ಚಿಕ್ಕಬಳ್ಳಾಪುರ | ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಜೆಡಿಎಸ್‌ ಮುಖಂಡನ ಕೊಲೆ

Date:

Advertisements

ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಜೆಡಿಎಸ್ ಮುಖಂಡನನ್ನು ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ತಮ್ಮನಾಯಕಹಳ್ಳಿಯ ಗೇಟ್ ಬಳಿ ನಡೆದಿದೆ.

ಜೆಡಿಎಸ್ ಪಕ್ಷದ ಮುಖಂಡ ವೆಂಕಟೇಶ್ (52) ಕೊಲೆಗೀಡಾದವರು. ತಮ್ಮನಾಯಕನಹಳ್ಳಿ ಗೇಟ್​ನಿಂದ ವೆಂಕಟೇಶ್​ ತನ್ನ ಸ್ವಗ್ರಾಮ ತಮ್ಮನಾಯಕನಹಳ್ಳಿ ನಿವಾಸಕ್ಕೆ ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಬಂದು ಅಡ್ಡಗಟ್ಟಿ ಕೂಡಲೇ ಮಚ್ಚು ಲಾಂಗುಗಳಿಂದ ಮನಸೋ ಇಚ್ಚೆ ದಾಳಿ ಮಾಡಿದ್ದಾರೆ. ಅಲ್ಲದೇ, ಕೈಗೆ ಲಾಂಗ್​ಗಳಿಂದ ಹೊಡೆದಿದ್ದರಿಂದ ತುಂಡಾಗಿ ಬಿದ್ದಿದೆ. ವೆಂಕಟೇಶ್​ ಮೇಲೆ ಭೀಕರವಾಗಿ ದಾಳಿ ಮಾಡಿದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ರಸ್ತೆಯಲ್ಲೇ ರಕ್ತದ ಮಡುವಿನಲ್ಲೇ ಬಿದ್ದ ವೆಂಕಟೇಶ್ ಪ್ರಾಣ ಬಿಟ್ಟಿದ್ದಾರೆ. ಇನ್ನು ಈ ಘಟನೆ ಏಕೆ ನಡೆದಿದೆ, ಯಾರು ಮಾಡಿದ್ದಾರೆ, ದಾಳಿ ಮಾಡಿದವರು ಯಾರು ಎಂಬುವ ಯಾವುದೇ ಮಾಹಿತಿ ತಿಳಿದು ಬಂದಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಎಸ್​ಪಿ ಕುಶಲ್ ಚೌಕ್ಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಬೆಳ್ತಂಗಡಿ | ಅವ್ಯವಸ್ಥೆಯ ಆಗರವಾಗಿರುವ ‘ವೇಣೂರು ಸಂತೆ ಮಾರ್ಕೆಟ್’: ಕಣ್ಮುಚ್ಚಿ ಕುಳಿತ ಗ್ರಾಮ ಪಂಚಾಯತ್!

ಘಟನಾ ಸ್ಥಳಕ್ಕೆ ಪೊಲೀಸ್ ಶ್ವಾನದಳದ ಸಿಬ್ಬಂದಿ ಹಾಗೂ ಬೆರಳಚ್ಚು ತಜ್ಞರು ಆಗಮಿಸಿದ್ದು, ಸ್ಥಳದಲ್ಲಿ ಎಲ್ಲ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಇತ್ತ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ವೆಂಕಟೇಶ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X