ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ವಸ್ತುಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸಾರ್ವಜನಿಕರು ಮೂರು ದಿನಗಳ ಕಾಲ ನಡೆಯುವ ವಸ್ತುಪ್ರದರ್ಶನ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ನಗರ ಶಾಸಕ ಪ್ರದೀಪ್ ಈಶ್ವರ್ ಹೇಳಿದರು.
ಚಿಕ್ಕಬಳ್ಳಾಪುರ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕೆಎಸ್‌ಆರ್‌ಟಿಸಿ ಸಹಯೋಗದಲ್ಲಿ ಏರ್ಪಡಿಸಿರುವ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ವಸ್ತುಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
“ಸಾರ್ವಜನಿಕರು, ಪ್ರಯಾಣಿಕರು ಹೆಚ್ಚಿನ ಮಟ್ಟದಲ್ಲಿ ಈ ಕೇಂದ್ರಕ್ಕೆ ಭೇಟಿ ನೀಡಿ ಸರ್ಕಾರದ ಎಲ್ಲ ಯೋಜನೆಗಳ ಬಗ್ಗೆ ತಿಳಿದುಕೊಂಡು ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಒಂದೊತ್ತಿನ ಊಟಕ್ಕೂ ಪ್ರತಿದಿನ ಹೋರಾಟ ಮಾಡುವ ಕಡು ಬಡವರಿಗೆ ಪಂಚ ಗ್ಯಾರಂಟಿ ಯೋಜನೆಗಳು ವರದಾನವಾಗಿವೆ. ಜೊತೆಗೆ ಮಧ್ಯಮ ವರ್ಗದ ಜನರಿಗೂ ಕೂಡಾ ಉಪಯೋಗಕಾರಿಯಾಗಿವೆ” ಎಂದರು.
ಈ ಸುದ್ದಿ ಓದಿದ್ದೀರಾ? ಗದಗ | ಗ್ಯಾರಂಟಿಗಳು ಜನರನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕ್ರಮ: ಸಚಿವ ಎಚ್.ಕೆ ಪಾಟೀಲ
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಪ್ರಕಾಶ್ ಜಿ ಟಿ ನಿಟ್ಟಾಲಿ, ಕೆಎಸ್‌ಆರ್‌ಟಿಸಿ ಉಪವಿಭಾಗ ನಿಯಂತ್ರಣಾಧಿಕಾರಿ ಅಲ್ಲೂರಿ ಹಿಮವರ್ಧನ್ ನಾಯ್ಡು ಹಾಗೂ ಇತರೆ ಗಣ್ಯರು ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.