ಚಿಕ್ಕಬಳ್ಳಾಪುರ | ಒಕ್ಕಲಿಗ ಸಮುದಾಯದ ಸ್ಥಳೀಯ ನಾಯಕರಿಗೆ ಟಿಕೆಟ್ ನೀಡಿ: ಕೋನಪ್ಪ ರೆಡ್ಡಿ ಒತ್ತಾಯ

Date:

ಯಾವ ಪಕ್ಷ ಒಕ್ಕಲಿಗ ಸಮುದಾಯಕ್ಕೆ ಆದ್ಯತೆ ನೀಡುತ್ತದೆಯೋ, ಅಂತಹ ಪಕ್ಷಕ್ಕೆ ನಮ್ಮ ಸಮುದಾಯ ಬೆಂಬಲ ನೀಡಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಕೋನಪ್ಪ ರೆಡ್ಡಿ ಕರೆ ನೀಡಿದರು.

- Advertisement -

ಚಿಕ್ಕಬಳ್ಳಾಪುರ ನಗರದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, “ಪ್ರಸ್ತುತ ಬಿಜೆಪಿಯು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ಕ್ರಿಯಾಶೀಲ ನಾಯಕ ಪ್ರತಾಪ್ ಸಿಂಹ ಸೇರಿದಂತೆ ಮುಂತಾದವರಿಗೆ ಟಿಕೆಟ್ ಕೊಡದೆ ಸಮುದಾಯವನ್ನು ಕಡೆಗಣಿಸಿದೆ. ಸ್ಥಳೀಯ ಒಕ್ಕಲಿಗ ನಾಯಕರಿಗೆ ಆದ್ಯತೆ ಕೊಟ್ಟಿಲ್ಲ. ಹಾಗಾಗಿ ನಮಗೆ ಎಲ್ಲಿ, ಯಾವ ಪಕ್ಷ, ಯಾವ ಸರ್ಕಾರ ಆದ್ಯತೆ ನೀಡುತ್ತದೆಯೋ ಅಂತಹ ಪಕ್ಷಕ್ಕೆ ನಾವು ಬೆಂಬಲ ಕೊಡುತ್ತೇವೆ” ಎಂದು ಪುನರು‌ಚ್ಛರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

“ಸಮುದಾಯ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು, ನಮ್ಮ ಸಮುದಾಯವನ್ನು ನಿರ್ಲಕ್ಷಿಸುವ ಪಕ್ಷವನ್ನು ನಮ್ಮ ಸಮುದಾಯ ನಿರ್ಲಕ್ಷ್ಯ ಮಾಡುತ್ತದೆ” ಎಂದು ಹೇಳಿದರು.

“ರಾಜ್ಯದಲ್ಲಿ ಶೇ.16ರಷ್ಟು ಮಂದಿ ಒಕ್ಕಲಿಗ ಸಮುದಾಯದವರಿದ್ದಾರೆ. ನಮಗೆ ಪ್ರಾತಿನಿಧ್ಯ ಕೊಡಬೇಕು. ಕೊಡದಿದ್ದಲ್ಲಿ ನಮಗೆ ಆಧ್ಯತೆ ನೀಡುವ ಕಡೆ ಸಮುದಾಯ ಹೋಗಬೇಕು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸುಮಾರು 7.45 ಲಕ್ಷ ಒಕ್ಕಲಿಗ ಮತದಾರರಿದ್ದಾರೆ. ಬಿಜೆಪಿಯಲ್ಲಿ ಉಳಿದಿರುವುದು ಚಿಕ್ಕಬಳ್ಳಾಪುರ ಕ್ಷೇತ್ರ ಒಂದೇ. ಆದ್ದರಿಂದ ಈ ಬಾರಿ ಒಕ್ಕಲಿಗ ಸಮುದಾಯದ ಸ್ಥಳೀಯರಿಗೆ ಟಿಕೆಟ್ ನೀಡಬೇಕು” ಎಂದು ಒತ್ತಾಯಿಸಿದರು.

“ಸರ್ಕಾರದ ಜಾತಿಗಣತಿ ನಿರ್ಧಾರ ಸಂಪೂರ್ಣವಾಗಿ ಅವೈಜ್ಞಾನಿಕವಾಗಿದೆ. ಇದರಿಂದ ನಮ್ಮ ಸಮುದಾಯಕ್ಕೆ ಸರ್ಕಾರಿ ಕೆಲಸ ಗಗನಕುಸುಮ ಆಗುತ್ತದೆ. ಇಷ್ಟು ದಿನ ಸ್ವತಃ ಡಿಸಿಎಂ ಡಿಕೆಶಿ ಅವರೇ ಜಾತಿಗಣತಿಯನ್ನು ಮಾಡದಂತೆ ತಡೆದಿದ್ದಾರೆ. ಜಾತಿ ಗಣತಿಗೆ ನಮ್ಮ ಸಮುದಾಯದ ಸಂಪೂರ್ಣ ವಿರೋಧವಿದೆ” ಎಂದು ಸರ್ಕಾರದ ನಡೆಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ದೇಸು ಗೇಮು ಚವ್ಹಾಣ ಕಾಂಗ್ರೆಸ್‌ಗೆ ಮರು ಸೇರ್ಪಡೆ

ಸುದ್ದಿಗೋಷ್ಟಿಯಲ್ಲಿ ಶಿವಾರೆಡ್ಡಿ, ನಾಗರಾಜ ರೆಡ್ಡಿ, ಕೃಷ್ಣ ರಾಜ ರೆಡ್ಡಿ, ಒಕ್ಕಲಿಗ ಸಂಘದ ಮತ್ತೊಬ್ಬ ನಿರ್ದೇಶಕ, ಒಕ್ಕಲಿಗ ಸಮುದಾಯ ಭವನದ ಕಾರ್ಯದರ್ಶಿ ಬೈರಾರೆಡ್ಡಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...