ಚಿಕ್ಕಬಳ್ಳಾಪುರ | ಅಂತಾರಾಷ್ಟ್ರೀಯ ಸಸ್ಯ ಆರೋಗ್ಯ ದಿನಾಚರಣೆ

Date:

ಹೇಗೆ ಸಸ್ಯಗಳ ಆರೋಗ್ಯವನ್ನು ರಕ್ಷಿಸುವುದರಿಂದಾಗಿ ಅದು ಜನರ ಹಸಿವನ್ನು ನಿವಾರಿಸಿ ಬಡತನವನ್ನು ಕಡಿಮೆ ಮಾಡುವುದರ ಜತೆಗೆ ಜೀವವೈವಿಧ್ಯತೆ ಮತ್ತು ಪರಿಸರವನ್ನೂ ರಕ್ಷಿಸುತ್ತದೆ ಮತ್ತು ಈ ಮೂಲಕ ಆರ್ಥಿಕ ಅಭಿವೃದ್ಧಿಗೂ ಇದು ಸಹಾಯ ಮಾಡುತ್ತದೆ ಎಂಬುದರ ಕುರಿತು ಜಾಗತಿಕ ಜಾಗೃತಿ ಮೂಡಿಸಲು ವಿಶ್ವಸಂಸ್ಥೆಯು ಪ್ರತಿ ವರ್ಷ ಮೇ 12ರಂದು ಅಂತಾರಾಷ್ಟ್ರೀಯ ಸಸ್ಯ ಆರೋಗ್ಯ ದಿನ ಎಂದು ಘೋಷಿಸಿದೆ.

ಈ ಅಂತಾರಾಷ್ಟ್ರೀಯ ಸಸ್ಯ ಆರೋಗ್ಯ ದಿನ 2024ರ ಅಂಗವಾಗಿ ಮೇ 10ರಿಂದು 14ರವರೆಗೆ ಸಮಗ್ರ ಸಸ್ಯಪೀಡಾ ನಿರ್ವಹಣಾ ಕೇಂದ್ರ, ಬೆಂಗಳೂರು ಇವರಿಂದ ಕೋಲಾರದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಎಲ್ಲ ಕಾರ್ಯಕ್ರಮಗಳನ್ನು ಸಸ್ಯಪೀಡಾ ನಿರ್ವಹಣಾ ಕೇಂದ್ರ, ಬೆಂಗಳೂರು ಮುಖ್ಯಸ್ಥ ಡಾ. ಅಲಂಗೀರ್ ಸಿದ್ದಿಕಿ ಇವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ವರ್ಗದವರು ಯಶಸ್ವಿಯಾಗಿ ಆಯೋಜಿಸಿದ್ದರು. ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುಳ್ಳಹಳ್ಳಿ ಗ್ರಾಮದಲ್ಲಿ ಅನೇಕ ಚಟುವಟಿಕೆಗಳನ್ನು ಏರ್ಪಡಿಸಲಾಗಿತ್ತು.

ರೈತರಿಗಾಗಿ ಜೈವಿಕ ಕೀಟನಾಶಕಗಳು, ವಿವಿಧ ಬಗೆಯ ಪರೋಪಕಾರಿ ಕೀಟಗಳು ಮತ್ತು ಪರಭಕ್ಷಕಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಇದರ ಕುರಿತು ನುರಿತ ತಜ್ಞರು ರೈತರಿಗೆ ಮಾಹಿತಿ ನೀಡಿದರು. ರೈತ ಸಮ್ಮೇಳನದಲ್ಲಿ ಸಮಗ್ರ ಸಸ್ಯಪೀಡಾ ನಿರ್ವಹಣಾ ಕೇಂದ್ರದ ತಜ್ಞರು ಹಾಗೂ ಡಾ ನರಸರೆಡ್ಡಿ, ಸಹಾಯಕ ಪ್ರಾಧ್ಯಾಪಕರು, ಕೃಷಿ ಕಾಲೇಜು, ಚಿಂತಾಮಣಿ ಹಾಜರಿದ್ದು ರೈತರ ಸಮಸ್ಯೆಗಳಿಗೆ ಪರಿಹಾರವನ್ನು ಸೂಚಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಕಾರ್ಯಕ್ರಮದ ಅಂಗವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ, ಮುಳ್ಳಹಳ್ಳಿ ಗ್ರಾಮ ಚಿಂತಾಮಣಿ ತಾಲೂಕು ಮತ್ತು ಶ್ರೀ ವಿದ್ಯಾನಿಕೇತನ ಶಾಲೆ, ಮೆಡಹಳ್ಳಿ, ಬೆಂಗಳೂರು, ಶಾಲಾ ಮಕ್ಕಳಿಗೆ ಚಿತ್ರಕಲೆ, ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಇದರಲ್ಲಿ 60 ಮಕ್ಕಳು ಪಾಲ್ಗೊಂಡಿದ್ದರು. ವಿಜೇತರಿಗೆ ಪ್ರಶಸ್ತಿ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಲೋಕಾಯುಕ್ತ ದಾಳಿ; ಸಿ ಎಸ್ ಪುರದ ಕಂದಾಯ ನಿರೀಕ್ಷಕರ ಬಂಧನ

ಮೇ 14ರಂದು ರೈತರಿಗಾಗಿ ಕೀಟನಾಶಕಗಳ ಸುರಕ್ಷಿತ ಬಳಕೆ ಮತ್ತು ಜೇನುಸಾಕಣೆ ಬಗ್ಗೆ ಅಂತರ್ಜಾಲದ ಮೂಲಕ ವೆಬಿನಾರ್ ಅನ್ನು ಆಯೋಜಿಸಲಾಗಿತ್ತು. ರಾಜ್ಯದ ಹಲವು ಜಿಲ್ಲೆಗಳಿಂದ ರೈತರು ಭಾಗವಹಿಸಿ ಮಾಹಿತಿಯನ್ನು ಪಡೆದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಳೆಗಾಲ ಶುರು: ಹಾವುಗಳ ಬಗ್ಗೆ ಎಚ್ಚರಿಕೆ ವಹಿಸಲು ಬಿಬಿಎಂಪಿ ಮನವಿ

ಪೂರ್ವ ಮುಂಗಾರು ಮಳೆ ಶುರುವಾದ ಬೆನ್ನಲ್ಲೇ ಈಗ ಬೆಂಗಳೂರಿನ ಜನ ವಸತಿ...

ಕೊಪ್ಪಳ | ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ : ಕೆ.ಫಣಿರಾಜ್

ದಶಕಗಳ ಹಿಂದೆ ನಡೆದಿರುವ ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ. ಆದರೆ...

ರಾಯಚೂರು | ಕುರಿಗೆ ನೀರು ಕುಡಿಸಲು ನದಿಗೆ ತೆರಳಿದ್ದ ಬಾಲಕನ್ನು ಹೊತ್ತೊಯ್ದ ಮೊಸಳೆ

ಕೃಷ್ಣ ನದಿಯಲ್ಲಿ ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಬಾಲಕನ ಮೇಲೆ...

ಕೊಪ್ಪಳ | ಬಂಡವಾಳಶಾಹಿಗಳಿಂದ ಭೂಮಿ ಉಳಿಸಬೇಕಿದೆ: ರಾಕೇಶ್ ಟಿಕಾಯತ್

ಉದ್ಯಮಿಗಳಿಗೆ ರೈತರ ಜಮೀನು ಕಡಿಮೆ ದರದಲ್ಲಿ ಖರೀದಿಸಿ ಬಡಜನರ ಹೊಟ್ಟೆಗೆ ಬಟ್ಟೆ...