ಚಿಕ್ಕಬಳ್ಳಾಪುರ | ಲೋಕಾಯುಕ್ತ ದಾಳಿ: ಲಂಚ ಪಡೆಯುವಾಗ ಸಿಕ್ಕಿಬಿದ್ದ ನಗರಸಭೆ ಎಂಜಿನಿಯರ್!

Date:

ಚಿಕ್ಕಬಳ್ಳಾಪುರ ನಗರಸಭೆಯ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಗುತ್ತಿಗೆದಾರನಿಗೆ ಬಿಲ್ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟು ನಗರಸಭೆ ಎಂಜಿನಿಯರ್ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ನಗರಸಭೆ ಅಧಿಕಾರಿಗಳ ಲಂಚಾವತಾರ ಇದೀಗ ಬಹಿರಂಗವಾಗಿದ್ದು, ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ಕಳೆದ ಹಲವು ದಿನಗಳಿಂದ ನಗರಸಭೆ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪ ಇತ್ತು. ಆದರೆ ಅದು ಬಹಿರಂಗವಾಗಿರಲಿಲ್ಲ. ಕಳೆದ ಬುಧವಾರ ಸಂಜೆ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿ ನಗರಸಭೆ ಅಧಿಕಾರಿಗಳ ಭ್ರಷ್ಟಾಚಾರ ಬಹಿರಂಗ ಮಾಡಿದ್ದು, ಲಂಚ ಸ್ವೀಕರಿಸುತ್ತಿದ್ದ ಎಂಜಿನಿಯರ್‌ ಅರುಣ್‌ರನ್ನು ಲಂಚದ ಸಮೇತ ವಶಕ್ಕೆ ಪಡೆಯುವಲ್ಲಿ ಲೋಕಾಯುಕ್ತ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡುಗಳಲ್ಲಿ ಗುತ್ತಿಗೆ ಕೆಲಸ ಮಾಡಿದ್ದ ಗುತ್ತಿಗೆದಾರರೊಬ್ಬರಿಗೆ ಗುತ್ತಿಗೆಯ ಹಣದ ಬಿಲ್ ಮಾಡಲು ಅರುಣ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಗುತ್ತಿಗೆದಾರನಿಗೆ 75 ಸಾವಿರ ನೀಡುವಂತೆ ಬೇಡಿಕೆ ಇಟ್ಟಿದ್ದು, ಹಣ ನೀಡದೆ ಬಿಲ್ ಮಾಡೋದಿಲ್ಲ ಎಂದು ಪದೇ ಪದೇ ಕಿರುಕುಳ ನೀಡುತ್ತಿದ್ದರಂತೆ. ಇದರಿಂದ ರೋಸಿಹೋದ ಗುತ್ತಿಗೆದಾರ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ | ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ಕಾರ್ಯದಿಂದ ವಿನಾಯಿತಿ ನೀಡಲು ಶಿಕ್ಷಕರ ಮನವಿ

ಗುತ್ತಿಗೆದಾರ ನೀಡಿದ ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದು, ಎಂಜಿನಿಯರ್ ಅರುಣ್ ಬೇಡಿಕೆ ಇಟ್ಟಿದ್ದ 75 ಸಾವಿರದಲ್ಲಿ ಇಂದು 35 ಸಾವಿರ ನೀಡುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಲಂಚದ ಹಣದ ಸಮೇತ ಎಂಜಿನಿಯರ್ ಅರುಣ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಅಧಿಕಾರಿಗಳ ವಿಚಾರಣೆ ಇನ್ನೂ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ಸಿಗಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಶೇಕ್ರಾ ನಾಯ್ಕ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ

2026ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ವಿಜಯನಗರ ಜಿಲ್ಲೆ ಹರಪನಹಳ್ಳಿಯ ಶೇಕ್ರಾನಾಯ್ಕ...

ರಾಯಚೂರು | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗುಡಿಸಲು ಸಂಪೂರ್ಣ ಭಸ್ಮ

ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಶನಿವಾರ...

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...