ಕುಡಿದ ಅಮಲಿನಲ್ಲಿದ್ದ ಮಗನೇ ತನ್ನ ತಾಯಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಚಿನ್ನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಭಾನುವಾರ ಘಟನೆ ನಡೆದಿದೆ ಎನ್ನಲಾಗಿದ್ದು, ಮದ್ಯದ ಅಮಲಿನಲ್ಲಿದ್ದ ಮಗ ತಾಯಿ ಮೇಲೆ ಅತ್ಯಾಚಾರವೆಸಗಿ, ಬಳಿಕ ತಂದೆ ತಾಯಿ ಇಬ್ಬರ ಮೇಲೆ ಹಲ್ಲೆ ಮಾಡಿ ಮನೆಯ ಹಿಂಭಾಗದ ತಿಪ್ಪೆಗುಂಡಿಗೆ ಎಸೆದಿದ್ದಾನೆ. ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸಂತ್ರಸ್ತೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆಂದು ತಿಳಿದುಬಂದಿದೆ.
ಆರೋಪಿ ಮಗ ವಿವಾಹಿತನಾಗಿದ್ದು, ಪತ್ನಿಯಿಂದ ದೂರ ಆಗಿದ್ದಾನೆಂದು ತಿಳಿದುಬಂದಿದೆ. ಗುಡಿಬಂಡೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಿಂತಾಮಣಿ ತಾಲೂಕಿನ ಕೈವಾರ ಗ್ರಾಮದಲ್ಲಿ ಮನೆಗೆ ನುಗ್ಗಿ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೈವಾರ ಗ್ರಾಮದ ನಿವೃತ್ತ ಸೆಕ್ರೇಟರಿ ಗೋವಿಂದಪ್ಪ ಅವರ ಪತ್ನಿ 70 ವರ್ಷದ ಲಲಿತಮ್ಮ ಕೊಲೆಯಾದ ಮಹಿಳೆ. ಮಗ ಅಮರೇಂದ್ರ ಶಿಡ್ಲಘಟ್ಟ ತಾಲೂಕು ಕಂದಾಯ ಇಲಾಖೆ ಆರ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಸೊಸೆ ಸುಧಾ ಸರ್ಕಾರಿ ಶಾಲೆಯಲ್ಲಿ ಅಡುಗೆ ಕೆಲಸಕ್ಕೆ ಹೋಗುತ್ತಿದ್ದರು.
ಮಗ ಸೊಸೆ ಇಬ್ಬರೂ ಕೆಲಸಕ್ಕೆ ತೆರಳಿದ್ದ ವೇಳೆ ದುಷ್ಕರ್ಮಿಗಳು ಮನೆಗೆ ನುಗ್ಗಿದ್ದು, ಮನೆಯಲ್ಲಿದ್ದ ಲಲಿತಮ್ಮ ಅವರ ಕತ್ತು ಸೀಳಿ ಕೊಲೆ ಮಾಡಿದ್ದಾರೆ. ಸೋಮವಾರ ಮದ್ಯಾಹ್ನ ಮನೆಗೆ ಬಂದ ಸೊಸೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅತ್ತೆಯನ್ನು ಕಂಡ ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆ ವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೂ ದ್ದು, ಚಿಕಿತ್ಸೆ ಫಲಿಸದೆ ಲಲಿತಮ್ಮ ಮೃತಪಟ್ಟಿದ್ದಾರೆ.
ಈ ಸುದ್ದಿ ಓದಿದ್ದೀರಾ? ಗದಗ | ಸರ್ಕಾರಿ ಇಲಾಖೆ ಸಿಬ್ಬಂದಿಗಳಿಗೆ ಕ್ರಿಕೆಟ್ ಪಂದ್ಯಾವಳಿ
ಚಿಕ್ಕಬಳ್ಳಾಪುರ ಎಸ್‌ಪಿ ಕುಶಾಲ್ ಚೌಕ್ಸೆ, ಎಎಸ್‌ಪಿ ರಜಾಕ್ ಇಮಾಮ್ ಖಾಸೀಂ, ಚಿಂತಾಮಣಿ ವಿಭಾಗದ ಡಿವೈಎಸ್‌ಪಿ ಮುರುಳೀಧರ್, ಪಿಐ ವಿಜಯ್ ಕುಮಾರ್, ಚಿಂತಾಮಣಿ ಗ್ರಾಮಾಂತರ ಠಾಣೆಯ ಪಿಐ ಶಿವರಾಜ್, ಕೈವಾರ ಹೊರಠಾಣೆಯ ಎಎಸ್‌ಐ ಪ್ರಕಾಶ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರ ತಂಡ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿದ್ದು, ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.