ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪುಲ್ಲಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಲ್ಲಸಾನಂಪಲ್ಲಿ ಗ್ರಾಮದಲ್ಲಿ ಹಾವು ಕಡಿದು ರೈತ ಸಾವನ್ನಪ್ಪಿರುವ ಘಟನೆ ನಡೆದಿದೆ.
ವೆಂಕಟರವಣ ಬಿನ್ ಮದ್ದಿರೆಡ್ಡಿ(52) ಹಾವು ಕಡಿದು ಮೃತಪಟ್ಟ ರೈತ. ಹೊಲದಲ್ಲಿ ಹಸುಗಳಿಗೆ ಹುಲ್ಲು ಕಟಾವು ಮಾಡುವ ಸಂದರ್ಭದಲ್ಲಿ ಹಾವು ಕಚ್ಚಿದೆ. ಚಿಕಿತ್ಸೆಗಾಗಿ ಚೇಳೂರು ಸಾರ್ವಜನಿಕ ಆಸ್ಪತ್ರೆಗೆ ಹೋಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚಿಂತಾಮಣಿ ತೆರಳಲು ಸೂಚಿಸಿದ್ದಾರೆ. ಬಳಿಕ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ಹೋದರೂ ಕೂಡಾ ಅಲ್ಲಿಯೂ ಸಮರ್ಪಕ ಚಿಕಿತ್ಸೆ ಸಿಗಲಿಲ್ಲ.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಮಾರ್ಕಂಡೇಯ ನದಿಯಲ್ಲಿ ಕಾಲುಜಾರಿ ಬಿದ್ದ ಯುವಕ ಶವವಾಗಿ ಪತ್ತೆ
ಚಿಂತಾಮಣಿಯಲ್ಲಿ ಸಮರ್ಪಕ ಚಿಕಿತ್ಸೆ ಸಿಗದ ಪರಿಣಾಮ ಕೋಲಾರದ ಜಾಲಪ್ಪ ಆಸ್ಪತ್ರೆಗೆ ಹೋಗಲು ತಿಳಿಸಿದ್ದು, ಹದಿಮೂರು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿದರೂ ಕೂಡಾ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ತಡರಾತ್ರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಕುರಿತು ಚೇಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.