತ್ತು.ಅದರ ಬಗ್ಗೆ ಉತ್ತರಿಸಲಿ ಎಂದು ಪ್ರಶ್ನಿಸಿದರು.

ಹಿಂದೆ ಬಿಜೆಪಿ ಸರ್ಕಾರವನ್ನು 40 ಪರ್ಸೆಂಟ್ ಸರ್ಕಾರ ಎಂದು ಕಾಂಗ್ರೆಸ್ ಆರೋಪಿಸಿತ್ತು.ಅಂದು ಯಾರ ಕೈಯಲ್ಲಿ ಆ ಆರೋಪ ಮಾಡಿಸಿತೋ,ಇಂದು ಅವರೆ ಕಾಂಗ್ರೆಸ್ ಸರ್ಕಾರವನ್ನು 80 ಪರ್ಸೆಂಟ್ ಸರ್ಕಾರ ಎಂದು ಹೇಳುತ್ತಿದ್ದಾರೆ.ಇದನ್ನು ಕಾಂಗ್ರೆಸ್ ಒಪ್ಪಿಕೊಳ್ಳುತ್ತದೆಯೇ ಎಂದ ಅವರು ಮೂರು ವರ್ಷದ ಆಡಳಿತದ ವೈಫಲ್ಯಗಳ ದೊಡ್ಡ ಪಟ್ಟಿಯನ್ನೇ ಮಾಡಬಹುದು ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಇದನ್ನು ಓದಿದ್ದೀರಾ..? ಚಿಕ್ಕಬಳ್ಳಾಪುರ | ಕೋರ್ಟಿನ ಮೂಲಕ ನ್ಯಾಯಪಡೆದ ಶಿಕ್ಷಕರಿಗೆ ನೇಮಕಾತಿಪತ್ರ ವಿತರಿಸಿದ ಡಿಡಿಪಿಐ

ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಆಡಳಿತದಲ್ಲಿ ಯಾವುದೇ ಸಾಧನೆ ನಡೆದಿಲ್ಲ.ಹಾಗಿದ್ದರೂ ಯಾವ ಮುಖದಿಂದ ಸಾಧನಾ ಸಮಾವೇಶ ಮಾಡುತ್ತಿದ್ದಾರೆ ಎಂಬುದು ಇವರಿಗೆ ಗೊತ್ತಾಗಲಿ ಇವರ ಆಡಳಿತ ಅವಧಿಯಲ್ಲಿ ರಾಜ್ಯದ ಅಭಿವೃದ್ಧಿಯೇ ಕುಂಠಿತಗೊಂಡಿದೆ. ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಸರಿಯಾಗಿ ನೀಡಲು ಸರ್ಕಾರ ವಿಫಲವಾಗಿದೆ. ಈಗಾಗಲೇ ಜನರು ಸರ್ಕಾರದ ವಿರುದ್ಧ ಬೇಸತ್ತು ಹೋಗಿದ್ದಾರೆ.2028ರ ಚುನಾವಣೆಯಲ್ಲಿ ಎನ್‌ಡಿಎ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಮರಳಕುಂಟೆ ಕೃಷ್ಣಮೂರ್ತಿ,ನಗರ ಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ,ಪ್ರಧಾನ ಕಾರ್ಯದರ್ಶಿ ಕೆ.ಬಿ.ಮುರಳಿ,ರಾಜ್ಯ ಪರಿಷತ್ ಸದಸ್ಯ ಎ.ಬಿ.ಬೈರೇಗೌಡ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಲಕ್ಷ್ಮಿಪತಿ, ಜಿಲ್ಲಾ ಕಾರ್ಯದರ್ಶಿ ಆರ್. ಎನ್. ಅಶೋಕ್, ಜಿಲ್ಲಾ ಮುಖಂಡ ಬಾಲಕುಂಟೆ ಗಂಗಾಧರಪ್ಪ,ಗ್ರಾಮಾಂತರ ಮಂಡಲ ಅಧ್ಯಕ್ಷ ಪ್ರಭಾಕರ್ ರೆಡ್ಡಿ,ನಗರ ಮಂಡಲ ಅಧ್ಯಕ್ಷ ತೇಜೇಂದ್ರ ಪಾಪು, ರಾಷ್ಟ್ರೀಯ ಪರಿಷತ್ ಸದಸ್ಯ ಲಕ್ಷ್ಮೀನಾರಾಯಣ ಗುಪ್ತ,ಜಿಲ್ಲಾ ಮಾಧ್ಯಮ ಸಂಚಾಲಕ ವಿ.ಮಧುಚಂದ್ರ, ನಗರ ಪ್ರಧಾನ ಕಾರ್ಯದರ್ಶಿ ನರೇಂದ್ರಬಾಬು, ಏರ್ಪೋರ್ಟ್ ಮುನಿರಾಜು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...