ಚಿಕ್ಕಬಳ್ಳಾಪುರ | ನಂದಿ ಬೆಟ್ಟಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ; ಪ್ರವಾಸಿಗರಿಗೆ ನಿರ್ಬಂಧ

Date:

ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರ ನಂದಿ ಬೆಟ್ಟ, ಸ್ಕಂದಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದಾರೆ.

- Advertisement -

ಭದ್ರತೆಯ ಕಾರಣಕ್ಕೆ ನಂದಿ ಬೆಟ್ಟ ಮತ್ತು ಸ್ಕಂದಗಿರಿ ಬೆಟ್ಟಗಳಿಗೆ ಸಾರ್ವಜನಿಕರ ಪ್ರವೇಶವನ್ನು ಅಪರಾಧ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಕಲಂ 144(3)ರ ಅಡಿಯಲ್ಲಿ ನಿಷೇಧಿಸಲಾಗಿದೆ. ಜಿಲ್ಲೆಯ ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಗುಡಿಬಂಡೆ, ಗೌರಿಬಿದನೂರು ವ್ಯಾಪ್ತಿಯ ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಚಿಕ್ಕಬಳ್ಳಾಪುರ ಡಿವೈಎಸ್​​ಪಿ​​​​ ವಿ.ಕೆ ವಾಸುದೇವ್ ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ರಾಷ್ಟ್ರಪತಿಗಳ ಭದ್ರತೆಗಾಗಿ ಜಿಲ್ಲಾ ವರಿಷ್ಠಾಧಿಕಾರಿ ಡಿ.ಎಲ್ ನಾಗೇಶ್ ನೇತೃತ್ವದಲ್ಲಿ ಮೂವರು ಎಸ್​ಪಿ, 10 ಮಂದಿ ಡಿವೈಎಸ್​ಪಿ, 28 ಮಂದಿ ಇನ್ಸ್​ಪೆಕ್ಟರ್​ಗಳು, 60 ಮಂದಿ ಸಬ್ ಇನ್ಸ್​ಪೆಕ್ಟರ್, 7 ಮಂದಿ ಡಿಎಆರ್ ತುಕಡಿ, ಮೂರು ಕೆಎಸ್‌ಆರ್‌ಪಿ ತುಕಡಿ ಸೇರಿದಂತೆ ಒಟ್ಟು 700 ಮಂದಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಹೆಲಿಕಾಪ್ಟರ್​ ಮೂಲಕ ಮುದ್ದೇನಹಳ್ಳಿಗೆ ಭೇಟಿ

ದ್ರೌಪದಿ ಮುರ್ಮು ಅವರು ದೆಹಲಿಯಿಂದ ಐಎಎಫ್​​ಎಂಐ-17 ವಿಶೇಷ ವಿಮಾನದ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಮಧ್ಯಾಹ್ನ 3.55ಕ್ಕೆ ಹೆಲಿಕಾಪ್ಟರ್​ ಮೂಲಕ ಮುದ್ದೇನಹಳ್ಳಿಗೆ ತೆರಳುತ್ತಾರೆ.

ಈ ಸುದ್ದಿ ಓದಿದ್ದೀರಾ? ವಿಪಕ್ಷಗಳ ವಿರುದ್ಧ ಸುಳ್ಳು ಪ್ರಚಾರಕ್ಕೆ ಪ್ರಧಾನಿಯಿಂದ ಅಧಿಕಾರ ದುರ್ಬಳಕೆ: ರಾಷ್ಟ್ರಪತಿಗೆ ಸಚಿವ ದಿನೇಶ್ ಗುಂಡೂರಾವ್ ಪತ್ರ

ಮುದ್ದೇನಹಳ್ಳಿ ಬಳಿಯ ಸತ್ಯಸಾಯಿ ಯೂನಿವರ್ಸಿಟಿ ಫಾರ್ ಹ್ಯೂಮನ್ ಎಕ್ಸಲೆನ್ಸ್ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

ಘಟಿಕೋತ್ಸವದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಪ್ರೊ. ಅಜಯ್ ಕೆ ಸೂದ್​, ಸಂಗೀತ ಮತ್ತು ಕಲೆ ವಿಭಾಗದಲ್ಲಿ ಡಾ. ಆರ್ ಕೆ ಪದ್ಮನಾಭ, ಕ್ರೀಡೆ ಮತ್ತು ದೇಹದಾರ್ಢ್ಯತೆ ವಿಭಾಗದಲ್ಲಿ ಪುಲ್ಲೇಲ ಗೋಪಿಚಂದ್, ಆರೋಗ್ಯ ವಿಭಾಗದಲ್ಲಿ ಡಾ ಪ್ರತಿಮಾ ಮೂರ್ತಿ, ಶಿಕ್ಷಣ ವಿಭಾಗದಲ್ಲಿ ಪ್ರೊ ವಿಜಯ್ ಶಂಕರ್ ಶುಕ್ಲಾ, ಸಮಾಜಸೇವೆ ವಿಭಾಗದಲ್ಲಿ ತುಳಸಿಗೌಡ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...