ಚಿಕ್ಕಬಳ್ಳಾಪುರ | ಹೆಚ್ಚಿದ ಮಳೆ, ಕುಸಿದ ಬೆಲೆ; ಕಂಗಾಲಾದ ಹೂ ಬೆಳೆಗಾರರು

Date:

ಮಾರುಕಟ್ಟೆಯಲ್ಲಿ ಜಾಗ ಇಲ್ಲದಷ್ಟು ಹೂಗಳನ್ನು ಮಾರಾಟ ಮಾಡಲು ಬಂದಿರುವ ರೈತರು, ತಂದ ಹೂ ಮಾರಾಟವಾಗದೆ ಬೀದಿಗೆ ಸುರಿದು ಬರುತ್ತಿರುವ ದೃಶ್ಯಗಳು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಂಡುಬಂದಿದೆ.

ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿ ಹೂ ಹೊಳಪು ಕಳೆದುಕೊಂಡಿದ್ದರೆ, ಇನ್ನೊಂದೆಡೆ ಹೂವಿನ ಇಳುವರಿ ದುಪ್ಪಟ್ಟಾಗಿದೆ. ಹೊರ ರಾಜ್ಯ ಹಾಗೂ ಹೊರ ದೇಶಗಳಿಗೆ ರಫ್ತಾಗುತ್ತಿದ್ದ ಹೂಗಳನ್ನು ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ಕೇಳೋರು ಇಲ್ಲದಂತಾಗಿದ್ದು, ಹೂಗಳು ಬೀದಿಪಾಲಾಗುತ್ತಿವೆ. ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ.

ಹೂಗಳು ಮಾರಾಟವಾಗದ ಹಿನ್ನೆಲೆಯಲ್ಲಿ ಹೂ ಬೆಳೆಗಾರರು ಹೂಗಳನ್ನು ಬೀದಿಗೆ ಸುರಿದು ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಬೇಸರದಿಂದ ಬರಿಗೈಯಲ್ಲಿ ಮನೆಗೆ ಹಿಂತಿರುಗುತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಮಳೆ | ಮನೆಗಳಿಗೆ ನುಗ್ಗಿದ ಚರಂಡಿ ನೀರು; ಜನಜೀವನ ಅಸ್ತವ್ಯಸ್ಥ

ಜಿಲ್ಲೆಯಲ್ಲಿ ಬಹುತೇಕ ರೈತರು ಹೂ ಬೆಳೆಯುತ್ತಿದ್ದು, ವಿವಿಧ ಬಗೆಯ ಹೂಗಳನ್ನು ಬೆಳೆದು ಇಡೀ ರಾಜ್ಯಕ್ಕೆ ಸರಬರಾಜು ಮಾಡುತ್ತಿದ್ದರು. ಜಿಲ್ಲೆಯಲ್ಲಿ ನೂರಕ್ಕೆ ಶೇ. 70ರಷ್ಟು ರೈತರು ಹೂ ಬೆಳೆಯ ಮೇಲೆ ಅವಲಂಬಿತರಾಗಿದ್ದಾರೆ. ಹಾಗಾಗಿ ಹೂ ಬೆಳೆ ದುಪ್ಪಟ್ಟಾಗಿದ್ದು, ಮಾರುಕಟ್ಟೆಯಲ್ಲಿ ಜಾಗ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಹೂ ಬೆಲೆ ಪಾತಾಳಕ್ಕೆ ಕುಸಿದಿದೆ ಎನ್ನಲಾಗಿದೆ.

ಸೆಂಟ್ ಹಳದಿ ಸೇವಂತಿ ಹೂ ₹200ರಿಂದ ₹100ಕ್ಕೆ ಕುಸಿದಿದೆ. ಮೆರಾಬುಲ್ ಹೂ ಕೇವಲ ₹10ಕ್ಕೆ ಮಾರಾಟವಾಗುತ್ತಿದೆ. ಸೇವಂತಿ ಚಾಕಲೇಟ್ ₹120 ರಿಂದ ₹70ಕ್ಕೆ ಕುಸಿದಿದ್ದು, ಐಶ್ವರ್ಯ ₹250ರಿಂದ ₹100ಕ್ಕೆ ಇಳಿದಿದೆ. ಇನ್ನು ಚೆಂಡು ಹೂ ₹70 ರಿಂದ ₹10ಕ್ಕೆ ಕುಸಿದಿದೆ. ಗುಲಾಬಿಯನ್ನು ಕೇಳುವವರೇ ಇಲ್ಲದಂತಾಗಿತ್ತು, ತಿಪ್ಪೆಗೆ ಸುರಿಯುವಂತಾಗಿದೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಹುಬ್ಬಳ್ಳಿ | ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ

ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನೊಳಗೆ ನುಗ್ಗಿ ವಿದ್ಯಾರ್ಥಿನಿಯೋರ್ವಳಿಗೆ ಯುವಕನೋರ್ವ ಮನಬಂದಂತೆ ಚಾಕುವಿನಿಂದ...

ದಾವಣಗೆರೆ | ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸೌಭಾಗ್ಯ ಬೀಳಗಿಮಠ 101ನೇ ರ್‍ಯಾಂಕ್‌; ಜಿಲ್ಲಾಧಿಕಾರಿಯಿಂದ ಸನ್ಮಾನ

ದ್ವಿತೀಯ ಪಿಯುಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‌ಸಿ...