ಚಿಕ್ಕಬಳ್ಳಾಪುರ | ಒಳ ಮೀಸಲಾತಿ: ರಾಜ್ಯ ಸರ್ಕಾರದ ತೀರ್ಮಾನ ಸ್ವಾಗತಾರ್ಹ; ಪಟ್ರೇನಹಳ್ಳಿ ಕೃಷ್ಣ

Date:

Advertisements

ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಸಂಭಂದ ಬಲಗೈ ಹಾಗೂ ಎಡಗೈ ಸಮುದಾಯಗಳಿಗೆ ಶೇ.6 ರಷ್ಟು ಹಾಗೂ ಭೋವಿ, ಲಮಾಣಿ, ಕೊರಮ,ಕೊರಚ,ಸೇರಿದಂತೆ ಇತರ ಸೂಕ್ಷ್ಮ ಅಲೆಮಾರಿ ಸಮುದಾಯಗಳಿಗೆ ಶೇ.5 ರಷ್ಟು ಮೀಸಲಾತಿ ವರ್ಗೀಕರಣಕ್ಕೆ ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದ್ದು ಸ್ವಾಗತಾರ್ಹ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಸಮುದಾಯದ ಮುಖಂಡ ಪಟ್ರೇನಹಳ್ಳಿ ಕೃಷ್ಣ ತಿಳಿಸಿದರು.

ಚಿಕ್ಕಬಳ್ಳಾಪುರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 35 ವರ್ಷಗಳ ಒಳ ಮೀಸಲಾತಿ ಸಂಬಂಧದ ಸುದೀರ್ಘ ಹೋರಾಟಕ್ಕೆ ಸಂದ ಜಯವಾಗಿದ್ದು ಬಹಳಷ್ಟು ಸಂತೋಷ ತಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇಡೀ ಸಚಿವ ಸಂಪುಟಕ್ಕೆ ಅಭಿನಂದನೆ ತಿಳಿಸುತ್ತೇನೆ. ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಮೂರು ದಶಕಗಳ ನಿರಂತರವಾಗಿ ನಡೆದ ಅನೇಕ ಹೋರಾಟದಲ್ಲಿ ಅನೇಕ ಪ್ರಮುಖರು,ಸಮುದಾಯದವರು ಅನೇಕ ರೀತಿಯ ಪ್ರತಿಭಟನೆ, ಚಳುವಳಿ, ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಮೂಲಕ ಮೀಸಲಾತಿಗಾಗಿ ಹೋರಾಟ ನಡೆಸಿದ್ದರು ಎಂದರು.

ಒಳ ಮೀಸಲಾತಿಗೆ ಸಂಬಂಧಿಸಿದಂತೆ ಅನೇಕ ವರದಿಗಳು ಹಿಂದಿನ ಎಲ್ಲ ಸರ್ಕಾರಗಳಿಗೆ ಸಲ್ಲಿಸಲಾಗಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ನ್ಯಾ. ನಾಗಮೋಹನ್‌ದಾಸ್ ಸಲ್ಲಿಸಿದ ವರದಿಯಂತೆ ಪರಿಶಿಷ್ಟ ಜಾತಿಗಳಿಗೆ ಮೀಸಲಾತಿಯನ್ನು ಶೇಕಡವಾರು 6:6:5 ಎಂದು ಹಂಚಿಕೆ ಮಾಡಲಾಗಿದ್ಧು 35 ವರ್ಷಗಳ ಸುದೀರ್ಘ ಹೋರಾಟಕ್ಕೆ ಜಯ ಎಂದರು.

Advertisements

ಚುನಾವಣೆ ಪೂರ್ವದಲ್ಲಿ ಒಳಮೀಸಲಾತಿ ಜಾರಿ ಮಾಡುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಮಾದಿಗ ಸಮಾಜ ಅವರ ಬೆಂಬಲಕ್ಕೆ ನಿಂತು ಕಾಂಗ್ರೆಸ್ ಅಧಿಕಾರಕ್ಕೆ ಬರಲು ಪ್ರಮುಖ ಪಾತ್ರ ವಹಿಸಿತ್ತು. ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಿ ನುಡಿದಂತೆ ನಡೆದಿರುವ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರಾದ ಕೆ.ಹೆಚ್.ಮುನಿಯಪ್ಪ,ಮಾಜಿ ಸಚಿವ ಆಂಜನೇಯ ಅವರಿಗೆ ಅಭಿನಂದನೆಗಳು ತಿಳಿಸುತ್ತೇನೆಂದರು.

ಸಮುದಾಯದ ಹಿರಿಯ ಮುಖಂಡರಾದ ಶಿಡ್ಲಘಟ್ಟ ನಾರಾಯಣಸ್ವಾಮಿ ಮಾತನಾಡಿ, ಒಳ ಮೀಸಲಾತಿ ಜಾರಿಗೆ ತರಲು ಸಚಿವರಾದ ಕೆ.ಹೆಚ್.ಮುನಿಯಪ್ಪ ಬಹಳಷ್ಟು ಕಾಳಜಿಯಿಂದ ಪ್ರತಿ ಹಂತದಲ್ಲೂ ಮುಂಚೂಣಿಯಲ್ಲಿದ್ದರು. ಹಾಗೆ ಎಡಗೈ ಸಮುದಾಯದವರು ಪ್ರತಿ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಸುದೀರ್ಘ 30 ವರ್ಷಗಳ ಹೋರಾಟದ ಫಲವಾಗಿ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಮೀಸಲಾತಿಯನ್ನು ಶೇಕಡಾವಾರು ಹಂಚಿಕೆ ಮಾಡಿದ್ದು ನಮ್ಮ ಮುಂದಿನ ಪೀಳಿಗೆಗೆ ವಿವಿಧ ಕ್ಷೇತ್ರಗಳಲ್ಲಿ ಬಹಳ ಅನುಕೂಲವಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯೆ ನಾರಾಯಣಮ್ಮ, ನಗರಸಭೆ ನಾಮ ನಿರ್ದೇಶನ ಸದಸ್ಯೆ ಅಣ್ಣಮ್ಮ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ವೆಂಕಟಲಕ್ಷ್ಮಮ್ಮ ಮಂಚನಬೆಲೆ ಪ್ರಕಾಶ್ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ‌ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ಬೀದರ್ ವತಿಯಿಂದ...

ವಿಜಯಪುರ-ಬಬಲೇಶ್ವರ ಆ.27ರಿಂದ ಎರಡು ಬಸ್ಸುಗಳ ಸೇವೆ ಪ್ರಾರಂಭ

ವಿಜಯಪುರ-ಬಬಲೇಶ್ವರ ಮತ್ತು ಬಬಲೇಶ್ವರ-ವಿಜಯಪುರ ನಡುವೆ ಆಗಸ್ಟ್ 27 ರಿಂದ ಸಾಮಾನ್ಯ ಸಾರಿಗೆ...

ಬಾದಾಮಿ | ವಿದ್ಯಾರ್ಥಿಗಳು ಸಂವಿಧಾನವನ್ನು ಅರಿಯಬೇಕಾದ ಅಗತ್ಯವಿದೆ: ಪರಶುರಾಮ ಮಹಾರಾಜನವರ

ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಅರಿತಾಗ ಮಾತ್ರ ಸಂವಿಧಾನದ ತಿರುಳನ್ನು ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ....

ಹಾವೇರಿ | ಸೋಲಿಡಾರಿಟಿ ಯೂತ್ ಮೂವ್ಮೆಂಟ್ ವತಿಯಿಂದ ಆಗಸ್ಟ್ 25ರಿಂದ ಸೆಪ್ಟೆಂಬರ್ 15ರವರೆಗೆ ಜಾಗೃತಿ ಅಭಿಯಾನ: ಜೇಬ್ರಿನ್ ಖಾನ್

"ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ವತಿಯಿಂದ ರಾಜ್ಯಾದ್ಯಂತ ಜಾಗೃತಿ ಅಭಿಯಾನವನ್ನು ಆಗಸ್ಟ್...

Download Eedina App Android / iOS

X