ಕಾರು ಮತ್ತು ಬಸ್ ನಡುವೆ ಅಪಘಾತ ಸಂಭಿವಿಸಿದ್ದು, ಕಾರು ಹೊತ್ತಿದಿದೆ. ಕಾರಿನಲ್ಲಿದ್ದ ಇಬ್ಬರು ಜೀವಂತ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ನಡೆದಿದೆ.
ಗೋಪಲ್ಲಿ ಗೇಟ್ ಬಳಿ ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು. ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿದ್ದ ಓರ್ವ ಮಹಿಳೆ ಮತ್ತು ಓರ್ವ ಪುರುಷ ಸಜೀವದಹನವಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ ಎಂದು ಹೇಳಲಾಗಿದೆ.
ಮೃತರನ್ನು ಆಂಧ್ರ ಪ್ರದೇಶದ ಮದನಪಲ್ಲಿ ಗ್ರಾಮದ ಧನಂಜಯ ರೆಡ್ಡಿ(31) ಮತ್ತು ಕಲಾವತಿ(35) ಎಂದು ಗುರುತಿಸಲಾಗಿದೆ. ಇನ್ನುಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಬಸ್ ಕೂಡ ಪಲ್ಟಿಯಾಗಿದೆ. ಬಸ್ನಲ್ಲಿ ಪ್ರಯಾಣಿಕರಿಗೆ ಯಾವುದೇ ಅಪಾಯಗಳಾಗಿಲ್ಲ. ಎಲ್ಲರೂ ಬಚಾವಾಗಿದ್ದಾರೆ ಎಂದು ವರದಿಯಾಗಿದೆ.