ಕೆಲಸದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಬೆಸ್ಕಾಂ ನೌಕರ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿ ತಾಲೂಕಿನ ಬಿಸಲಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಉದಯ್ ಕುಮಾರ್(28) ಮೃತ ದುರ್ದೈವಿ. ಬಿಸಲಹಳ್ಳಿ ಗ್ರಾಮದಲ್ಲಿ ಅಳವಡಿಸಿರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಹತ್ತಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿದ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆ 9-30ರಲ್ಲಿ ಲೈನ್ ಮ್ಯಾನ್ ಉದಯ್ ಕುಮಾರ್ ಕಂಬದ ಮೇಲೆಯೇ ಮೃತಪಟ್ಟಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕ್ರೀಡಾಪಟುಗಳು ದುಶ್ಚಟದಿಂದ ದೂರವಿರಿ: ಮಹೇಶ್ ಹೆಗಡೆ
ಬೆಸ್ಕಾಂ ಅಧಿಕಾರಿಗಳು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
