ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ನ್ಯಾ. ಶಿಲ್ಪ

Date:

ಜಾಗತೀಕರಣ ಯುಗದಲ್ಲಿ ನಮ್ಮ ಜಾಗ್ರತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು ದುಡಿಮೆಗೆ ಹಚ್ಚದೆ ಅವರನ್ನು ಹಣತೆಯಂತೆ ಬಾಳಿ ಬೆಳಗಿಸಬೇಕಾಗಿದೆ. ಆ ನಿಟ್ಟಿನಲ್ಲಿ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಿ ಅವರ ಜೀವನವನ್ನು ಸುಂದರಮಯವಾಗಿಸಬೇಕಿದ್ದು, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಶಿಲ್ಪ ತಿಳಿಸಿದರು.

- Advertisement -

ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲರ ಸಂಘದ ಸಂಯುಕ್ತ ಆಶ್ರಯದೊಂದಿಗೆ ಬಾಪೂಜಿನಗರದಲ್ಲಿ ಕಾನೂನು ಅರಿವು-ನೆರವು ಹಾಗೂ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರು ಎರೆದು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“18 ವರ್ಷದ ಒಳಗಿನ ಮಕ್ಕಳನ್ನು ದುಡಿಮೆಗೆ ದೂಡುವುದು ಅಪರಾಧ. ಇಂತಹ ಮಕ್ಕಳು ಎಲ್ಲಿಯಾದರೂ ಕೆಲಸ ಮಾಡುತ್ತಿದ್ದರೆ ಅದರ ಮಾಹಿತಿಯನ್ನು ಇಲಾಖೆಯ ಗಮನಕ್ಕೆ ತರಬೇಕು. ಬಾಲ ಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆ, ಪಾಲಕರ ಮತ್ತು ಪೋಷಕರ ಕೈಯಲ್ಲಿದೆ. ಪಾಲಕರು ಮೊದಲು ಬಾಲಕಾರ್ಮಿಕ ವಿರೋಧಿ ಪದ್ಧತಿ ಅರ್ಥ ಮಾಡಿಕೊಳ್ಳಬೇಕಾಗಿದೆ” ಎಂದರು.

ಪ್ಯಾನಲ್ ವಕೀಲ ಎಂ ಎಸ್ ಸಂದೀಪ್ ಚಕ್ರವರ್ತಿ ಮಾತಾಡಿ, “ಭಾರತದಲ್ಲಿ ಬಡತನ ಅನಕ್ಷರತೆಯಿಂದ ತಮ್ಮ ಜೀವನ ಸಾಗಿಸಲು ಅನಿವಾರ್ಯವಾಗಿ, ಪಾಲಕರು ತಮ್ಮ ಜತೆಗೆ ತಮ್ಮ ಮಕ್ಕಳನ್ನು ದುಡಿಮೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಪಾಲಕರೇ ಚಿಂತನೆ ಮಾಡಿ ಮಕ್ಕಳ ದುಡಿಮೆ ನಿಲ್ಲಿಸಬೇಕು” ಎಂದು ಹೇಳಿದರು.

“1986ರಲ್ಲಿ ಬಾಲಕಾರ್ಮಿಕ ವಿರೋಧಿ ಅಧಿನಿಯಮ ಜಾರಿಗೆ ಬಂದಿದ್ದು, ಇದರ ಪ್ರಕಾರ 14 ವರ್ಷದೊಳಗಿನ ಮಕ್ಕಳನ್ನು ಬಾಲ ಕಾರ್ಮಿಕರಾಗಿ ನೇಮಿಸಿಕೊಂಡ ಮಾಲೀಕರಿಗೆ ದಂಡ ಮತ್ತು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದರು. ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ಕಡಿಮೆಯಾಗಿದ್ದು ಇದೊಂದು ಸಮಾಧಾನಕರ ತಂದಿದೆ ಆದರೂ ಇನ್ನೂ ಅಲ್ಲಲ್ಲಿ ಬಾಲಕಾರನ್ನು ದುಡಿಸಿಕೊಳ್ಳುತ್ತಿರುವುದು ನಡೆಯುತ್ತಿದೆ ಇದು ಅಪರಾಧ ಎಂಬುದನ್ನ ಪ್ರತಿಯೊಬ್ಬರು ಅರಿಯಬೇಕು ಎಂದರು.

ಸಹಾಯಕ ಕಾನೂನು ಅಭಿರಕ್ಷಕ ಕೆ ಎನ್ ಶಿವಪ್ಪ ಮಾತನಾಡಿ, “ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ಕೈಜೋಡಿಸಬೇಕು. ಕೊಳಗೇರಿ ಪ್ರದೇಶಗಳಲ್ಲಿ, ಕಾಲೋನಿಗಳಲ್ಲಿ ಹೆಚ್ಚೆಚ್ಚು ಜಾಗೃತಿ ಪಡೆಯುವ ಸಲುವಾಗಿ ಮಕ್ಕಳ ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು” ಎಂದರು.

ನಗರಸಭೆ ನಾಮನಿರ್ದೇಶನ ಸದಸ್ಯೆ ಅಣ್ಣಮ್ಮ ಶಿವಾನಂದ ಮಾತನಾಡಿ, “ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯಿಂದ ಆಗಬಹುದಾದ ಅನಾಹುತಗಳ ಬಗ್ಗೆ ನಾವು ಮೊದಲು ಅರಿಯಬೇಕು. ಮಕ್ಕಳ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಈ ಕೇರಿಗಳಲ್ಲಿ ಇಂತಹ ಅನಿಷ್ಟ ಪದ್ದತಿಯನ್ನು ದೂರ ಮಾಡುವ ಸಲುವಾಗಿ ಇಂತಹ ಕಾನೂನು ಅರಿವು ನೆರವು ಕಾರ್ಯಕ್ರಮ ಹಮ್ಮಿಕೊಂಡಿರುವುದು ನಿಜಕ್ಕೂ ಸಂತಸ ತಂದಿದೆ” ಎಂದು ಶ್ಲಾಘಿಸಿದರು.

ಈ ಸುದ್ದಿ ಓದಿದ್ದೀರಾ? ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಕಾರ್ಮಿಕ ನಿರೀಕ್ಷದ ಎಂ. ಮಂಜುಳಾ ಮಾತನಾಡಿ, “ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 2016ರಂತೆ 14 ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. 15ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಒಂದು ವೇಳೆ ಮಕ್ಕಳಿಂದ ದುಡಿಸಿಕೊಂಡಲ್ಲಿ ₹50,000 ದಂಡ ಹಾಗೂ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ವಾಹನಗಳಲ್ಲಿ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗಾಗಿ ಅಕ್ರಮ ಮತ್ತು ಕಾನೂನು ಬಾಹಿರವಾಗಿ ಸಾಗಾಣಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಇದರ ಬಗ್ಗೆ ಪ್ರತಿಯೊಬ್ಬರೂ ಜಾಗೃತಿ ಮೂಡಿಸಿಕೊಳ್ಳಬೇಕು” ಎಂದರು.

ಈ ಸಂದರ್ಭದಲ್ಲಿ ವಕೀಲರುಗಳಾದ ವಂದನ, ಸರಳ, ನಜೀಮ ತಬಸ್ಸುಮ್, ನರಸಿಂಹಮೂರ್ತಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ರಮೇಶ್ ಸೇರಿದಂತೆ ಬಾಪೂಜಿನಗರದ ಪೋಷಕರು ಹಾಗೂ ಇತರ ಪ್ರಮುಖರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ಎನ್.ವಿ. ಶ್ರೀನಿವಾಸನ್ ಅವರ ಚೊಚ್ಚಲ ಕವನ ಸಂಕಲನ ‘ಕಾವ್ಯ ಕುಸುಮಗಳು ಅರಳಿದಾಗ’ಲೋಕಾರ್ಪಣೆ

ಕಾವ್ಯವು ಮನುಷ್ಯನ ಭಾವನೆಗಳಿಗೆ ಅಕ್ಷರ ರೂಪ ನೀಡುವ ಶಕ್ತಿಯುತ ಮಾಧ್ಯಮವಾಗಿದ್ದು, ಕವಿಯ...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...