ಸಿವಿವಿ ದತ್ತಿ ದಿನಾಚರಣೆ ಅಂಗವಾಗಿ ಜುಲೈ 23ರ ಬುಧವಾರ ಚಿಕ್ಕಬಳ್ಳಾಪುರ ನಗರದ ಹೊರವಲಯದಲ್ಲಿರುವ ಸಿವಿವಿ ಕ್ಯಾಂಪಸ್ ನಲ್ಲಿ ಮೇಘ ರಕ್ತದಾನ ಶಿಬಿರಕ್ಕೆ ವೇದಿಕೆ ಸಿದ್ಧವಾಗಿದೆ.
5000 ಯುನಿಟ್ ರಕ್ತ ಸಂಗ್ರಹಿಸಲು ಗುರಿ ಹೊಂದಲಾಗಿದ್ದು, ಎರಡು ದತ್ತಿಗಳ 1500 ಕ್ಕೂ ಹೆಚ್ಚು ವಿಧ್ಯಾರ್ಥಿಗಳಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ರಕ್ತದಾನ ಕುರಿತು ಜಾಗೃತಿ ಮೂಡಿಸಲಾಯಿತು. ಜಾಗೃತಿ ಜಾಗವನ್ನು ಕೆ.ವಿ ಮತ್ತು ಪಂಚಗಿರಿ ವಿದ್ಯಾ ದತ್ತಿಗಳ ಅಧ್ಯಕ್ಷ ಕೆ.ವಿ. ನವೀನ್ ಕಿರಣ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, “ಇಂದಿಗೂ ಬಹಳಷ್ಟು ಜನರಲ್ಲಿ ರಕ್ತದಾನದ ಬಗ್ಗೆ ತಪ್ಪು ಕಲ್ಪನೆ ಇದ್ದು, ಅದನ್ನು ದೂರ ಮಾಡಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಇಂದು ರಕ್ತದಾನದ ಮಹತ್ವದ ಕುರಿತು ವಿದ್ಯಾರ್ಥಿಗಳು ಜಾಥಾದ ಮೂಲಕ ಜನರಲ್ಲಿ ಅರಿವು ಮೂಡಿಸಿದ್ದಾರೆ. ಪ್ರಸ್ತುತ ವರ್ಷದಲ್ಲಿ ರಕ್ತದಾನ ಮಾಡುವವರು ತಮ್ಮ ವಿವರವನ್ನು ಡಿಜಿಟಲ್ ಮುಖಾಂತರ ನೋಂದಾಯಿಸಿಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಶಿಬಿರದ ದಿನದಂದು ಬರುವ ರಕ್ತದಾನಿಗಳಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ನೋಂದಣಿ ಮಾಡುತ್ತಿರುವವರೆಲ್ಲ ರಕ್ತದಾನ ಮಾಡಿ ಜೀವ ಉಳಿಸುವ ಕೆಲಸಕ್ಕೆ ಕೈಜೋಡಿಸಬೇಕು.” ಎಂದು ಮನವಿ ಮಾಡಿದರು.
ಇದನ್ನೂ ಓದಿ: ಚಿಕ್ಕಬಳ್ಳಾಪುರ | ಗ್ರಾಮ ಪಂ. ಅಧ್ಯಕ್ಷೆಗೆ ‘ಐ ಲವ್ ಯು’ ಎಂದಿದ್ದ ಪಿಡಿಒ ವಿರುದ್ಧ ಎಫ್‌ಐಆರ್
