ಚಿಕ್ಕಬಳ್ಳಾಪುರ | ಸಾರ್ವಜನಿಕರು‌ ವಸ್ತುಪ್ರದರ್ಶನದ ಸದುಪಯೋಗ ಪಡೆದುಕೊಳ್ಳಬೇಕು: ಶಾಸಕ ಪ್ರದೀಪ್ ಈಶ್ವರ್

Date:

ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ವಸ್ತುಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸಾರ್ವಜನಿಕರು ಮೂರು ದಿನಗಳ ಕಾಲ ನಡೆಯುವ ವಸ್ತುಪ್ರದರ್ಶನ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ನಗರ ಶಾಸಕ ಪ್ರದೀಪ್ ಈಶ್ವರ್ ಹೇಳಿದರು.

- Advertisement -

‌ಚಿಕ್ಕಬಳ್ಳಾಪುರ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕೆಎಸ್‌ಆರ್‌ಟಿಸಿ ಸಹಯೋಗದಲ್ಲಿ ಏರ್ಪಡಿಸಿರುವ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ವಸ್ತುಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಸಾರ್ವಜನಿಕರು, ಪ್ರಯಾಣಿಕರು ಹೆಚ್ಚಿನ ಮಟ್ಟದಲ್ಲಿ ಈ ಕೇಂದ್ರಕ್ಕೆ ಭೇಟಿ ನೀಡಿ ಸರ್ಕಾರದ ಎಲ್ಲ ಯೋಜನೆಗಳ ಬಗ್ಗೆ ತಿಳಿದುಕೊಂಡು ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಒಂದೊತ್ತಿನ ಊಟಕ್ಕೂ ಪ್ರತಿದಿನ ಹೋರಾಟ ಮಾಡುವ ಕಡು ಬಡವರಿಗೆ ಪಂಚ ಗ್ಯಾರಂಟಿ ಯೋಜನೆಗಳು ವರದಾನವಾಗಿವೆ. ಜೊತೆಗೆ ಮಧ್ಯಮ ವರ್ಗದ ಜನರಿಗೂ ಕೂಡಾ ಉಪಯೋಗಕಾರಿಯಾಗಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ಗ್ಯಾರಂಟಿಗಳು ಜನರನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕ್ರಮ: ಸಚಿವ ಎಚ್.ಕೆ ಪಾಟೀಲ

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಪ್ರಕಾಶ್ ಜಿ ಟಿ ನಿಟ್ಟಾಲಿ, ಕೆಎಸ್‌ಆರ್‌ಟಿಸಿ ಉಪವಿಭಾಗ ನಿಯಂತ್ರಣಾಧಿಕಾರಿ ಅಲ್ಲೂರಿ ಹಿಮವರ್ಧನ್ ನಾಯ್ಡು ಹಾಗೂ ಇತರೆ ಗಣ್ಯರು ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...