ಚಿಕ್ಕಬಳ್ಳಾಪುರ | ಏ.26ರಂದು ಲೋಕಸಭಾ ಚುನಾವಣೆ, 19.6 ಲಕ್ಷ ಮತದಾರರಿಂದ ಮತದಾನ: ಜಿಲ್ಲಾಧಿಕಾರಿ ರವೀಂದ್ರ 

Date:

Advertisements

2024ರ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆ ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಚುನಾವಣಾ ನೀತಿ ಸಂಹಿತೆಯ ಪಾಲನೆಗೆ ಅಗತ್ಯ ತುರ್ತು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ ಎನ್ ರವೀಂದ್ರ ತಿಳಿಸಿದರು.

ಚಿಕ್ಕಬಳ್ಳಾಪುರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ “ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿ” ಕುರಿತು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.

“ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆ ವ್ಯಾಪ್ತಿಯಲ್ಲಿ 08 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಈ ಕ್ಷೇತ್ರಗಳಿಂದ ಪ್ರಸ್ತುತ ಒಟ್ಟು 19,66,067 ಮಂದಿ ಮತದಾರರಿದ್ದು, ಈ ಪೈಕಿ 9,76,436 ಮಂದಿ ಪುರುಷರು, 9,89,369 ಮಂದಿ ಮಹಿಳೆಯರು ಹಾಗೂ 262 ಮಂದಿ ತೃತೀಯ ಲಿಂಗಿ ಮತದಾರರಿದ್ದು, ಅವರೆಲ್ಲರಿಗೂ ಚುನಾವಣಾ ಗುರುತಿನ ಚೀಟಿಯನ್ನು ವಿತರಿಸಲಾಗಿರುತ್ತದೆ. ಅಲ್ಲದೇ ಮಾರ್ಚ್ 25ರೊಳಗೆ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ನೋಂದಣಿಯಾಗುವ ಮತದಾರರಿಗೂ ಕೂಡ ಮತದಾನಕ್ಕೆ ಅವಕಾಶವಿರುತ್ತದೆ” ಎಂದು ಮಾಹಿತಿ ನೀಡಿದರು.

Advertisements

“ಕ್ಷೇತ್ರದಲ್ಲಿ 85 ವರ್ಷಕ್ಕೂ ಮೇಲ್ಪಟ್ಟ 18,809 ಮಂದಿ ಮತದಾರರು ಹಾಗೂ ವಿಕಲಚೇತನ 26,559 ಮಂದಿ ಮತದಾರರಿದ್ದು, ಅವರೆಲ್ಲರ ಮಾಹಿತಿಯನ್ನು ಪಡೆದು ಇಚ್ಚಿಸಿದವರಿಗೆ ಮನೆ ಮತದಾನಕ್ಕೂ ಸಹ ಅವಕಾಶ ಕಲ್ಪಿಸಲಾಗುವುದು. ಮತದಾನ ಮಾಡಲು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಮತಗಟ್ಟೆಗಳನ್ನು ಸಿದ್ದಪಡಿಸಿಕೊಂಡು ಮೂಲಸೌಕರ್ಯಗಳನ್ನು ಒದಗಿಸಲಾಗಿರುತ್ತದೆ. ಈ ಪೈಕಿ 44 ಅತಿ ಸೂಕ್ಷ್ಮ(Vulnerable PS) ಹಾಗೂ 382 ಸೂಕ್ಷ್ಮ(Critical PS) ಮತಗಟ್ಟೆಗಳನ್ನು ಗುರುತಿಸಲಾಗಿದೆ. 2,326 ಮತಗಟ್ಟೆಗಳ ಪೈಕಿ ಶೇ.50ರಷ್ಟು ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಸೌಲಭ್ಯವನ್ನು ಮಾಡಲಾಗುತ್ತದೆ” ಎಂದು ತಿಳಿಸಿದರು.

“ಚುನಾವಣಾ ಕರ್ತವ್ಯಗಳಿಗೆ ಯಾವುದೇ ಅಡೆತಡೆಯಾಗದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡಿ ನಿಯೋಜಿಸಲಾಗಿದೆ. ಪ್ರಸ್ತುತ ಒಟ್ಟು 14,880 ಮಂದಿ ಸಿಬ್ಬಂದಿಯನ್ನು ನಿಯೋಜಿಸಿದ್ದು, ಈ ಪೈಕಿ 196 ಸೆಕ್ಟರ್ ಅಧಿಕಾರಿಗಳು, ತಲಾ 2,557 ಪಿಆರ್‌ಒಗಳು, ಎಪಿಆರ್‌ಒ, ಪಿಒ-1, ಪಿಒ-2 ಹಾಗೂ ಡಿ ಗ್ರೂಪ್ ಸಿಬ್ಬಂದಿಯನ್ನು ಮೀಸಲಿಡಲಾಗಿದೆ. ಅಗತ್ಯಕ್ಕೆ ತಕ್ಕಷ್ಟು ವಿದ್ಯುನ್ಮಾನ ಮತಯಂತ್ರಗಳನ್ನೂ ಕೂಡ ಸಿದ್ದಪಡಿಸಿಕೊಳ್ಳಲಾಗಿದೆ” ಎಂದರು.

“ಚುನಾವಣಾ ಸಂದರ್ಭದಲ್ಲಿ ಯಾವುದೇ ಅಭ್ಯರ್ಥಿಗಳು ಮತದಾರರಿಗೆ ಆಮಿಷ ಒಡ್ಡುವ ವಸ್ತುಗಳನ್ನು ವಿತರಿಸುವುದು ಕಂಡುಬಂದಲ್ಲಿ ಕೂಡಲೇ ಸಾರ್ವಜನಿಕರು ಸಿ-ವಿಜಲ್ ಆ್ಯಪ್‌ ಮುಖಾಂತರ ದೂರು ಸಲ್ಲಿಸಿದರೆ 100 ನಿಮಿಷಗಳ ಒಳಗೆ ಕ್ರಮವಹಿಸಲಾಗುವುದು. ಅಲ್ಲದೆ ಚುನಾವಣೆಗೆ ಸಂಬಂಧಿಸಿದ ಮಾಹಿತಿ ಹಾಗೂ ಮತದಾರರ ನೋಂದಣಿಗೆ ಸಂಬಂಧಿಸಿದಂತೆ ವೋಟರ್‌ ಹೆಲ್ಪ್‌ಲೈನ್‌ ಮೂಲಕ ಸಂಪರ್ಕಿಸಬಹುದು. ಜತೆಗೆ ಟೋಲ್ ಫ್ರೀ ನಂ. 1950 ಕರೆ ಮಾಡಿ ತಿಳಿಸಬಹುದು. ಚುನಾವಣೆಗೆ ಸಂಬಂಧಪಟ್ಟಂತೆ ಸಭೆ ಸಮಾರಂಭ, ಮೆರವಣಿಗೆ ಇನ್ನಿತರ ಅನುಮತಿಗೆ ಏಕಗವಾಕ್ಷಿ ಪದ್ದತಿ ಮೂಲಕ ಕ್ರಮವಹಿಸಲಾಗಿದ್ದು, ಸುವಿಧಾ ಆ್ಯಪ್‌ ಮುಖಾಂತರ ಅನುಮತಿಗೆ ಅರ್ಜಿ ಸಲ್ಲಿಸಬಹುದು. ವಿಶೇಷ ಚೇತನರು ಮನೆ ಮತದಾನಕ್ಕಾಗಿ ಸಖ್ಯಮ್‌ ಆ್ಯಪ್‌ ಮೂಲಕ ನೋಂದಣಿಯಾಗಬಹುದು” ಎಂದು ತಿಳಿಸಿದರು.

37 ಚೆಕ್ ಪೋಸ್ಟ್ ಗಳು : “ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 37 ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದ್ದು, ಅಕ್ರಮ ಹಣ, ಮದ್ಯ, ಬಹುಮಾನ ನೀಡುವ ವಸ್ತುಗಳು ಸೇರಿದಂತೆ ಎಲ್ಲ ಅಕ್ರಮ ಸಾಗಾಟವನ್ನು ತಡೆಗಟ್ಟಲು ಇಂದಿನಿಂದಲೆ ಚೆಕ್ ಪೋಸ್ಟ್‌ಗಳು ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ಎಲ್ಲ ಚೆಕ್ ಪೋಸ್ಟ್‌ಗಳಿಗೆ 3 ಪಾಳಿಗಳಲ್ಲಿ ಅಧಿಕಾರಿಗಳನ್ನು ಮತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿರುತ್ತದೆ. ಈ ಎಲ್ಲ ಕಾರ್ಯಗಳ ಕುರಿತು ನಿಗಾಯಿಡಲು ಸಿಸಿ ಕ್ಯಾಮೇರಾಗಳನ್ನು ಅಳವಡಿಸಲಾಗುತ್ತಿದೆ” ಎಂದರು.

ಮಾದರಿ ನೀತಿ ಸಂಹಿತೆ : “ಮಾದರಿ ನೀತಿ ಸಂಹಿತೆಯು ಈ ತಕ್ಷಣದಿಂದ ಕ್ಷೇತ್ರದಾದ್ಯಂತ ಜಾರಿಯಲ್ಲಿರುತ್ತದೆ. 24 ಗಂಟೆಯೊಳಗೆ ಸರ್ಕಾರಿ ಅಧೀನದಲ್ಲಿರುವ ಸರ್ಕಾರಿ ಕಟ್ಟಡಗಳಲ್ಲಿ, 48 ಗಂಟೆಯೊಳಗೆ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ 72 ಗಂಟೆಗಳೊಳಗೆ ಖಾಸಗಿ ಸ್ಥಳಗಳಲ್ಲಿರುವ ಎಲ್ಲ ಜಾಹೀರಾತು, ಭಿತ್ತಿಚಿತ್ರಗಳು, ಬಂಟಿಂಗ್, ಬ್ಯಾನರ್ಸ್, ಪೋಸ್ಟರ್‌ಗಳನ್ನು ತೆರವುಗೊಳಿಸಬೇಕು. 24 ಗಂಟೆಯೊಳಗೆ ಸರ್ಕಾರಿ ಕಚೇರಿಗಳ ಸಾಮಾಜಿಕ ಜಾಲತಾಣಗಳಲ್ಲಿರುವ ಎಲ್ಲ ಜನ ಪ್ರತಿನಿಧಿಗಳ ವಿವರ ಮತ್ತು ರಾಜಕೀಯ ವ್ಯಕ್ತಿಗಳ ಭಾವಚಿತ್ರಗಳನ್ನು ತೆರವುಗೊಳಿಸಲು ಕ್ರಮವಹಿಸಲು ಈಗಾಗಲೇ ಸೂಚನೆ ನಿಡಲಾಗಿದೆ” ಎಂದು ತಿಳಿಸಿದರು.

ಚುನಾವಣಾ ವೇಳಾಪಟ್ಟಿ : ಅಧಿಸೂಚನೆ ಹೊರಡಿಸುವ ದಿನಾಂಕ ಮಾರ್ಚ್ 28, ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 04, ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ ಏಪ್ರಿಲ್ 05, ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ ಏಪ್ರಿಲ್ 08 ಮತ್ತು ಮತದಾನ ನಡೆಯುವ ದಿನಾಂಕ ಏಪ್ರಿಲ್ 26, ಮತ ಎಣಿಕೆ ದಿನಾಂಕ ಜೂನ್ 04 ಹಾಗೂ ಚುನಾವಣೆ ಮುಕ್ತಾಯಗೊಳ್ಳುವ ದಿನಾಂಕ ಜೂನ್ 6 ಆಗಿರುತ್ತದೆ. ಒಟ್ಟಾರೆ ಮುಕ್ತ ನ್ಯಾಯ ಸಮ್ಮತ, ಪಾರದರ್ಶಕ ಚುನಾವಣೆ ನಡೆಸಲು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಮಸ್ತ ನಾಗರಿಕರು ಮಾದರಿ ನೀತಿ ಸಂಹಿತೆ ಪಾಲಿಸುವ ಮೂಲಕ ಸಹಕರಿಸಬೇಕು. ಈ ಹಿಂದಿಗಿಂತಲೂ ಮತದಾನದ ಪ್ರಮಾಣ ಅಧಿಕವಾಗಲು ಚುನಾವನಾ ಮತದಾನದಲ್ಲಿ ತಾವೆಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ನ್ಯಾಯಸಮ್ಮತ ಹಾಗೂ ನಿರ್ಭೀತಿ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ: ಜಿಲ್ಲಾಧಿಕಾರಿ

ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ ಟಿ ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ ಎಲ್ ನಾಗೇಶ್, ಅಪರ ಜಿಲ್ಲಾಧಿಕಾರಿ ಡಾ ಎನ್ ತಿಪ್ಪೇಸ್ವಾಮಿ, ಚುನಾವಣಾ ತಹಶೀಲ್ದಾರ್ ಮುನಿಶಾಮಿರೆಡ್ಡಿ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X