ಚಿಕ್ಕಬಳ್ಳಾಪುರ | ರೈತರ ಜಮೀನು ರೈತರಿಗೆ ಬಿಡಿ: ಅನಿರ್ದಿಷ್ಟ ಹೋರಾಟ 66ನೇ ದಿನಕ್ಕೆ

Date:

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಕೈಗಾರಿಕಾ ವಲಯ ನಿರ್ಮಾಣಕ್ಕಾಗಿ ರೈತರ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳುವ ಕ್ರಮವನ್ನು ವಿರೋಧಿಸಿ ರಾಜ್ಯ ರೈತ ಸಂಘದ ಸಹಕಾರದಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ 66ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟಕ್ಕೆ ಆದಿಚುಂಚನಗಿರಿ ಶ್ರೀಮಠ ಬೆಂಬಲ ಸೂಚಿಸಿದ್ದು, ರೈತರ ಪರವಾಗಿ ನಿಲ್ಲುವುದಾಗಿ ಶ್ರೀ ಮಠದ ಪ್ರತಿನಿಧಿಗಳು ಘೋಷಿಸಿದರು.

- Advertisement -

ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಆದಿಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿ ಶ್ರೀ ಮಂಗಳಾನಂದಸ್ವಾಮೀಜಿ ಮಾತನಾಡಿ, ನಾವು ಕೈಗಾರಿಕೆಗಳಿಗೆ ವಿರೋಧಿಗಳಲ್ಲ. ಆದರೆ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಕಸಿದು ಕೈಗಾರಿಕೆ ಸ್ಥಾಪಿಸುವುದನ್ನು ಒಪ್ಪಲು ಸಾಧ್ಯವಿಲ್ಲ. ಬಂಜರು ಭೂಮಿಯಲ್ಲಿ ಕೈಗಾರಿಕೆ ನಿರ್ಮಿಸಲಿ.ರೈತನಿಗೆ ತೊಂದರೆ ಬಂದರೆ ಶ್ರೀಮಠ ಸದಾ ಅವರೊಂದಿಗೇ ನಿಲ್ಲುತ್ತದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿ ವ್ಯಾಪ್ತಿಯ 13 ಗ್ರಾಮಗಳ ಸುಮಾರು 2823 ಎಕರೆ ಕೃಷಿ ಭೂಮಿಯನ್ನು ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ವಶಪಡಿಸಿಕೊಳ್ಳಲು ಮುಂದಾಗಿರುವುದನ್ನು ವಿರೋಧಿಸಿ ಕೋಡಿಹಳ್ಳಿ ಚಂದ್ರಶೇಖರ್ ಬಣದ ರಾಜ್ಯ ರೈತ ಸಂಘ ಕಳೆದ 66 ದಿನಗಳಿಂದ ನಿರಂತರ ಧರಣಿ ನಡೆಸುತ್ತಿದೆ. ರೈತರ ಮನವಿಗೆ ಸ್ಪಂದಿಸಿರುವ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು, ಅವರ ಸೂಚನೆಯಂತೆ ಶ್ರೀ ಮಂಗಳಾನಂದಸ್ವಾಮೀಜಿ ಧರಣಿ ಸ್ಥಳಕ್ಕೆ ಭೇಟಿ ನೀಡಿದರು.

ಇದೇ ವೇಳೆ ಮಾತನಾಡಿದ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್,66 ದಿನಗಳಿಂದ ರೈತರು ಹೋರಾಟ ನಡೆಸುತ್ತಿದ್ದರೂ ಸರ್ಕಾರ ಮತ್ತು ಜಿಲ್ಲಾಡಳಿತ ಯಾವುದೇ ಸ್ಪಂದನೆ ನೀಡಿಲ್ಲ. ಕೆಐಎಡಿಬಿ ಸರ್ಕಾರದ ರಿಯಲ್ ಎಸ್ಟೇಟ್ ಏಜೆಂಟ್‌ನಂತೆ ಕೆಲಸ ಮಾಡುತ್ತಿದೆ. ರೈತರ ಜಮೀನು ಕಸಿದು ಕಾರ್ಪೊರೇಟ್ ಕಂಪನಿಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ರಾಜ್ಯಾದ್ಯಂತ ರೈತರು ಜೂನ್ 5ರಂದು ಬೆಂಗಳೂರಿಗೆ ಬೈಕ್ ರಿಯಲಿ ಮೂಲಕ ಲಗ್ಗೆ ಇಡಲಿದ್ದಾರೆ.ನಮ್ಮನ್ನು ತಡೆಯುವ ಶಕ್ತಿ ಯಾರಿಗಿದೆ ನೋಡೋಣ.ರೈತರನ್ನು ತಿರಸ್ಕರಿಸುವ ಧೋರಣೆ ಮುಂದುವರಿದರೆ ಪರಿಣಾಮ ಬೇರೆ ಆಗಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಅವರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯವಾದರೆ ಅದಕ್ಕೆ ಸರ್ಕಾರ ಹಾಗೂ ಜಿಲ್ಲಾಡಳಿತವೇ ಹೊಣೆ ಎಂದು ಹೇಳಿದ ಅವರು,ಈ ಹೋರಾಟ ಕೇವಲ ಜಂಗಮಕೋಟೆಗೆ ಸೀಮಿತವಲ್ಲ. ಬಿಡದಿ ಭಾಗದಲ್ಲಿ ಕೈಗಾರಿಕಾ ವಲಯ ನಿರ್ಮಾಣದ ವಿರುದ್ಧವೂ ಹೋರಾಟ ಆರಂಭವಾಗಲಿದೆ ಇನ್ನು 15 ದಿನ ಟೈಮ್ ಇದೆ ಅಷ್ಟರೊಳಗೆ ಜಂಗಮಕೋಟೆ ಕೈಗಾರಿಕ ವಲಯ ನಿರ್ಮಾಣ ಕೈ ಬಿಡಿ ಇಲ್ಲಾಂದ್ರೆ ಅಗುವ ಪರಿಣಾಮವೇ ಬೇರೆ ಎಂದು ಎಚ್ಚರಿಕೆ ಕೊಟ್ಟರು.

ಇದನ್ನು ಓದಿದ್ದೀರಾ..? ದೊಡ್ಡಬಳ್ಳಾಪುರ |ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಕೆಐಎಡಿಬಿ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ

ಧರಣಿ ಸ್ಥಳಕ್ಕೆ ಆಗಮಿಸಿದ ಎಡಿಸಿ ಭಾಸ್ಕರ್ ರೈತ ಮುಖಂಡರಿಂದ ಮನವಿ ಸ್ವೀಕರಿಸಿ,ಸರ್ಕಾರದ ಮೇಲಾಧಿಕಾರಿಗಳಿಗೆ ರವಾನೆ ಮಾಡುವುದಾಗಿ ಭರವಸೆ ನೀಡಿದರು.ಇಂದಿನ ಧರಣಿಯಲ್ಲಿ ಶಿಡ್ಲಘಟ್ಟ ಮಾಜಿ ಶಾಸಕ ಎಂ.ರಾಜಣ್ಣ,ಬಿಜೆಪಿ ಯುವ ಮುಖಂಡ ಸೀಕಲ್ ಆನಂದ್ ಗೌಡ,ರೈತ ಸಂಘದ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ,ರೈತ ಸಂಘದ ರಾಜ್ಯ ಉಪಾಧ್ಯಕ್ಷ ವೆಂಕಟನಾರಾಯಣಪ್ಪ ಡಿಎಸ್‌ಎಸ್ ರಾಜ್ಯ ಉಪಾಧ್ಯಕ್ಷ ಕೆ.ಸಿ.ರಾಜಾಕಾಂತ್, ಜಿಲ್ಲಾ ಉಪಾಧ್ಯಕ್ಷ ವೆಂಕಟರವಣಪ್ಪ,ಉಲ್ಲೂರುಪೇಟೆ ನಾರಾಯಣಸ್ವಾಮಿ, ಕರವೇ ರಾಜ್ಯ ಉಪಾಧ್ಯಕ್ಷ ತಿಪ್ಪೇನಹಳ್ಳಿ ನಾರಾಯಣಸ್ವಾಮಿ, ಗುಡಿಬಂಡೆ ಒಕ್ಕಲಿಗರ ಸಂಘದ ಅಧ್ಯಕ್ಷ ಮಂಜುನಾಥ್ ರೆಡ್ಡಿ,ಗುಡಿಬಂಡೆ ರಾಮು,ಕಂಪನಿ ದೇವರಾಜ್,ಶಿಡ್ಲಘಟ್ಟ ವೆಂಕಟೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...