ಚಿಕ್ಕಬಳ್ಳಾಪುರ | ಏಪ್ರಿಲ್‌ 20ರಂದು ಪ್ರಧಾನಿ ಮೋದಿ ಆಗಮನ

Date:

Advertisements

ಏಪ್ರಿಲ್‌ 20ರ ಶನಿವಾರ 3 ಗಂಟೆಗೆ ಚಿಕ್ಕಬಳ್ಳಾಪುರ ತಾಲೂಕಿನ ಚೊಕ್ಕಹಳ್ಳಿ ಬಳಿ ನಡೆಯಲಿರುವ ಪ್ರಚಾರ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಕೆ ವಿ ನಾಗರಾಜು ತಿಳಿಸಿದರು.

ಚಿಕ್ಕಬಳ್ಳಾಪುರದಲ್ಲಿ ಗುರುವಾರ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, “ತಾಲೂಕಿನ ಚೊಕ್ಕಹಳ್ಳಿ ಬಳಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ” ಎಂದು ಹೇಳಿದರು.

“ಎನ್‌ಡಿಎ ಅಭ್ಯರ್ಥಿಗಳಾದ ಡಾ ಕೆ ಸುಧಾಕರ್, ಕೋಲಾರ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಅವರ ಪರ ಉಭಯ ನಾಯಕರು ಮತಯಾಚನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಸುಮಾರು 1.5 ಲಕ್ಷ ಮಂದಿ ಸೇರಲಿದ್ದಾರೆ. ಎಲ್ಲರೂ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದರು.

Advertisements

“ಕಾರ್ಯಕ್ರಮಕ್ಕೆ ಬರುವವರಿಗೆ ನೀರಿನ ಬಾಟಲ್ ಇತ್ಯಾದಿ ವಸ್ತುಗಳನ್ನು ತರಲು ಅವಕಾಶ ಇರುವುದಿಲ್ಲ. ಕಾರ್ಯಕ್ರಮದ ಆಯೋಜಕರು ಸಕಲ ವ್ಯವಸ್ಥೆ ಮಾಡಲಿದ್ದಾರೆ” ಎಂದು ತಿಳಿಸಿದರು.

ಜೆಡಿಎಸ್ ಅಧ್ಯಕ್ಷ ಮುನಿಯಪ್ಪ ಮಾತನಾಡಿ, “ಏಪ್ರಿಲ್‌ 20ರಂದು ಜಿಲ್ಲೆಗೆ ಎರಡನೇ ಬಾರಿಗೆ ನರೇಂದ್ರ ಮೋದಿ ಬರುತ್ತಿದ್ದಾರೆ. ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆ ಸೇರಿ 1.75 ಲಕ್ಷ ಸಂಖ್ಯೆಯಲ್ಲಿ ಜನ ಸೇರಿಸುವ ವ್ಯವಸ್ಥೆಯಾಗಿದೆ. ಬಿಜೆಪಿಯ ಪ್ರಮುಖ ನಾಯಕರು ಕಾರ್ಯಕ್ರಮಕ್ಕೆ ಬರಲಿದ್ದಾರೆ. ದೇಶದಲ್ಲಿ ಬಿಜೆಪಿ ಗೆಲ್ಲುವ ವಾತಾವರಣ ಇದೆ. ಹಾಗಾಗಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದರು.

ಬಿಎಂಟಿಸಿ ಉಪಾಧ್ಯಕ್ಷ ನವೀನ್ ಕಿರಣ್ ಮಾತನಾಡಿ, “ಏಪ್ರಿಲ್‌ 20ರಂದು ಒಂದು ಸುನಾಮಿ ಬರಲಿದೆ. ಮೋದಿಯವರ ಭಾಷಣದ ಕೇಳಲು ಎಲ್ಲರೂ ಉತ್ಸುಕರಾಗಿದ್ದಾರೆ. ನಮ್ಮ ಜಿಲ್ಲೆಗೆ ಮೋದಿಜಿ ಬಂದು ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಆದ್ದರಿಂದ ಜಿಲ್ಲೆಯ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇಶ ಕಟ್ಟುವ ಮಹಾ ಯಜ್ಞಕ್ಕೆ ಸಹಕಾರ ಕೊಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕರನ್ನು ಭಾರೀ ಅಂತರದಿಂದ ಗೆಲ್ಲಿಸಿ: ಸಚಿವ ಬೋಸರಾಜು

ರಾಮಸ್ವಾಮಿ, ಶ್ರೀನಿವಾಸ್, ಮಂಜುನಾಥ್, ರಾಮು, ಒಬಿಸಿ ನಗರಾಧ್ಯಕ್ಷ ರಾಮಣ್ಣ, ಬಿಜೆಪಿ ಜಿಲ್ಲಾ ವಕ್ತಾರ ರಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರುಳಿ, ಮೆಹಬೂಬ್ ಪಾಷಾ, ನಾರಾಯಣ ಸ್ವಾಮಿ, ಕಾಳೇಗೌಡ, ಜಿಲ್ಲಾ ಉಪಾಧ್ಯಕ್ಷ ಸೋಮಣ್ಣ, ಮಧುಚಂದ್ರ ಸೇರಿದಂತೆ ಬಿಜೆಪಿ-ಜೆಡಿಎಸ್ ಮುಖಂಡರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X