ಚಿಕ್ಕಬಳ್ಳಾಪುರ | ಪೋಷಕರ ಆಯ್ಕೆ ನಮ್ಮ ಕೈಯ್ಯಲ್ಲಿಲ್ಲ: ಆರೋಗ್ಯದ ಆಯ್ಕೆ ನಮ್ಮ ಕೈಯ್ಯಲ್ಲಿದೆ: ಡಾ. ಸಿ.ಎಸ್. ಹಿರೇಮಠ್

Date:

ಹೆತ್ತವರನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕು ಯಾವ ಮಕ್ಕಳ ಕೈಯಲ್ಲಿಯೂ ಇರುವುದಿಲ್ಲ. ಆದರೆ ಬೆಳೆಯುವಾಗ, ಬೆಳೆದು ಬದುಕು ಕಟ್ಟಿಕೊಳ್ಳುವಾಗ ಉತ್ತಮ ಜೀವನ ಶೈಲಿ ಹೊಂದುವುದು, ಆರೋಗ್ಯ ಕಾಪಾಡಿಕೊಳ್ಳುವುದು ನಮ್ಮ ಕೈಯಲ್ಲಿಯೇ ಇರುತ್ತದೆ ಎಂದು ಸತ್ಯಸಾಯಿ ಮಾನವ ಅಭ್ಯುದಯ ವೈದ್ಯಕೀಯ ವಿಶ್ವವಿದ್ಯಾಲಯ ಹೃದ್ರೋಗ ವಿಭಾಗದ ಮುಖ್ಯಸ್ಥರಾದ ಡಾ.ಸಿ.ಎಸ್.ಹಿರೇಮಠ್ ತಿಳಿಸಿದರು.

- Advertisement -

ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಹುಣ್ಣಿಮೆ ಅಂಗವಾಗಿ ನಡೆದ ಪತ್ರಕರ್ತರ ಸಾಂಸ್ಕೃತಿಕ ಚಿಂತನಾ ಸಮ್ಮಿಲನದ ಭಾಗವಾಗಿ ಎರಡನೇ ತಿಂಗಳ ಕಾರ್ಯಕ್ರಮದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಸಂಬಂಧ ತಜ್ಞರ ಜತೆ ಸಂವಾದಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಯುವಕರು ಮತ್ತು ಮಕ್ಕಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘವು ಹುಣ್ಣಿಮೆ ಅಂಗವಾಗಿ ತಜ್ಞ ವೈದ್ಯರು ಮತ್ತು ಪತ್ರಕರ್ತರ ಜತೆ ಮುಖಾಮುಖಿ ಸಂವಾದ ಏರ್ಪಡಿಸಿ ಈ ಬಗ್ಗೆ ಸಾಕಷ್ಟು ಖಚಿತ ಮಾಹಿತಿಯನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾದರು.

ಸಂವಾದಕ್ಕೂ ಮುನ್ನ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎಸ್.ಹಿರೇಮಠ್, “ಕೊರೋನಾ ನಂತರದ ಕಾಲದಲ್ಲಿ ದೇಶದಲ್ಲಿ ಹೃದ್ರೋಗ ಸಮಸ್ಯೆ ಯುವಕರು ಮತ್ತು ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಹೃದಯಸ್ತಂಭನ ಭಾರತದ ಬಹುದೊಡ್ಡ ಸಮಸ್ಯೆಯಾಗಿದೆ. ಇದನ್ನು ಹೋಗಲಾಡಿಸಲು ನಮ್ಮ ಸರಕಾರಗಳು, ಸಮಾಜ, ಮಠಮಾನ್ಯಗಳು ಮತ್ತು ಸಂಘ ಸಂಸ್ಥೆಗಳು ಹೆಚ್ಚಿನ ರೀತಿಯಲ್ಲಿ ಶ್ರಮಿಸುತ್ತಿವೆ. ಜನತೆ ಕೂಡ ಇದನ್ನು ಅರಿತು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಮುಂದಾಗುವುದು ಅಗತ್ಯ ಎಂದರು.

ಆಧುನಿಕ ಜೀವನ ಶೈಲಿಯಿಂದಾಗಿ ಹಲವಾರು ರೋಗಗಳಿಗೆ ನಾವು ತುತ್ತಾಗುತ್ತಿದ್ದೇವೆ. ಹೃದ್ರೋಗಕ್ಕೆ ಪ್ರಧಾನವಾಗಿ ಹೆಚ್ಚಿನ ರಕ್ತದೊತ್ತಡ, ಹೆಚ್ಚಿನ ಕೊಲೆಸ್ಟ್ರಾಲ್, ಧೂಮಪಾನ, ಮಧುಮೇಹ, ಕರಿದ ಪದಾರ್ಥಗಳು ಮತ್ತು ಕ್ರಿಯಾಶೀಲವಲ್ಲದ ಜೀವನ ಶೈಲಿ ಕಾರಣವಾಗಿದೆ. ಇದನ್ನು ತಪ್ಪಿಸಬೇಕಾದರೆ ಧ್ಯಾನ, ಯೋಗ, ನಿತ್ಯ ವ್ಯಾಯಾಮ, ಜಂಕ್ ಫುಡ್ ರಹಿತ ಪೌಷ್ಟಿಕ ಆಹಾರ ಸೇವನೆ, ಕಾಲಕಾಲಕ್ಕೆ ತಜ್ಞ ವೈದ್ಯರಿಂದ ತಪಾಸಣೆಯ ಅಗತ್ಯವಿದೆ ಎಂದರು.

WhatsApp Image 2025 08 11 at 11.26.29 AM

ಮುದ್ದೇನಹಳ್ಳಿಯ ಸದ್ಗುರು ಮಧುಸೂಧನ್ ಸಾಯಿ ಮಾನವ ಅಭ್ಯುದಯ ಆಸ್ಪತ್ರೆಯಲ್ಲಿ ಪತ್ರಕರ್ತರಿಗಾಗಿ ಒಂದು ದಿನ ಹೃದ್ರೋಗ ತಪಾಸಣೆ ಮಾಡಲು ವ್ಯವಸ್ಥೆ ಮಾಡಲಾಗುವುದು. ಆಸಕ್ತರು ಹೆಸರು ನೋಂದಾಯಿಸಿಕೊಟ್ಟರೆ ಆದಷ್ಟು ಶೀಘ್ರವೇ ಇದಕ್ಕೆ ಬೇಕಾದ ಕ್ರಮಗಳನ್ನು ಮುಗಿಸಲಾಗುವುದು. ಈ ವೇಳೆ ಹೃದಯಾಘಾತ ಪತ್ತೆ ಹಚ್ಚುವ ಹಾಗೂ ಚಿಕಿತ್ಸೆ ಪೂರ್ವ ಕೈಗೊಳ್ಳಬೇಕಾದ ತಪಾಸಣಾ ಕ್ರಮಗಳ ಬಗ್ಗೆ ತರಬೇತಿ ನೀಡಲಾಗುವುದು ಎಂದರು.

ಹೃದಯಾಘಾತಕ್ಕೆ ಒಳಗಾಗುವ ಯಾರೇ ಆಗಲಿ, ಹತ್ತಿರದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಈ ಘಟನೆ ಆದ 3 ಗಂಟೆಯ ಒಳಗೆ ಸೂಕ್ತ ಮತ್ತು ಸಮರ್ಥ ಆಸ್ಪತ್ರೆಗೆ ರೋಗಿಯನ್ನು ಕರೆದೊಯ್ದರೆ ಮಾತ್ರ ಅಮೂಲ್ಯ ಜೀವ ಉಳಿಸಬಹುದು. ಸತ್ಯಸಾಯಿ ಸರಳ ಮೆಮೋರಿಯಲ್ ಆಸ್ಪತ್ರೆಯಲ್ಲಿ ಕೂಡ ಹೃದಯಾಘಾತಕ್ಕೆ ಚಿಕಿತ್ಸೆ ನೀಡಲಾಗುವುದು.ಈ ಭಾಗದ ಜನತೆ ಇದರ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಕೋರಿದರು.

ಮಕ್ಕಳ ಹೃದ್ರೋಗ ತಜ್ಞೆ ಡಾ.ಆನಿ ಮಾತನಾಡಿ, ಮಕ್ಕಳಲ್ಲಿ ವಂಶಪಾರಂಪರ್ಯವಾಗಿ ಬರುವ ಹೃದ್ರೋಗದ ಸಮಸ್ಯೆ, ಕಾರಣ ಪರಿಣಾಮಗಳ ಬಗ್ಗೆ ತಿಳಿಸಿಕೊಟ್ಟರು.

ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಂ.ಜಯರಾಮ್ ಮಾತನಾಡಿ, “ಬಿಡುವಿಲ್ಲದ ವೇಳೆಯಲ್ಲಿಯೂ ನಮ್ಮ ಮನವಿ ಮೇರೆಗೆ ಹುಣ್ಣಿಮೆ ಕಾರ್ಯಕ್ರಮಕ್ಕೆ ಬಂದು ಹೃದ್ರೋಗ ಸಂಬಂಧಿ ಖಾಯಿಲೆಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿ,ನಂತರ ನಡೆದ ಸಂವಾದದಲ್ಲಿ ಪತ್ರಕರ್ತರು ಎತ್ತಿದ ಹಲವು ಪ್ರಶ್ನೆಗಳಿಗೆ ಸಮಾಧಾನದಿಂದ ಉತ್ತರ ನೀಡಿದ್ದಾರೆ. ಇಬ್ಬರೂ ವೈದ್ಯರಿಗೆ ಸಂಘವು ಆಭಾರಿಯಾಗಿದೆ” ಎಂದರು.

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ವ್ಯಾಪಕ ಚರ್ಚೆಗೆ ಕಾರಣವಾದ ಕಾಂಗ್ರೆಸ್‌ನ ಮಾಜಿ ಸಂಸದ ಜನಾರ್ಧನ ಪೂಜಾರಿ ಹೇಳಿಕೆ

ಹುಣ್ಣಿಮೆ ಕಾರ್ಯಕ್ರಮದಲ್ಲಿ ಹಾಡುಗಾರಿಕೆ ನಡೆಸಿಕೊಟ್ಟ ಪ್ರೌಢಶಾಲೆ ಶಿಕ್ಷಕ ನಾರಾಯಣಸ್ವಾಮಿ, ಜನಕಲಾರಂಗದ ವೆಂಕಟರಾಮು, ನಿಲುವುರಾತಹಳ್ಳಿ ನಾರಾಯಣಸ್ವಾಮಿ ಅವರನ್ನು ಇದೇ ವೇಳೆ ಪ್ರಮಾಣಪತ್ರ ನೀಡಿ ಪ್ರೋತ್ಸಾಹಿಸಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು ಮುನಿರಾಜು ಎಂ ಅರಿಕೆರೆ ಮಾಡಿದರೆ, ಸದಾಶಿವ ಬಿ ಆರಾಧ್ಯ ಸ್ವಾಗತಿಸಿ ವಂದಿಸಿದರು. ಈ ವೇಳೆ ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ, ಖಜಾಂಚಿ ರವಿಕುಮಾರ್, ಹಿರಿಯ ಪತ್ರಕರ್ತರು, ಸಂಘದ ಎಲ್ಲ ಸದಸ್ಯರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...