ಚಿಕ್ಕಬಳ್ಳಾಪುರ | ಪ್ರವಾದಿ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಶಾಂತಿ, ಸೌಹಾರ್ದತೆ ಸಂದೇಶ

Date:

ಪ್ರತಿ ಧರ್ಮವು ಶಾಂತಿ, ಸೌಹಾರ್ದತೆ ಸಂದೇಶವನ್ನು ಸಾರುತ್ತದೆಯಾದರೂ, ಕೆಲ ಕಿಡಿಗೇಡಿಗಳ ಪಿತೂರಿಗಳಿಂದ ಸಮಾಜದಲ್ಲಿ ಅಶಾಂತಿ ಉಂಟಾಗುತ್ತದೆ. ಅಂತಹವರ ಮಾತುಗಳಿಗೆ ಕಿವಿಗೊಡದೆ, ಎಲ್ಲರೂ ಒಗ್ಗಟ್ಟಾಗಿ ಶಾಂತಿಯ ಸಂದೇಶ ಸಾರಬೇಕು. ಪ್ರತಿ ಹಬ್ಬಗಳನ್ನು ಜಾತಿ-ಭೇದಭಾವ ಮರೆತು ಎಲ್ಲರೂ ಒಟ್ಟಾಗಿ ಆಚರಿಸುತ್ತಿದ್ದೇವೆ. ನಮ್ಮಲ್ಲಿ ವಿಷಬೀಜ ಬಿತ್ತಲು ಯತ್ನಿಸುವವರ ಮಾತು ಕೇಳದೆ, ನಾವೆಲ್ಲರೂ ಒಂದೇ ಎಂಬ ಭಾವನೆಯೊಂದಿಗೆ ಸಾಗಿದರೆ ಸಮಾನತೆಯ ಸಮಾಜ ನಿರ್ಮಾಣ ಸಾಧ್ಯವೆಂದು ಡಾ. ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ರಾಜ್ಯದಕ್ಷ ಎಂ ಎಂ ಭಾಷ ತಿಳಿಸಿದರು.

- Advertisement -

ಚಿಕ್ಕಬಳ್ಳಾಪುರದಲ್ಲಿ ಈದ್ ಮಿಲಾದ್ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಅಬ್ದುಲ್ ಕಲಾಂ ಫೌಂಡೇಶನ್ ಹಾಗೂ ಆಲ್ ಇಂಡಿಯಾ ಮಿಲಿ ಕೌನ್ಸಿಲ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಇಸ್ಲಾಂ ಧರ್ಮವೇ ಶಾಂತಿ, ಸೌಹಾರ್ದತೆ, ಮಾನವೀಯತೆ ಎಂಬ ಸಂದೇಶವನ್ನು ಸಾರುತ್ತದೆ. ಪ್ರವಾದಿ ಮುಹಮ್ಮದ್ ಅವರು ಸಮಾಜ ಪರಿವರ್ತನೆಗಾಗಿ ಸೌಮ್ಯದ ಮಾರ್ಗವನ್ನು ಅನುಸರಿಸಿ, ಎಲ್ಲೆಡೆ ಶಾಂತಿ ನೆಲಸಬೇಕು ಎಂಬುದೇ ಅವರ ಆಶಯವಾಗಿತ್ತು. ನಾವೂ ಕೂಡ ಅವರ ಹಾದಿಯಲ್ಲಿ ನಡೆಯಬೇಕು” ಎಂದು ಹೇಳಿದರು.

“1500ನೇ ಈದ್ ಮಿಲಾದ್ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿ ಶಾಂತಿ ಸಂದೇಶ ಸಾರಲಾಯಿಗಿದ್ದು, ದಯೆ, ಒಗ್ಗಟ್ಟು, ಪ್ರೀತಿ, ಬದ್ಧತೆ ಇಸ್ಲಾಂ ಧರ್ಮದ ಮೂಲ ತತ್ವಗಳಾಗಿದ್ದು, ಗಳಿಕೆಯ ಒಂದು ಭಾಗವನ್ನು ಬಡವರಿಗೆ ನೀಡುವಂತೆ ಇಸ್ಲಾಂ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಗಣೇಶ ವಿಸರ್ಜನೆ ದಿನ ಡಿಜೆ ಬಳಸಿದರೂ ಎಸ್‌ಪಿ ಮೌನ: ಸಾರ್ವಜನಿಕರ ಆಕ್ರೋಶ

“ನಿರ್ಗತಿಕರು ಹಾಗೂ ಅನಾಥರ ಜೀವನದಲ್ಲಿ ಬೆಳಕನ್ನು ತರುವಂತೆ, ಅವರನ್ನು ಉತ್ತಮ ಜೀವನ ಸಾಗಿಸಲು ಪ್ರೇರೇಪಿಸುವ ಧರ್ಮವೇ ಇಸ್ಲಾಂ” ಎಂದು ಹೇಳಿದರು.

ಈ ವೇಳೆ ಅಬ್ದುಲ್ ರೆಹಮಾನ್ ಸಾಬ್, ಸೈದ್ ಅಮಾನುಲ್ಲಾ,ರಾಜಶೇಖರ್, ಹಾಶಿಂ ಬನ್ನೂರು, ಅಲಿಪೂರ್ ಜರಾರ್ ಹುಸೇನ್, ಕಳವಾರ ಶ್ರೀಧರ್, ಇಬ್ರಾಹಿಂ, ತಬಕೀರ್, ಅಮ್ಜದ್, ಸಫೀರ್, ಅರ್ಬಾಜ್, ಅಬುಬಕರ್, ನವಾಜ಼್, ರಹಮತ್, ಆಲ್ತಾಫ್, ರೋಷನ್ ಮತ್ತು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...