ಚಿಕ್ಕಬಳ್ಳಾಪುರ | ರಾಜಕೀಯ ಜಾಹಿರಾತು ಪ್ರಕಟಣೆಗೆ ಪೂರ್ವಾನುಮತಿ ಕಡ್ಡಾಯ: ಎಡಿಸಿ ತಿಪ್ಪೇಸ್ವಾಮಿ

Date:

ಚಿಕ್ಕಬಳ್ಳಾಪುರ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ನೀತಿ ಸಂಹಿತೆ ಜಾರಿಯಾದ ಮೇಲೆ ರಾಜಕೀಯ ಜಾಹಿರಾತುಗಳ ಪ್ರಚಾರ ಕೈಗೊಳ್ಳಲು ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲುಸ್ತುವಾರಿ ಸಮಿತಿಯ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಡಾ ಎನ್ ತಿಪ್ಪೇಸ್ವಾಮಿ ತಿಳಿಸಿದರು.

- Advertisement -

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಚುನಾವಣೆ ನೀತಿ ಸಂಹಿತೆ ಅವಧಿಯಲ್ಲಿ “ಮಾಧ್ಯಮಗಳು, ಮಾಧ್ಯಮ ಪ್ರತಿನಿಧಿಗಳ ಪಾತ್ರ”ದ ಕುರಿತು ನಡೆದ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಚುನಾವಣಾ ಆಯೋಗ ಲೋಕಸಭೆ ಚುನಾವಣೆ ಘೋಷಣೆ ಮಾಡಿದ ಮೇಲೆ ಮಾದರಿ ನೀತಿ ಸಂಹಿತೆ ಜಾರಿಯಾಗುವ ದಿನದಿಂದ ಚುನಾವಣಾ ಪ್ರಚಾರಗಳ ಚಲನ-ವಲನಗಳನ್ನು ನಿಗಾ ಇಡಲು ಚುನಾವಣಾ ಆಯೋಗದ ನಿರ್ದೇಶನದಂತೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲುಸ್ತುವಾರಿ ಸಮಿತಿಯನ್ನು ರಚಿಸಿಲಾಗಿದೆ. ಈ ಸಮಿತಿಯು ಮುದ್ರಣ ಮಾಧ್ಯಮ, ವಿದ್ಯುನ್ಮಾನ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸುತ್ತದೆ. ಯಾವುದೇ ರಾಜಕೀಯ ಪಕ್ಷ, ಅಭ್ಯರ್ಥಿ ಅಥವಾ ಬೆಂಬಲಿಗರು ವಿದ್ಯುನ್ಮಾನ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಜಾಹಿರಾತುಗಳ ಚುನಾವಣಾ ಪ್ರಚಾರ ಕೈಗೊಳ್ಳಲು ಎಂಸಿಎಂಸಿ ಸಮಿತಿಯಿಂದ  ಪೂರ್ವಾನುಮತಿ ನೀಡಲಾಗುತ್ತದೆ” ಎಂದು ಹೇಳಿದರು.

“ಯಾವುದೇ ಮಾಧ್ಯಮ ಪ್ರತಿನಿಧಿಗಳು ನೈಜ ಮತ್ತು ಅಧಿಕೃತ ಮಾಹಿತಿ ಹಾಗೂ ಮಾಹಿತಿಯ ಮೂಲವಿಲ್ಲದೆ ವರದಿ ಮಾಡಬಾರದು. ಕಾಸಿಗಾಗಿ ಸುದ್ಧಿ ಮಾಡುವುದು ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ. ಇಂತಹ ಪ್ರಕರಣಗಳಲ್ಲಿ ಚುನಾವಣಾ ಆಯೋಗ ಕಠಿಣ ಕಾನೂನು ಕ್ರಮ ಜರುಗಿಸುತ್ತದೆ” ಎಂದು ತಿಳಿಸಿದರು.

“ಚುನಾವಣೆ ಅಯೋಗದಿಂದ ಅಧಿಕೃತ ಅನುಮತಿ ಪತ್ರ ಪಡೆದು ಚುನಾವಣಾ ಮತದಾನದ ದಿನದಂದು ಮತಗಟ್ಟೆಗಳಿಗೆ ತೆರಳಿ ವರದಿ ಮಾಡಬಹುದು. ಆದರೆ ಮತದಾನ ಮಾಡುವುದನ್ನು ಛಾಯಚಿತ್ರ, ವೀಡಿಯೊ ಮಾಡಿ ರಹಸ್ಯ ಮತದಾನವನ್ನು ವರದಿ ಮಾಡುವಂತಿಲ್ಲ. ಯಾವುದೇ ವ್ಯಕ್ತಿ ಮತದಾನ ಮಾಡುವುದು ರಹಸ್ಯದಿಂದ ಕೂಡಿರುತ್ತದೆ. ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುವ ಪ್ರತಿನಿಧಿಗಳು ವಾರ್ತಾ ಇಲಾಖೆ ಮುಖಾಂತರ ಫೋಟೋ ಮತ್ತು ಅಗತ್ಯ ಮಾಹಿತಿ ನೀಡಿ ಚುನಾವಣಾ ಆಯೋಗದಿಂದ ಮತಗಟ್ಟೆಗಳಿಗೆ ಮತ ಎಣಿಕೆ ಕೇಂದ್ರಗಳಿಗೆ ತೆರಳಲು ಅನುಮತಿಯುಳ್ಳ ಪ್ರವೇಶ ಪತ್ರಗಳನ್ನು ಪಡೆಯಬೇಕು. ಈ ಪತ್ರಗಳನ್ನು ತೋರಿಸಿ ಮತಗಟ್ಟೆ ಅಧಿಕಾರಿಗಳ ಅನುಮತಿಯೊಂದಿಗೆ ಪ್ರವೇಶ ಪಡೆಯಬೇಕಾಗಿರುತ್ತದೆ. ಈ ನಿಟ್ಟಿನಲ್ಲಿ ನ್ಯಾಯ ಸಮ್ಮತ, ಮುಕ್ತ, ಪಾರದರ್ಶಕ ಚುನಾವಣೆಯನ್ನು ನಡೆಸಲು ಮಾಧ್ಯಮಗಳ, ಮಾಧ್ಯಮ ಪ್ರತಿನಿಧಿಗಳು ಸಹಕಾರ ನೀಡಬೇಕು” ಎಂದು ಅಪರ ಜಿಲ್ಲಾಧಿಕಾರಿ ಕೋರಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಸೇವಾ ಗೃಹರಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚುನಾವಣಾ ಆಯೋಗದ ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಯಾದ ಸಿ ಎನ್ ಶಂಕರ್ ರೆಡ್ಡಿ ಮಾತನಾಡಿ, ಚುನಾವಣೆ ನೀತಿ ಸಂಹಿತೆ ಅವಧಿಯಲ್ಲಿ ಮಾಧ್ಯಮಗಳ ಪಾತ್ರವನ್ನು ಮತ್ತು ಮಾಧ್ಯಮ ಪ್ರತಿನಿಧಿಗಳಿಗಿರುವ ಸೌಲಭ್ಯಗಳೇನು ಎನ್ನುವ ಎಲ್ಲ ವಿಚಾರಗಳನ್ನು ಪಿಪಿಟಿ ಮೂಲಕ ತಿಳಿಸಿಕೊಟ್ಟರು.

ಕಾರ್ಯಾಗಾರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎಂ ಜುಂಜಣ್ಣ, ಜಿಲ್ಲಾ ಉದ್ಯೋಗಾಧಿಕಾರಿ ಎಂ ಪ್ರಸಾದ್, ಚುನಾವಣಾ ತಹಶೀಲ್ದಾರ್ ಮುನಿಶಾಮಿರೆಡ್ಡಿ, ವಾರ್ತಾ ಸಹಾಯಕ ಎಂ ಆರ್ ಮಂಜುನಾಥ ಹಾಗೂ ಮಾಧ್ಯಮ ಪ್ರತಿನಿಧಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...