ಚಿಕ್ಕಬಳ್ಳಾಪುರ | ಅಮಾನಿ ಬೈರಸಾಗರ ಕೆರೆಯಲ್ಲಿ ಮೀನುಗಳ ಸಾವು; ಪ್ರಯೋಗಾಲಯಕ್ಕೆ ನೀರು ರವಾನೆ

Date:

  • ಅಮಾನಿ ಬೈರಸಾಗರ ಕೆರೆದಡದಲ್ಲಿ ತೇಲುತ್ತಿದ್ದ ಮೀನುಗಳ ಕಳೇಬರ
  • ಕಳಪೆ ಆಹಾರ ತಿಂದು ಮೀನುಗಳು ಸತ್ತಿರಬಹುದೆಂಬ ಶಂಕೆ

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಅಮಾನಿ ಬೈರಸಾಗರ ಕೆರೆಯಲ್ಲಿ ಮೀನುಗಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿವೆ. ವಿಷಪೂರಿತ ಅಹಾರದಿಂದಲೂ ಮೀನುಗಳು ಮೃತಪಟ್ಟಿರಬಹುದು ಎಂದು ಸಾರ್ವಜನಿಕರು ಶಂಕಿಸಿದ್ದಾರೆ. ಘಟನಾ ಸ್ಥಳಕ್ಕೆ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹವಾಮಾನ ವೈಪರೀತ್ಯ ಹಾಗೂ ಇತರೆ ಕಾರಣದಿಂದ ಮೀನುಗಳು ಮೃತಪಟ್ಟಿರಬಹುದು. ಕೆರೆಯ ನೀರನ್ನು ಪರಿಕ್ಷೇಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗುವುದು ಎಂದು ಬಾಗೇಪಲ್ಲಿ ಮೀನುಗಾರಿಕೆ ಇಲಾಖೆಯ ಸಹಾಯಕ ಅಧಿಕಾರಿ ದಾದಾಪೀರ್ ತಿಳಿಸಿದ್ದಾರೆ.

ಸ್ಥಳೀಯ ದಸಂಸ ಮುಖಂಡ ಗುಡಿಬಂಡೆ ಗಂಗಪ್ಪ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಕಳೆದ ಮೂರು ದಿನಗಳಿಂದ ಪಟ್ಟಣದ ಹೊರವಲಯದಲ್ಲಿರುವ ಅಮಾನಿ ಬೈರಸಾಗರ ಕೆರೆ ದಡದ ಸುತ್ತಮುತ್ತ ಮೀನುಗಳ ಕಳೇಬರ ತೇಲುತ್ತಿದ್ದು, ದುರ್ವಾಸನೆ ಬೀರುತ್ತಿದೆ. ಬೆಳಿಗ್ಗೆ ಸಂಜೆ ವಾಯುವಿಹಾರಕ್ಕೆ ತೆರಳುವ ಸಾರ್ವಜನಿಕರು ಮೂಗು ಮುಚ್ಚಿಕೊಂಡು ತಿರುಗುವಂತಾಗಿದೆ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಳಪೆ ಆಹಾರವನ್ನು ಕೆರೆಗೆ ಸುರಿದಿದ್ದರಿಂದ ಅದನ್ನು ಮೀನುಗಳು ತಿಂದು ಸತ್ತಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಕೆರೆಯ ನೀರನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ವಾಸ್ತವ ಸಂಗತಿ ಏನೆಂಬುದು ಖಚಿತವಾಗುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಗೂಡ್ಸ್‌ ವಾಹನದಲ್ಲಿ ಸಾಗಿಸುತ್ತಿದ್ದ ₹36 ಲಕ್ಷ ಮೌಲ್ಯದ ಮದ್ಯ ವಶ

“ನೀರಿನಲ್ಲಿ ಅಮ್ಲಜನಕದ ಏರುಪೇರು ಉಂಟಾಗಿ ಮೀನುಗಳು ಮೃತಪಟ್ಟಿರಬಹುದು. ಕೆಲವರು ಕೆರೆಯಲ್ಲಿ ರಾಸಾಯನಿಕ ಬೆರೆಸಿರುವ ಕಾರಣ ಮೀನುಗಳು ಸಾಯುತ್ತಿವೆ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಮೇಲ್ನೋಟಕ್ಕೆ ಹಾಗೇ ಮಾಡಿಲ್ಲ ಎಂದು ಕಂಡುಬಂದಿದೆ. ಆದರೂ ಕೆರೆಯ ನೀರನ್ನು ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ಪರೀಕ್ಷೆ ವರದಿ ಬಂದ ಬಳಿಕ ನಿಖರ ಮಾಹಿತಿ ತಿಳಿಯಲಿದೆ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ” ಎಂದು ಬಾಗೇಪಲ್ಲಿ ಮೀನುಗಾರಿಕೆ ಇಲಾಖೆಯ ಸಹಾಯಕ ದಾದಾಪೀರ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಹುಬ್ಬಳ್ಳಿ | ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ

ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನೊಳಗೆ ನುಗ್ಗಿ ವಿದ್ಯಾರ್ಥಿನಿಯೋರ್ವಳಿಗೆ ಯುವಕನೋರ್ವ ಮನಬಂದಂತೆ ಚಾಕುವಿನಿಂದ...

ದಾವಣಗೆರೆ | ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸೌಭಾಗ್ಯ ಬೀಳಗಿಮಠ 101ನೇ ರ್‍ಯಾಂಕ್‌; ಜಿಲ್ಲಾಧಿಕಾರಿಯಿಂದ ಸನ್ಮಾನ

ದ್ವಿತೀಯ ಪಿಯುಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‌ಸಿ...