ಚಿಕ್ಕಬಳ್ಳಾಪುರ | ʼಕೊನೆಯವರೆಗೆ ಬಯಲು ಸೀಮೆಗೆ ನೀರು ಕೊಡಿʼ ಎಂದು ಹೋರಾಡಿದವರು ಪರಮಶಿವಯ್ಯ: ಆಂಜನೇಯ ರೆಡ್ಡಿ

Date:

ಈವರೆಗೆ ಯಾವುದೇ ಸರ್ಕಾರಗಳು ಶಾಶ್ವತ ನೀರಾವರಿ ಭದ್ರತೆಯನ್ನು‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಒದಗಿಸಿಲ್ಲ ಎಂದು ನೀರಾವರಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.

- Advertisement -

ನಗರದಲ್ಲಿ ಸೋಮವಾರ ನೀರಾವರಿ ತಜ್ಞ ದಿ. ಪರಮಶಿವಯ್ಯ ಅವರ 10ನೇ ಪುಣ್ಯಸ್ಮರಣೆ ಅಂಗವಾಗಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಮತ್ತು ಯುವಶಕ್ತಿ ಸಂಘಟನೆ ಹಮ್ಮಿಕೊಂಡಿದ್ದ ನೀರಾವರಿಗಾಗಿ ಸಂಕಲ್ಪ ಸಮಾವೇಶದಲ್ಲಿ ರೈತ ಮುಖಂಡರು, ಹೋರಾಟಗಾರರು ಸರ್ಕಾರ ಮತ್ತು ಜನಪ್ರತಿನಿಧಿಗಳ ವಿರುದ್ಧ ಅಸಮಾಧಾನ ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನಗರದ ಮರಳ ಸಿದ್ದೇಶ್ವರ ದೇವಸ್ಥಾನ ಬಳಿಯಿಂದ ಆರಂಭವಾದ ರ್‍ಯಾಲಿಯು ಶಿಡ್ಲಘಟ್ಟ ವೃತ್ತದ ಮೂಲಕ‌ ಸಾಗಿತು.

ನೀರಾವರಿ ಹೋರಾಟ 1

ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್ ಆಂಜನೇಯ ರೆಡ್ಡಿ ಮಾತನಾಡಿ, “ಪರಮಶಿವಯ್ಯ ಅವರು ತಮ್ಮ ಕೊನೆಯಸಿರಿರುವವರೆಗೆ ಬಯಲು ಸೀಮೆ ಜಿಲ್ಲೆಗಳಿಗೆ ನೀರು ಕೊಡಿ ಎಂದು ಹೋರಾಟ ಮಾಡಿದವರು” ಎಂದರು.

“ಈವರೆಗೂ ಬಯಲು ಸೀಮೆಯ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆಯಡಿ ಒಂದೇ ಒಂದು ಟಿಎಂಸಿ ಅಡಿ ನೀರು ದೊರೆತಿಲ್ಲ. ಕುಡಿಯುವ ನೀರಿನಲ್ಲಿ ಅಪಾಯಕಾರಿ ಯುರೇನಿಯಂ, ಅರ್ಸೆನಿಕ್ ಅಂಶಗಳು ಅಪಾಯದ ಮಟ್ಟದಲ್ಲಿವೆ. ಆದರೆ ಈ ಬಗ್ಗೆ ಸರ್ಕಾರಗಳು, ಜನಪ್ರತಿನಿಧಿಗಳು ತಲೆ ಕೆಡಿಕೊಳ್ಳುತ್ತಿಲ್ಲ” ಎಂದು ಕಿಡಿಕಾರಿದರು.

“ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಳಕೆಗಾಗಿ ಕೊಳಚೆ ನೀರನ್ನು ಮೂರು ಹಂತದಲ್ಲಿ ಶುದ್ದೀಕರಿಸಲಾಗುತ್ತಿದೆ. ಕಬ್ಬನ್‌ ಪಾರ್ಕ್‌ನಲ್ಲಿ ಗಿಡಗಳಿಗಾಗಿ ಮೂರು ಹಂತದಲ್ಲಿ ಶುದ್ದೀಕರಿಸಲಾಗುತ್ತಿದೆ. ಆದರೆ ಈ ಮೂರು ಜಿಲ್ಲೆಗಳಿಗೆ ಕೆ ಸಿ ವ್ಯಾಲಿ ಮತ್ತು ಎಚ್ ಎನ್ ವ್ಯಾಲಿ ಯೋಜನೆ ಮೂಲಕ ಮನುಷ್ಯರಿಗಾಗಿ ಹರಿಸುತ್ತಿರುವ ನೀರನ್ನು ಎರಡು ಹಂತದಲ್ಲಿ ಶುದ್ದೀಕರಿಸಲಾಗುತ್ತಿದೆ. ಇದು ಎಷ್ಟು ಸರಿ” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ | ಜಯಪ್ರಕಾಶ್ ಹೆಗ್ಡೆಗೆ ಕೈ ತಪ್ಪುತ್ತಾ ಕಾಂಗ್ರೆಸ್ ಟಿಕೆಟ್?

“ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನೇ ಪಾಲಿಸುತ್ತಿಲ್ಲ. ಕೊಳಚೆ ನೀರಿನಿಂದ ಕೆರೆಗಳು ನಾಶವಾಗುತ್ತಿವೆ. ನಾವೇನು ಪಾಪ ಮಾಡಿದ್ದೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್ ರೆಡ್ಡಿ, ರೈತ ಮುಖಂಡರುಗಳಾದ ಆಯೇಷಾ, ಬಿ ಎನ್ ಗಂಗಾಧರಪ್ಪ, ಲೋಕೇಶ್ ಗೌಡ, ಉಷಾ ಕಿರಣ, ಕನ್ನಡ ಸೇನೆ ರವಿಕುಮಾರ್, ಪ್ರಕಾಶ್, ಮಲ್ಲುರಿ ಹರೀಶ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...