ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೆಯ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ- 2024ರ ಸಂಬಂಧ ಮತದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಹಾಯವಾಣಿ ಸ್ಥಾಪಿಸಿದೆ.
ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ (ಹರಿಹರ, ದಾವಣಗೆರೆ ಮತ್ತು ಜಗಳೂರು ತಾಲೂಕುಗಳು ಮಾತ್ರ)ಜಿಲ್ಲೆಗಳು ಒಳಪಡಲಿದ್ದು, ಜೂನ್ 3ರಂದು ಮತದಾನ ಕಾರ್ಯ ನಡೆಯಲಿದೆ.
ಚುನಾವಣಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು ಇವರ ಕಚೇರಿಯಲ್ಲಿ ಮತ್ತು ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಗಳಲ್ಲಿ ಸಹಾಯವಾಣಿ(Helpline)ಯನ್ನು ಸ್ಥಾಪಿಸಲಾಗಿರುತ್ತದೆ. ಚುನಾವಣಾಧಿಕಾರಿಗಳ ಕಚೇರಿಯ ಸಹಾಯವಾಣಿ (Helpline) ಸಂಖ್ಯೆ: 080-22109665 ಆಗಿರುತ್ತದೆ.
ಜಿಲ್ಲಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳ ಕಚೇರಿ ಸಹಾಯವಾಣಿ (Helpline) ವಿವರ
ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರ ದಾವಣಗೆರೆ -1800-4250380, ಚಿತ್ರದುರ್ಗ 08194-1950, ತುಮಕೂರು 08162-273595, ಚಿಕ್ಕಬಳ್ಳಾಪುರ- 08156-277071, ಕೋಲಾರ 08152-243507 ಆಗಿರುತ್ತದೆ.
ಈ ಸುದ್ದಿ ಓದಿದ್ದೀರಾ? ಹಾವೇರಿ | ಬುದ್ಧನ ಜೀವನ ತತ್ವಗಳು ಎಲ್ಲ ಕಾಲಕ್ಕೂ ಬೆಲೆಯುಳ್ಳವುಗಳಾಗಿವೆ: ದಸಂಸ ರಾಜ್ಯಾಧ್ಯಕ್ಷ ತಿರಕಪ್ಪ ಚಿಕ್ಕೇರಿ
“ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಪ್ರಜಾ ಪ್ರತಿನಿಧಿ ಕಾಯ್ದೆ, 1951ರ ಸೆಕ್ಷನ್ 135(ಸಿ)ರಡಿಯಲ್ಲಿ, ಭಾರತ ಚುನಾವಣಾ ಆಯೋಗದ ನಿರ್ದೇಶನಗಳಂತೆ, ಮತದಾನ ಅಂತ್ಯಗೊಳ್ಳುವ 48 ಗಂಟೆಗಳ ಪೂರ್ವದಿಂದ ಅಂದರೆ ಜೂನ್ 01 ಅಪರಾಹ್ನ 4 ಗಂಟೆಯಿಂದ ಮತದಾನ ಪ್ರಕ್ರಿಯೆ ಮುಕ್ತಾಯಗೊಳ್ಳುವವರೆಗೆ ಚುನಾವಣಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶುಷ್ಕದಿನ(Dry Day)ವನ್ನು ಘೋಷಿಸಲಾಗಿರುತ್ತದೆ. ಈ ಅವಧಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದ್ದು, ಎಲ್ಲ ಮದ್ಯದ ಅಂಗಡಿಗಳು ಮುಚ್ಚಲ್ಪಡುತ್ತವೆ. ಚುನಾವಣಾ ನಿಯಮಾವಳಿಗಳ ಅನ್ವಯ ಮತದಾನ ಅಂತ್ಯಗೊಳ್ಳುವ 48 ಗಂಟೆಗಳ ಪೂರ್ವದಲ್ಲಿ ಅಂದರೆ ಜೂನ್ 1ರ ಅಪರಾಹ್ನ 4-00 ಗಂಟೆಗೆ ಚುನಾವಣಾ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದ್ದು, ನಂತರದಲ್ಲಿ ಯಾವುದೇ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳು ಬಹಿರಂಗ ಪ್ರಚಾರ ಕೈಗೊಳ್ಳುವುದನ್ನು ನಿಷೇಧಿಸಿದೆ” ಎಂದು ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
