ಚಿಕ್ಕಬಳ್ಳಾಪುರ | ಚಿತ್ರದುರ್ಗ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಜಿಲ್ಲೆಯಿಂದ 100 ಬಸ್ಸು ವ್ಯವಸ್ಥೆ : ಸೀಕಲ್ ರಾಮಚಂದ್ರಗೌಡ

Date:

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷಗಳ ಸುದೀರ್ಘ ರಾಜಕೀಯ ಮತ್ತು ಜನಸೇವೆಯ ಅಂಗವಾಗಿ ಇದೇ ತಿಂಗಳ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಸಹಸ್ರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿದ್ದು, ಎಲ್ಲ ವರ್ಗದವರಿಗೂ ಯೋಜನೆ ರೂಪಿಸಿದ ನಾಯಕನನ್ನು ಅಭಿನಂದಿಸಲು ಪ್ರತಿಯೊಬ್ಬರೂ ಆಗಮಿಸಬೇಕೆಂದು ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಸೀಕಲ್ ರಾಮಚಂದ್ರಗೌಡ ತಿಳಿಸಿದ್ದಾರೆ.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಕಾರ್ಯಕರ್ತರನ್ನು ಕರೆತರಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯಿಂದ ಕನಿಷ್ಠ 100 ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು.

ಯಡಿಯೂರಪ್ಪ ಗುಡುಗಿದರೆ ವಿಧಾನಸೌಧ ನಡುಗುತ್ತದೆ ಎಂಬ ಮಾತಿತ್ತು.ಅದರಂತೆ ರಾಜ್ಯದ ಮಹಿಳೆಯರು, ವೃದ್ಧರು,ವಿದ್ಯಾರ್ಥಿಗಳು ಸೇರಿ ಎಲ್ಲರ ಹಿತಕ್ಕಾಗಿ ಶ್ರಮಿಸಿದ ಬಿ.ಎಸ್.ಯಡಿಯೂರಪ್ಪ ಅವರ ಸಾರ್ವಜನಿಕ ಜೀವನ 50 ಪೂರೈಸಿದ ಹಿನ್ನೆಲೆಯಲ್ಲಿ ಅಭಿನಂದನೋತ್ಸವ ಮಾಡುತ್ತಿದ್ದು,ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವಂತೆ ಕೋರಿದ ಅವರು ಅರ್ಧಶತಮಾನದ ಕಾಲ ಸಾರ್ವಜನಿಕ ಜೀವನದಲ್ಲಿದ್ದು, ಜೀವನದುದ್ದಕ್ಕೂ ಜನಹಿತಕ್ಕಾಗಿ ಶ್ರಮಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ರಾಜಕೀಯ ಜೀವನದಲ್ಲಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬಿಎಸ್‌ವೈ ಅಭಿಮಾನೋತ್ಸವವನ್ನು ಚಿತ್ರದುರ್ಗ ನಗರದಲ್ಲಿ ಆಯೋಜಿಸಲಾಗಿದೆ ಎಂದರು.

ತಮ್ಮ ಅಧಿಕಾರ ಅವಧಿಯಲ್ಲಿ ಬಿಎಸ್‌ವೈ ಅವರು ವಿದ್ಯಾರ್ಥಿಗಳಿಗೆ ಸೈಕಲ್,ಹೆಣ್ಣು ಮಗುವಿಗೆ ಭಾಗ್ಯಲಕ್ಷ್ಮೀ ಬಾಂಡ್, ವೃದ್ಧಾಪ್ಯ ವೇತನ ಸೇರಿ ಅನೇಕ ಜನಪರ ಕಾರ್ಯಕ್ರಮ ರೂಪಿಸಿ ಅವುಗಳಿಂದ ಸಾಮಾನ್ಯ ಜನರು ಜೀವನ ಕಟ್ಟಿಕೊಳ್ಳಲು ಸಹಕಾರಿಯಾಗಿದ್ದು,ಇಂತಹ ನಾಯಕರನ್ನು ಅಭಿನಂದಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.

ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಸಂಘಟಿತವಾಗಿ ಬೆಳೆಸಿದ ಯಡಿಯೂರಪ್ಪ ಅವರು ಅನೇಕ ಹೋರಾಟಗಳ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.ಅವರ ನಾಯಕತ್ವ ಮತ್ತು ಹೋರಾಟಗಳು ಹಲವು ಕಾರ್ಯಕರ್ತರಿಗೆ ಪ್ರೇರಣೆಯಾಗಿವೆ ಎಂದು ಅವರು ಅಭಿಪ್ರಾಯಪಟ್ಟರು.ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯಡಿಯೂರಪ್ಪ ಅವರ ಪಾತ್ರ ಅಪಾರವಾಗಿದ್ದು,ಅವರ ಸೇವೆಯನ್ನು ಸ್ಮರಿಸುವ ಈ ಕಾರ್ಯಕ್ರಮಕ್ಕೆ ಭಾರೀ ಪ್ರಮಾಣದಲ್ಲಿ ಜನಸಾಗರ ಸೇರುವ ನಿರೀಕ್ಷೆಯಿದೆ ಎಂದರು.

ಇದನ್ನು ಓದಿದ್ದೀರಾ..? ಕೋಲಾರ | ₹ 10 ಕೋಟಿ ವೆಚ್ಚದಲ್ಲಿ ಎರಡು ಸೇತುವೆ ನಿರ್ಮಾಣ: ಕೊತ್ತೂರು ಮಂಜುನಾಥ್‌

ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ಸಿ. ಮುನಿರಾಜು,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಳೀಧರ, ಚಿಂತಾಮಣಿಯ ಮುಖಂಡ ವೇಣುಗೋಪಾಲ್,ಲಕ್ಷ್ಮಿ ನಾರಾಯಣ ಗುಪ್ತ,ಜಿಲ್ಲಾ ಕಾರ್ಯದರ್ಶಿ ಅಶೋಕ್,
ಸೀಕಲ್ ಆನಂದ್ ಗೌಡ,ನಗರ ಮಂಡಲ ಅಧ್ಯಕ್ಷ ತೇಜೇಂದ್ರ,ಮಾಧ್ಯಮ ಪ್ರಮುಖ್ ಮಧುಚಂದ್ರ,ಬೈರೇಗೌಡ,ಹಾಗೂ ಅನೇಕ ಪದಾಧಿಕಾರಿಗಳು ಉಪಸ್ಥಿತರಿದ್ದರು.

- Advertisement -

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಜಿಲ್ಲೆಯ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಸಹಕರಿಸಿ: ವೀಣಾ ಕಾಶಪ್ಪನವರಿಗೆ ಕುತ್ಬುದ್ದೀನ್ ಖಾಜಿ ಮನವಿ

ಜಿಲ್ಲೆಯ ಬಾಕಿ ಉಳಿದಿರುವ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರದಿಂದ ಅಗತ್ಯ...

ವಿಜಯಪುರ |ಮಹಿಳಾ ಶೌರ್ಯ, ಸ್ವಾಭಿಮಾನದ ಪ್ರತೀಕ ಒನಕೆ ಓಬವ್ವ; ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ

ಕನ್ನಡ ನಾಡಿನ ಇತಿಹಾಸದಲ್ಲಿ ವೀರವನಿತೆ ಒನಕೆ ಓಬವ್ವ ಅವರ ಧೈರ್ಯ, ಸಾಹಸ,...

12 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ನಾಳೆ ಮುಂಡಗೋಡ ಬಂದ್‌ಗೆ ಹಿಂದೂ ಪರ ಸಂಘಟನೆಗಳ ಕರೆ

ಮುಂಡಗೋಡ: ತಾಲ್ಲೂಕಿನಲ್ಲಿ 12 ವರ್ಷದ ಬಾಲಕಿ ಮೇಲೆ ಚಾಕು ತೋರಿಸಿ ಲೈಂಗಿಕ...

ಚಿಂತಾಮಣಿ | ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಸಾಂತ್ವನ

ಸೋಮವಾರ ಸಂಜೆ ಬೋಲೊರೊ,ಆಟೋ. ಕೆ.ಎಸ್.ಆರ್.ಟಿ.ಸಿ.ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ...